ಮಡಿಕೇರಿ, ಜೂ. 23: ಜಿಲ್ಲೆಯ ವಿವಿಧೆಡೆಗಳಲ್ಲಿ ಜರುಗಿದ ಯೋಗ ದಿನಾಚರಣೆಯ ಸಂಕ್ಷಿಪ್ತ ವಿವರ.ಶನಿವಾರಸಂತೆ-ಕೊಡ್ಲಿಪೇಟೆ: ಶನಿವಾರಸಂತೆ ಭಾರತಿ ಪದವಿಪೂರ್ವ ಕಾಲೇಜಿನಲ್ಲಿ ಯೋಗ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸಾಮೂಹಿಕವಾಗಿ ಯೋಗ ಮಾಡುವ ಮೂಲಕ ಆಚರಿಸಿದರು ಪದವಿಪೂರ್ವ ಕಾಲೇಜು ಪ್ರಾಂಶುಪಾಲ ರವಿಕುಮಾರ್, ಪ್ರೌಢಶಾಲಾ ಮುಖ್ಯ ಶಿಕ್ಷಕ ನರಸಿಂಹಮೂರ್ತಿ ಮುಂತಾದವರಿದ್ದರು.
ಆಲೂರು-ಸಿದ್ದಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಯೋಗ ದಿನವನ್ನು ಆಚರಿಸಲಾಯಿತು. 6ನೇ ತರಗತಿಯಿಂದ ಹತ್ತನೆ ತರಗತಿವರೆಗಿನ ವಿದ್ಯಾರ್ಥಿಗಳು ಸೇರಿದಂತೆ ಶಿಕ್ಷಕರು ಹಾಗೂ ವಸತಿ ಶಾಲೆಯ ಸಿಬ್ಬಂದಿಗಳು ಸಾಮೂಹಿಕವಾಗಿ ಯೋಗಾಭ್ಯಾಸ ಮಾಡುವ ಮೂಲಕ ಆಚರಿಸಿದರು. ಯೋಗವನ್ನು ಶಾಲೆಯ ದೈಹಿಕ ಶಿಕ್ಷಕ ಅಲೋಕ್ ಅಭ್ಯಾಸ ಮಾಡಿಸಿದರು. ಯೋಗದ ಮಹತ್ವದ ಬಗ್ಗೆ ವಸತಿ ಶಾಲಾ ಪ್ರಾಂಶುಪಾಲೆ ಭಾರತಿ ಮಾಹಿತಿ ನೀಡಿದರು.
ಮಾದರಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳು ಯೋಗ ದಿನಾಚರಣೆಯನ್ನು ಆಚರಿಸಿದರು.
ಮುಳ್ಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ದಿನಾಚರಣೆಯನ್ನು ಆಚರಿಸಿದರು. ಈ ಸಂದರ್ಭ ಶಾಲಾ ಸಹ ಶಿಕ್ಷಕ ಸತೀಶ್ ವಿದ್ಯಾರ್ಥಿಗಳಿಗೆ ಯೋಗಭ್ಯಾಸ ಮಾಡಿಸಿದರು. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕ ಮಂಜುನಾಥ್ ಇದ್ದರು.
ಬೆಸೂರು, ನ್ಯಾಯದಳ್ಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ದೈಹಿಕ ಶಿಕ್ಷಕಿ ಕವಿತ ಯೋಗಾಭ್ಯಾಸ ಮಾಡಿಸಿದರು ಈ ಸಂದರ್ಭ ಮುಖ್ಯ ಶಿಕ್ಷಕಿ ಮಂಜುಳಮಣಿ ಹಾಗೂ ಸಹ ಶಿಕ್ಷಕರು ಹಾಜರಿದ್ದರು.
