ಮಡಿಕೇರಿ, ಜೂ. 21: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆಗೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ಫಸಲು ಭೀಮಾ ಯೋಜನೆ ಮತ್ತು ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಹೆಸರು ನೋಂದಾಯಿಸಲು ತಾ. 30 ಕಡೆ ದಿನವಾಗಿದೆ. ಆದ್ದರಿಂದ ಜಿಲ್ಲೆಯ ಎಲ್ಲಾ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಹೆಸರು ನೋಂದಾಯಿಸುವಂತೆ ಕೊಡಗು ಜಿಲ್ಲಾ ಕೋಆಪರೇಟಿವ್ ಕೇಂದ್ರ ಬ್ಯಾಂಕ್‍ನ(ಡಿಸಿಸಿ ಬ್ಯಾಂಕ್) ಸಿಇಓ ಕೋರಿದ್ದಾರೆ.

ಕೊಡಗು ಜಿಲ್ಲೆಯ ಸಹಕಾರ ಬ್ಯಾಂಕಿನ ಶಾಖೆಗಳು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ತೋಟಗಾರಿಕಾ ಮತ್ತು ಕೃಷಿ ಇಲಾಖೆಯ ಕಚೇರಿಗಳಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಡಿ.ಸಿ.ಸಿ. ಬ್ಯಾಂಕಿನ ಸಿಇಓ ತಿಳಿಸಿದ್ದಾರೆ.