ಮಡಿಕೇರಿ, ಜೂ.19 : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಕರ್ನಾಟಕ ಅರೆಭಾಷೆ ಸಂಸ್ಕøತಿ ಹಾಗೂ ಸಾಹಿತ್ಯ ಅಕಾಡೆಮಿ, ಕೊಡಗು ಜಿಲ್ಲಾ ಲೇಖಕ ಹಾಗೂ ಕಲಾವಿದರ ಬಳಗದ ಸಂಯುಕ್ತಾಶ್ರಯದಲ್ಲಿ ಜೂ.24 ರಂದು ನಗರದಲ್ಲಿ ‘ಸಾಹಿತ್ಯ ಶಿಬಿರ ಹಾಗೂ ಸಂವಾದ’ ಕಾರ್ಯಕ್ರಮ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಪೆಮ್ಮಂಡ ಕೆ. ಪೊನ್ನಪ್ಪ, ಕಳೆದ ಸಾಲಿನಲ್ಲಿ ಕೊಡವ ಸಾಹಿತ್ಯ ಅಕಾಡೆಮಿಯ ನೂತನ ಆಡಳಿತ ಮಂಡಳಿ ರಚನೆಯಾದ ಬಳಿಕ ಕೊಡವ ಸಾಹಿತ್ಯ, ಸಂಸ್ಕøತಿಗಳ ಬೆಳವಣಿಗೆಗೆ ಪೂರಕವಾಗಿ ಲಭ್ಯ 5 ಲಕ್ಷ ಅನುದಾನದಲ್ಲಿ ತಜ್ಞರೊಂದಿಗಿನ ಸಂವಾದ, ಕೊಡಗಿನ ಗಾಂಧಿ ಪಂದ್ಯಂಡ ಬೆಳ್ಯಪ್ಪ ಅವರ ಕುರಿತಾದ ಕಾರ್ಯಕ್ರಮ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಇದೀಗ ಜಿಲ್ಲೆಯ ಸಾಹಿತಿಗಳನ್ನು, ಸಾಹಿತ್ಯಾಸಕ್ತರನ್ನು ಒಂದೆಡೆ ಸೇರಿಸುವ ಮೂಲಕ ಸಾಹಿತ್ಯ ಶಿಬಿರ ಮತ್ತು ಸಂವಾದವನ್ನು ಆಯೋಜಿಸುತ್ತಿರು ವದಾಗಿ ತಿಳಿಸಿದರು.

ಕೊಡವ ಸಾಹಿತ್ಯ ಅಕಾಡೆಮಿ ಸದಸ್ಯರು ಹಾಗೂ ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಪ್ರಧಾನ ಕಾರ್ಯದರ್ಶಿ ಐತಿಚಂಡ ರಮೇಶ್ ಉತ್ತಪ್ಪ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಜೂ.24 ರಂದು ಬೆಳಿಗ್ಗೆ 10.15 ಗಂಟೆಗೆ ನಗರದ ದೇವರಾಜ ಅರಸು ಭವನದಲ್ಲಿ ಸಾಹಿತ್ಯ ಶಿಬಿರ ಮತ್ತು ಸಂವಾದ ನಡೆಯಲಿದ್ದು, ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್ ಉದ್ಘಾಟಿಸಲಿದ್ದಾರೆ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಪೆಮ್ಮಂಡ ಕೆ. ಪೊನ್ನಪ್ಪ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪಿ.ಸಿ. ಜಯರಾಮ, ಸಾಹಿತಿಗಳಾದ ಅಬ್ದುಲ್ ರಶೀದ್ ಮತ್ತು ಎಂ.ಎಸ್. ಶಶಿಕಲಾ ಗೌಡ ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದರು.