ಶನಿವಾರಸಂತೆ ತ್ಯಾಗರಾಜ ಕಾಲೋನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ದಿನದ ಮಹತ್ವದ ಕುರಿತು ಶಾಲೆಯ ಮುಖ್ಯ ಶಿಕ್ಷಕಿ ಕಲ್ಪನ ಮಾಹಿತಿ ನೀಡಿದರು. ನಂತರ ಸಾಮೂಹಿಕವಾಗಿ ಯೋಗಾಭ್ಯಾಸ ಮಾಡಲಾಯಿತು.ವೀರಾಜಪೇಟೆ: 4ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ವೀರಾಜಪೇಟೆಯ ಕಾವೇರಿ ಶಾಲೆಯಲ್ಲಿ ಯೋಗ ಶಿಕ್ಷಕ ವಿ.ಟಿ. ಶ್ರೀನಿವಾಸ್ ನೇತೃತ್ವದಲ್ಲಿ ಯೋಗ ದಿನಾಚರಣೆ ಜರುಗಿತು. ಶಾಲಾ ಶಿಕ್ಷಕರು ಹಾಗೂ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಯೋಗಾಸನದಿಂದ ರೋಗ ಮುಕ್ತ, ಜೀವನ ಸಾಧ್ಯ ಎಂದು ಯೋಗ ಶಿಕ್ಷಣದ ಮಹತ್ವ ಬಗ್ಗೆ ವಿದ್ಯಾರ್ಥಿಗಳಿಗೆ ತಿಳುವಳಿಕೆ ನೀಡಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರು, ಮುಖ್ಯ ಶಿಕ್ಷಕಿಯರು, ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಆಲೂರು-ಸಿದ್ದಾಪುರ: ಯೋಗ, ಧ್ಯಾನ ಹಾಗೂ ಪ್ರಾಣಯಾಮ ಅಭ್ಯಾಸದಿಂದ ವ್ಯಕ್ತಿಯ ಯೋಗ್ಯತೆ ಹಾಗೂ ವ್ಯಕ್ತಿತ್ವ ಅಭಿವೃದ್ಧಿ ಹೊಂದುತ್ತದೆ ಎಂದು ಸೋಮವಾರಪೇಟೆಯ ಯೋಗ ಗುರು ದೀಪಕ್ ಉಪಧ್ಯಾಯ ಅಭಿಪ್ರಾಯಪಟ್ಟರು. ಕೊಡ್ಲಿಪೇಟೆ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಕೊಡ್ಲಿಪೇಟೆ ಕ್ಲಸ್ಟರ್ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಕೊಡ್ಲಿಪೇಟೆ ಕ್ಲಸ್ಟರ್ ವ್ಯಾಪ್ತಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ವಿಶ್ವ ಯೋಗ ದಿನಾಚರಣೆಯಲ್ಲಿ ಯೋಗದ ಮಹತ್ವ ಕುರಿತು ಮಾಹಿತಿ ನೀಡಿದರು.
ಯೋಗ, ವ್ಯಾಯಾಮ ಹಾಗೂ ಧ್ಯಾನ ಅಭ್ಯಾಸದಿಂದ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಸುತ್ತದೆ. ಯೋಗ, ಪ್ರಾಣಾಯಾಮ ಹಾಗೂ ಧ್ಯಾನ ಮಾಡುವ ವ್ಯಕ್ತಿಯ ಯೋಗ್ಯತೆ ಹೆಚ್ಚಾಗುತ್ತದೆ ಎಂದರು.
ಕೊಡ್ಲಿಪೇಟೆ ವೀರಶೈವ ಸಮಾಜದ ಅಧ್ಯಕ್ಷ ಯತೀಶ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರು ಯೋಗವನ್ನು ದಿನಾಚರಣೆಯನ್ನಾಗಿ ಘೋಷಣೆ ಮಾಡಿರುವದ್ದರಿಂದ ಪ್ರತಿಯೊಬ್ಬರೂ ಯೋಗಾಭ್ಯಾಸಕ್ಕೆ ಆದ್ಯತೆ ನೀಡುತ್ತಿದ್ದಾರೆ. ಈ ದಿಸೆಯಲ್ಲಿ ಯೋಗಾಭ್ಯಾಸದಿಂದ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುತ್ತಿದ್ದಾರೆ ಎಂದರು.
ಕೊಡ್ಲಿಪೇಟೆ ಗ್ರಾ.ಪಂ. ಅಧ್ಯಕ್ಷೆ ರೋಹಿಣಿ ಮಾತನಾಡಿ, ಪ್ರತಿಯೊಬ್ಬರೂ ಯೋಗ ಮತ್ತು ವ್ಯಾಯಾಮ ಹೆಚ್ಚಿನ ಮಹತ್ವವನ್ನು ನೀಡಬೇಕು. ಮಾನಸಿಕ ಜಂಜಾಟವನ್ನು ದೂರಮಾಡಲು ಯೋಗಭ್ಯಾಸ ಪೂರಕಶಕ್ತಿಯಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲರೂ ಯೋಗಾಭ್ಯಾಸ ಮಾಡುವಂತೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ದೊಡ್ಡಕೊಡ್ಲಿ ಸ.ಪ್ರಾ. ಶಾಲಾ ಎಸ್ಡಿಎಂಸಿ ಅಧ್ಯಕ್ಷ ನಾಗೇಶ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಸೋಮವಾರಪೇಟೆ ಯೋಗ ಗುರು ರಾಗಿಣಿ, ಯೋಗ ಸಂಸ್ಥೆಯ ವಿಜಯ್ ಹಾನಗಲ್, ಕೊಡ್ಲಿಪೇಟೆ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಸುರೇಶ್, ಸೋಮವಾರಪೇಟೆ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್, ಕೊಡ್ಲಿಪೇಟೆ ಸ.ಮಾ. ಪ್ರಾಥಮಿಕ ಶಾಲಾ ಶಿಕ್ಷಕ ನಟರಾಜ್, ಶಿಕ್ಷಕರಾದ ಫಯಾಜ್ ಮುಂತಾದವರಿದ್ದರು.
