ಗೋಣಿಕೊಪ್ಪಲು ಅತ್ತೂರು ನಿವಾಸಿ ಚೆಪ್ಪುಡಿರ ತಮ್ಮು ದೇವಯ್ಯ (69) ಅವರು ತಾ. 18 ರಂದು ನಿಧನರಾದರು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮೃತರು ಗೋಣಿಕೊಪ್ಪಲು ಶ್ರೀ ಉಮಾಮಹೇಶ್ವರಿ ದೇವಸ್ಥಾನ ಟ್ರಸ್ಟ್ನ ಅಧ್ಯಕ್ಷರಾಗಿ ಕಳೆದ 35 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಅಂತ್ಯಕ್ರಿಯೆ ಅತ್ತೂರುವಿನಲ್ಲಿ ನೆರವೇರಿತು.
ಸಂತಾಪ: ಚೆಪ್ಪುಡೀರ ಟಿ.ದೇವಯ್ಯ (ತಮ್ಮು) ಅವರ ನಿಧನದ ಹಿನ್ನಲೆಯಲ್ಲಿ ಗೋಣಿಕೊಪ್ಪ ಪಟ್ಟಣದಲ್ಲಿ ಮಧ್ಯಾಹ್ನ 2 ರಿಂದ 3 ಗಂಟೆಯವರೆಗೆ ಅಂಗಡಿ ಮುಂಗಟ್ಟುಗಳು ಮುಚ್ಚುವ ಮೂಲಕ ಸಂತಾಪ ವ್ಯಕ್ತಪಡಿಸಲಾಯಿತು. ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಒಂದು ಗಂಟೆಯ ಬಂದ್ ನಡೆಸಲು ಸೂಚನೆ ನೀಡಿತ್ತು.
ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಮೇರಿಯಂಡ ಸಂಕೇತ್ ಪೂವಯ್ಯ, ಗೋಣಿಕೊಪ್ಪಲು ಛೇಂಬರ್ಸ್ ಆಫ್ ಕಾಮರ್ಸ್ನ ಅಧ್ಯಕ್ಷರಾದ ಸುನೀಲ್ ಮಾದಪ್ಪ, ನಗರ ಕಾಂಗ್ರೆಸ್ ಮಾಜಿ ಅಧ್ಯಕ್ಷ ಉದ್ಯಮಿ ಅಜಿತ್ ಅಯ್ಯಪ್ಪ, ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಸಂತಾಪ ವ್ಯಕ್ತಪಡಿಸಿದ್ದಾರೆ.