ಮಡಿಕೇರಿ, ಜೂ. 20: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ವತಿಯಿಂದ ನಾಲ್ಕನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಜೂನ್ 21 ರಂದು ಬೆಳಗ್ಗೆ 6.50 ಗಂಟೆಗೆ ನಗರದ ಮೈತ್ರಿಹಾಲ್‍ನಲ್ಲಿ ನಡೆಯಲಿದೆ.

ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಅಧ್ಯಕ್ಷ ಬಿ.ಎ.ಹರೀಶ್, ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷ ಟಿ.ಪಿ.ರಮೇಶ್, ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿ.ಪಂ. ಸಿಇಒ ಇತರರು ಪಾಲ್ಗೊಳ್ಳಲಿದ್ದಾರೆ.