ಕುಶಾಲನಗರ, ಜೂ. 17: ಅಖಿಲ ಕರ್ನಾಟಕ ಮಕ್ಕಳ ಸಾಹಿತ್ಯ ಮತ್ತು ಸಾಂಸ್ಕøತಿಕ 9ನೇ ಸಮ್ಮೇಳನದಲ್ಲಿ ಹಾರಂಗಿಯ ನೃತ್ಯ ಕಲಾವಿದೆ ಎಂ.ಎನ್. ರಶ್ಮಿ ಅವರಿಗೆ ರಾಷ್ಟ್ರೀಯ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸುರ್ವೆ ಪ್ರತಿಷ್ಠಾನ ಟ್ರಸ್ಟ್ ಆಶ್ರಯದಲ್ಲಿ ವಿಶ್ವೇಶ್ವರಯ್ಯ ಪ್ರತಿಷ್ಠಾನದ ಬೆಳ್ಳಿಹಬ್ಬ ಅಂಗವಾಗಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭರತನಾಟ್ಯದಲ್ಲಿ ಸಾಧನೆಗಾಗಿ ರಶ್ಮಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸುರ್ವೆ ಪ್ರತಿಷ್ಠಾನ ಟ್ರಸ್ಟ್ ಅಧ್ಯಕ್ಷ ರಮೇಶ್ ಸುರ್ವೆ ಮತ್ತಿತರ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು.
ಪ್ರಶಸ್ತಿ ಪುರಸ್ಕøತ ರಶ್ಮಿ ಹಾರಂಗಿಯ ನಂದಕುಮಾರ್-ವನಜಾ ದಂಪತಿಗಳ ಪುತ್ರಿ. ಭಾರತಮಾತಾ ಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾರೆ. ಕುಶಾಲನಗರದ ಟೀಂ ಆ್ಯಟಿಟ್ಯೂಡ್ ಡ್ಯಾನ್ಸ್ ಸ್ಟುಡಿಯೋ ವಿದ್ಯಾರ್ಥಿನಿಯಾಗಿದ್ದು, ಕಿರಣ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.