ಯೋಗಭ್ಯಾಸದಲ್ಲಿ ಕೊಡ್ಲಿಪೇಟೆ ಕ್ಲಸ್ಟರ್ ವ್ಯಾಪ್ತಿಯ ವಿವಿಧ 5 ಶಾಲೆಗಳಿಂದ ಬಂದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಿದರು.
ಸುಂಟಿಕೊಪ್ಪ: ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಡಿ. ಚೆನ್ನಮ್ಮ ಪದವಿಪೂರ್ವ ಕಾಲೇಜು ಹಾಗೂ ಪ್ರೌಢಶಾಲಾ ಮಕ್ಕಳಿಗೆ ಯೋಗಭ್ಯಾಸವನ್ನು ನೀಡಲಾಯಿತು.
ವಿಶ್ವ ಯೋಗ ದಿನಾಚರಣೆ ಉದ್ದೇಶಿಸಿ ಚೆನ್ನಮ್ಮ ಜೂನಿಯರ್ ಕಾಲೇಜು ದೈಹಿಕ ಶಿಕ್ಷಣ ಶಿಕ್ಷಕ ಪಾಲಾಕ್ಷ ಸಲಹೆ ನೀಡಿದರು. ಶಿಕ್ಷಕಿ ಅಶ್ವಿನಿ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಯೋಗಾಭ್ಯಾಸ ಮಾಡಿಸಿದರು.
ಕಾಲೇಜಿನ ಪ್ರಬಾರ ಪ್ರಾಂಶುಪಾಲ ಸಿ.ಜಿ. ಮಂದಪ್ಪ, ಮುಖ್ಯೋಪಾಧ್ಯಾಯಿನಿ ರೇವತಿ, ಎನ್ಸಿಸಿ ಅಧಿಕಾರಿ ರಾಜಸುಂದರಂ ಭೋದÀಕ, ಭೋದಕಿಯರು, ಭೋದಕೇತರರು ಇದ್ದರು.
ಚೆಟ್ಟಳ್ಳಿ: ಚೆಟ್ಟಳ್ಳಿ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಆಡಳಿತ ಮಂಡಳಿಯ ಸದಸ್ಯರೂ, ಜಾಗ ದಾನಿಗಳೂ ಆದ ಬಟ್ಟೀರ ಕಾಳಪ್ಪ ಉದ್ಘಾಟಿಸಿದರು. ಯೋಗ ದಿನಾಚರಣೆ ಹಾಗೂ ಯೋಗದ ಮಹತ್ವವನ್ನು ಕುರಿತು ಶಾಲಾ ದೈಹಿಕ ಶಿಕ್ಷಕ ಪಿ.ಎಸ್. ಮಾಚಯ್ಯ ತಿಳಿಸಿದರು. ಶಾಲಾ ವಿದ್ಯಾರ್ಥಿಗಳಿಂದ ಸಾಮೂಹಿಕವಾಗಿ ಯೋಗಾಸನಗಳನ್ನು ಮಾಡಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಕೆ. ತಿಲಕ ಸೇರಿದಂತೆ ಶಿಕ್ಷಕ ವೃಂದದವರು ಭಾಗವಹಿಸಿದ್ದರು.ಪಾಲಿಬೆಟ್ಟ: ಯೋಗ ಆರೋಗ್ಯವಂತ ಸಮಾಜವನ್ನು ನಿರ್ಮಿಸಲು ಸಹಕಾರಿಯಾಗುತ್ತದೆಂದು ಸಿದ್ದಾಪುರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಜಿ.ಕೆ. ಸುಬ್ರಮಣಿ ಅಭಿಪ್ರಾಯ ವ್ಯಕ್ತಪಡಿಸಿದರು.
