ಮಡಿಕೇರಿ, ಜೂ. 18: ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಜೂನ್ 19 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮಾನ್ಯ ಸಚಿವರು ಜೂನ್ 19 ರಂದು ಸಂಜೆ 6 ಗಂಟೆಗೆ ಮಡಿಕೇರಿಗೆ ಆಗಮಿಸಲಿದ್ದಾರೆ. ನಂತರ ಇತ್ತೀಚಿನ ಭಾರಿ ಮಳೆ ಮತ್ತು ನೆರೆ ಹಾವಳಿಯಿಂದ ಕೊಡಗು ಜಿಲ್ಲೆಯಲ್ಲಿ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಬಗ್ಗೆ ಚರ್ಚೆ ಹಾಗೂ ತುರ್ತು ರಿಪೇರಿ ಕೈಗೊಂಡಿರುವ ಬಗ್ಗೆ ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಸಚಿವರ ವಿಶೇಷಾಧಿಕಾರಿ ಎನ್.ನರೇಂದ್ರ ಅವರು ತಿಳಿಸಿದ್ದಾರೆ.