ಮಡಿಕೇರಿ, ಜೂ. 17: ಕರ್ನಾಟಕ ಲೋಕಾಯುಕ್ತ ಮಡಿಕೇರಿ ವಿಭಾಗದ ಅಧಿಕಾರಿಗಳು ತಾಲೂಕುವಾರು ಭೇಟಿ ನೀಡಲಿದ್ದಾರೆ. ತಾ. 18 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆ ವರೆಗೆ ಸೋಮವಾರಪೆಟೆ ತಾಲೂಕು ಕಚೇರಿ ಆವರಣ, ತಾ. 19 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ವೀರಾಜಪೇಟೆ ತಾಲೂಕು ಕಚೇರಿ ಆವರಣ ಹಾಗೂ ತಾ. 20 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆ ವರೆಗೆ ಮಡಿಕೇರಿ ತಾಲೂಕು ಕಚೇರಿ ಆವರಣದಲ್ಲಿ ಸಾರ್ವಜನಿಕರಿಂದ ದೂರು ಸ್ವೀಕರಿಸಲಿದ್ದಾರೆ.

ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಾಗುವದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪ್ರಪತ್ರದಲ್ಲಿ ನೀಡಬಹುದಾಗಿದೆ. ಈ ಅವಕಾಶ ಸದುಪಯೋಗಪಡಿಸಿಕೊಳ್ಳಲು ಸಾರ್ವಜನಿಕರಲ್ಲಿ ಕೋರಿದೆ.

ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಠಾಣೆ, ಗೌಳಿಬೀದಿ ಮಡಿಕೇರಿ. ದೂರವಾಣಿ ಸಂಖ್ಯೆ 08272-220797 ಇಲ್ಲಿಗೆ ಸಂಪರ್ಕಿಸಬಹುದು. ಸಾರ್ವಜನಿಕರು ಕರ್ತವ್ಯ ಲೋಪವೆಸಗುವ ಸರ್ಕಾರಿ ನೌಕರರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ತೆಗೆದುಕೊಳ್ಳಲು ಈ ಅವಕಾಶವನ್ನು ಉಪಯೋಗಪಡಿಸಿಕೊಳ್ಳುವಂತೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.