ಸಾಹಿತ್ಯ ಶಿಬಿರ- ಉದ್ಘಾಟನಾ ಕಾರ್ಯಕ್ರಮದ ಬಳಿಕ ಬೆಳಿಗ್ಗೆ 11 ಗಂಟೆಗೆ ಜಿಲ್ಲೆಯ ಸಾಹಿತಿಗಳು, ಕವಿಗಳು ಮತ್ತು ಸಾಹಿತ್ಯಾಸಕ್ತರೊಂದಿಗೆ ವಿಚಾರ ವಿನಿಮಯ ಕಾರ್ಯಕ್ರಮ ನಡೆಯಲಿದೆ. ಇದರಲ್ಲಿ ಸಾಹಿತಿ ಅಬ್ದುಲ್ ರಶೀದ್ ಅವರು ‘ಸಾಹಿತ್ಯದ ಪ್ರಸ್ತುತತೆ’ ಕುರಿತು, ಎಂ.ಎಸ್. ಶಶಿಕಲಾ ಗೌಡ ‘ಸಾಹಿತ್ಯದಲ್ಲಿ ಬದಲಾವಣೆ’, ಬಿ.ಎ. ಷಂಶುದ್ದೀನ್ ‘ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ’, ನಾಗೇಶ್ ಕಾಲೂರು ‘ ಕೊಡವ ಸಾಹಿತ್ಯ’, ಬಿ.ಆರ್. ಜೋಯಪ್ಪ ಅವರು ‘ಅರೆಭಾಷೆ ಸಾಹಿತ್ಯ’ದ ಕುರಿತು ವಿಷಯ ಮಂಡಿಸಲಿದ್ದಾರೆ.ಮಧ್ಯಾಹ್ನ 2 ಗಂಟೆಗೆ ಸಂವಾದ ಕಾರ್ಯಕ್ರಮ ನಡೆಯಲಿದೆಯೆಂದು ತಿಳಿಸಿದರು.

ಸಮಾರೋಪ ಸಮಾರಂಭ ಮಧ್ಯಾಹ್ನ 2.30 ಗಂಟೆಗೆ ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪಿ.ಸಿ. ಜಯರಾಮ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಅತಿಥಿಗಳಾಗಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಪೆಮ್ಮಂಡ ಪೊನ್ನಪ್ಪ, ಸಾಹಿತಿಗಳಾದ ಕೆ.ಆರ್.ವಿದ್ಯಾಧರ, ಅಬ್ದುಲ್ ರಶೀದ್, ಎಂ.ಎಸ್.ಶಶಿಕಲಾ ಗೌಡ, ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷರಾದ ಎಂ.ಪಿ. ಕೇಶವ ಕಾಮತ್ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಳ್ಳು ವವರು ಮುಂಚಿತವಾಗಿ ಸಂಚಾಲಕರು ಗಳಾದ ಐತಿಚಂಡ ರಮೇಶ್ ಉತ್ತಪ್ಪ ಮೊ. 9483049005, ಕಡ್ಲೇರ ತುಳಸಿ ಮೋಹನ್ ಮೊ.9483110940, ಬಿ.ಎ. ಷಂಶುದ್ದೀನ್ ಮೊ. 9480083264 ಅವರಿಗೆ ಮಾಹಿತಿ ನಿಡಬೇಕೆಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷರಾದ ಎಂ.ಪಿ. ಕೇಶವ ಕಾಮತ್, ಕರ್ನಾಟಕ ಅರೆಭಾಷೆ ಸಂಸ್ಕøತಿ ಹಾಗೂ ಸಾಹಿತ್ಯ ಅಕಾಡೆಮಿ ಸದಸ್ಯರಾದ ಬಾರಿಯಂಡ ಜೋಯಪ್ಪ, ಕಡ್ಲೇರ ತುಳಸಿ ಮೋಹನ್ ಹಾಗೂ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಸದಸ್ಯರಾದ ತೋರೆರ ಮುದ್ದಯ್ಯ ಉಪಸ್ಥಿತರಿದ್ದರು.