ಸೋಮವಾರಪೇಟೆ, ಜೂ. 17: ಆರ್ಟ್ ಆಫ್ ಲಿವಿಂಗ್ ವತಿಯಿಂದ ತಾ. 21ರಂದು ಸಮೀಪದ ಬೇಳೂರು ಬಾಣೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಸಂಚಾಲಕಿ ರಾಗಿಣಿ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 6 ಗಂಟೆಯಿಂದ 7.30 ರವರೆಗೆ ಕಾರ್ಯಕ್ರಮ ನಡೆಯಲಿದ್ದು, ಆರ್ಟ್ ಆಫ್ ಲಿವಿಂಗ್ನ ಶಿಕ್ಷಕ ದೀಪಕ್ ಉಪಾಧ್ಯ ಅವರು ಭಾಗವಹಿಸಲಿದ್ದಾರೆ. ನಂತರ ಕೊಡ್ಲಿಪೇಟೆ ಹಾಗೂ ತೋಳೂರುಶೆಟ್ಟಳ್ಳಿಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.