ಮಡಿಕೇರಿ, ಜೂ. 16: ಕುಶಾಲನಗರ ಸಮೀಪದ ಮಾದಪಟ್ಟಣದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಾಂಕ್ರೀಟ್ ರಸ್ತೆಯನ್ನು ಇಂದು ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಖುದ್ದು ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭ ಗುತ್ತಿಗೆದಾರ ಮತ್ತು ಇಂಜಿನಿಯರ್‍ಗೆ ರಸ್ತೆಯ ಗುಣಮಟ್ಟ ಕಾಯ್ದುಕೊಂಡು ಕಾಮಗಾರಿ ಕಳಪೆಯಾಗದಂತೆ ನಿಗಾವಹಿಸುವಂತೆ ಅವರು ಸೂಚಿಸಿದರು. ಶಾಸಕರೊಂದಿಗೆ ಪಕ್ಷದ ಕಾರ್ಯಕರ್ತರು, ಜನಪ್ರತಿನಿಧಿಗಳು ಹಾಜರಿದ್ದು, ಕುಂದುಕೊರತೆಗಳ ಬಗ್ಗೆ ಗಮನ ಸೆಳೆದರು.