ಮಡಿಕೇರಿ, ಜೂ. 19: ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ ತಾ. 21 ರಿಂದ 28 ರವರೆಗೆ ನಡೆಯಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಮಂಜುಳಾ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ 5 ಪರೀಕ್ಷಾ ಕೆಂದ್ರಗಳನ್ನು ಸ್ಥಾಪಿಸಲಾಗಿದ್ದು, ಒಟ್ಟು 1,493 ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಬರೆಯಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 366, ಸಂತ ಮೈಕಲ ಪ್ರೌಢಶಾಲೆಯಲ್ಲಿ 79, ಸೋಮವಾರಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 306 ವಿದ್ಯಾರ್ಥಿಗಳು, ಕುಶಾಲನಗರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 420 ವಿದ್ಯಾರ್ಥಿಗಳು ಮತ್ತು ವೀರಾಜಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 322 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.