ಮಡಿಕೇರಿ, ಜೂ. 21: ಪ್ರಸಕ್ತ (2018-19) ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ 4 ವರ್ಷದ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಉಚಿತ ಊಟ, ವಸತಿ, ಶಿಕ್ಷಣ ಮತ್ತು ತರಬೇತಿ ಭತ್ಯೆಯೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನೀಡಲಾಗುವದು. ಸವಿತ ಸಮಾಜದ ಆಸಕ್ತ ವಿದ್ಯಾರ್ಥಿ ಗಳು ಅರ್ಜಿ ನಮೂನೆಯನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು ತಾ. 30 ರೊಳಗೆ ಕಚೇರಿಗೆ ಸಲ್ಲಿಸುವದು.
ಹೆಚ್ಚಿನ ವಿವರಗಳಿಗೆ ಇಲಾಖಾ ವೆಬ್ಸೈಟ್: ತಿತಿತಿ.bಚಿಛಿಞತಿಚಿಡಿಜ ಛಿಟಚಿsses.ಞಚಿಡಿ.ಟಿiಛಿ.iಟಿ ನೋಡುವದು. ಅಥವಾ ನಗರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ದೇವರಾಜು ಅರಸು ಭವನ, ಕಚೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08272-225628 ಮಾಹಿತಿ ಪಡೆಯಬಹುದಾ ಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮಾಯಾದೇವಿ ಗಲಗಲಿ ತಿಳಿಸಿದ್ದಾರೆ.