ಸೋಮವಾರಪೇಟೆ,ಜೂ.16: ಇಲ್ಲಿನ ತಥಾಸ್ತು ಸಾತ್ವಿಕ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಮತ್ತು ಜಿಲ್ಲಾ ಆಸ್ಪತ್ರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ತಾ. 18ರಂದು ರಕ್ತದಾನಿಗಳ ದಿನಾಚರಣೆ ಹಾಗೂ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ರವೀಂದ್ರ ಹಾನಗಲ್ಲು ತಿಳಿಸಿದ್ದಾರೆ.

ತಾ. 18ರಂದು ಬೆಳಿಗ್ಗೆ 10.30ಕ್ಕೆ ಸ್ಥಳೀಯ ಸರ್ಕಾರಿ ಅಸ್ಪತ್ರೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಕರುಂಬಯ್ಯ ರಕ್ತದಾನದ ಮಹತ್ವದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.