ನಾಪೆÉÇೀಕ್ಲು, ಜೂ. 20: ನಾಪೆÇೀಕ್ಲು ಸಮೀಪದ ಎಮ್ಮೆಮಾಡು ದರ್ಗಾಕ್ಕೆ ಹೋಗುವ ರಸ್ತೆಯು ತೀರ ಹದಗೆಟ್ಟಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ನಡೆಯಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಸಂಬಂಧಪಟ್ಟವರು ಈ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳದಿದ್ದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಗುವದು ಎಂದು ಗ್ರಾಮಸ್ಥರಾದ ಸಿ.ಹೆಚ್. ಮೈದು, ಸಿ.ಎ. ಹನೀಫ್, ಸಿ.ಹೆಚ್. ರಿಯಾಜ್, ಅಬ್ದುಲ್ ರಷೀದ್ ಎಚ್ಚರಿಸಿದ್ದಾರೆ.
ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಸ್ಲಿಂ ಧಾರ್ಮಿಕ ಕೇಂದ್ರಗಳಲ್ಲಿ ಕೊಡಗು ಜಿಲ್ಲೆಯ ಎಮ್ಮೆಮಾಡು ಉನ್ನತ ಸ್ಥಾನವನ್ನು ಪಡೆದಿದೆ. ಈ ಧಾರ್ಮಿಕ ಕೇಂದ್ರಕ್ಕೆ ಸಾಗುವ ರಸ್ತೆಯು ತೀರಾ ಹದಗೆಟ್ಟಿದೆ. ಇದರಿಂದ ದರ್ಗಾಕ್ಕೆ ಬರುವ ಜನರಿಗೆ ತೊಂದರೆಯಾಗಿದೆ ಎಂದರು.
ಮಾರ್ಚ್ ತಿಂಗಳಲ್ಲಿ ನಡೆಯುವ ಉರೂಸ್ ಕಾರ್ಯಕ್ರಮಕ್ಕೆ ಆಗಮಿಸುವ ರಾಜ್ಯದ ಮಂತ್ರಿಗಳು, ಶಾಸಕರು ಕೋಟಿ, ಕೋಟಿ ಕಾಮಗಾರಿಯ ಪೆÇಳ್ಳು ಭರವಸೆ ನೀಡುತ್ತಾ ಬರುತ್ತಿರುವದು ಬಿಟ್ಟರೆ ಇಲ್ಲಿಯವರೆಗೆ ರಸ್ತೆ ಅಭಿವೃದ್ಧಿಯಾಗಿಲ್ಲ ಎಂದು ದೂರಿದರು. ಗುಂಡಿ ಮುಚ್ಚುವ ಕಾಮಗಾರಿಗೆ ಈಗಾಗಲೇ ಹಣ ಬಿಡುಗಡೆಗೊಂಡಿದೆ ಎಂದು ಹೇಳಲಾಗುತ್ತಿದೆ. ಆದರೂ ಯಾವದೇ ದುರಸ್ತಿ ಕಾರ್ಯ ನಡೆದಿಲ್ಲ ಎಂದು ಹೇಳಿದ ಅವರು, ಈ ಬಗ್ಗೆ ಲೋಕೊಪಯೋಗಿ ಇಲಾಖೆಗೆ ಮನವಿ ಸಲ್ಲಿಸಲಾಗುವದು ಎಂದು ತಿಳಿಸಿದರು.