ಪಾಲಿಬೆಟ್ಟ ಸರಕಾರಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪುಲಿಯಂಡ ಬೋಪಣ್ಣ, ಕೊಡಗು ವಿದ್ಯಾನಿಧಿಯ ಅಧ್ಯಕ್ಷ ಕೆ.ಪಿ. ಉತ್ತಪ್ಪ, ಕಾಲೇಜಿನ ಪ್ರಾಚಾರ್ಯರಾದ ಡಾ. ಕೆ.ಎಂ. ಭವಾನಿ, ಸಿದ್ದಾಪುರ ಪೊಲೀಸ್ ಠಾಣೆಯ ಎ.ಎಸ್.ಐ. ಕೆ.ಜಿ. ವಸಂತ ಕುಮಾರ್, ಯೋಗ ಪಟುಗಳಾದ ಗುರುರಾಜ್ ಭಟ್, ವಿನೋದ್ ಮತ್ತು ಅನಿಲ್ ಉಪಸ್ಥಿತರಿದ್ದರು.
ಕುಶಾಲನಗರ: ಕುಶಾಲನಗರದ ಜಿ.ಎಂ.ಪಿ. ಶಾಲಾ ಮೈದಾನದಲ್ಲಿ ನಗರದ ವಿವಿಧೆಡೆಯ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳಿಗೆ ಸಾಮೂಹಿಕ ಯೋಗ ಕಾರ್ಯಕ್ರಮ ನಡೆಯಿತು. ದೈಹಿಕ ಶಿಕ್ಷಣ ಶಿಕ್ಷಕರುಗಳಾದ ಸದಾಶಿವಯ್ಯ ಎಸ್ ಪಲ್ಲೇದ್ ಹಾಗೂ ವೆಂಕಟೇಶ್ ಅವರ ನೇತೃತ್ವದಲ್ಲಿ ಯೋಗಾಭ್ಯಾಸ ನಡೆಯಿತು.
ಸಾಮೂಹಿಕ ವಿದ್ಯಾರ್ಥಿಗಳ ಯೋಗಾಭ್ಯಾಸಕ್ಕೆ ಬೈಚನಹಳ್ಳಿ ಪ್ರಾಥಮಿಕ ಶಾಲೆ, ಕುಶಾಲನಗರದ ಸಂಯುಕ್ತ ಬಾಲಕಿಯರ ಪ್ರೌಢಶಾಲೆ, ಅಬ್ದುಲ್ ಕಲಾಂ ಶಾಲೆ, ಫಾತಿಮಾ ಪ್ರೌಢಶಾಲೆಯ ಸುಮಾರು 500ಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಈ ಸಂದರ್ಭ ಕುಶಾಲನಗರ ಜಿಎಂಪಿ ಶಾಲೆಯ ಮುಖ್ಯ ಶಿಕ್ಷಕಿ ರಾಣಿ, ದೈಹಿಕ ಶಿಕ್ಷಕಿ ಭಾರತಿ, ಶಿಕ್ಷಕರಾದ ಪ್ರಕಾಶ್, ಗಾಯಿತ್ರಿ, ಕುಸುಮ, ನೀಲಮ್ಮ, ಕಮಲ, ಉಷಾ, ಇಂದಿರಾ, ಸರಳಾ ಮಣಿ ಇದ್ದರು.
ಸುಂಟಿಕೊಪ್ಪ: ಶಿಕ್ಷಣ ಇಲಾಖೆ ವತಿಯಿಂದ ಸ್ಥಳೀಯ ಸರ್ಕಾರಿ ಪ್ರೌಢಶಾಲೆ ಮತ್ತು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಶಾಲಾ ಮೈದಾನದಲ್ಲಿ ಉಭಯ ಶಾಲೆಗಳ ಮಕ್ಕಳಿಗೆ ಯೋಗ, ಪ್ರಾಣಾಯಾಮ ಹಾಗೂ ಧ್ಯಾನ ಅಭ್ಯಾಸ ಮಾಡಿಸಲಾಯಿತು. ವಿವಿಧ ಆಸನಗಳನ್ನು ವಿದ್ಯಾರ್ಥಿಗಳು ಅಭ್ಯಾಸ ಮಾಡಿದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಎಸ್.ಟಿ. ವೆಂಕಟೇಶ್ ಮಕ್ಕಳಿಗೆ ಯೋಗಾಭ್ಯಾಸ ಮಾಡಿಸುವದರ ಮೂಲಕ ಯೋಗದಿಂದ ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗಲಿದೆ ಎಂದರು.
ಮುಖ್ಯ ಶಿಕ್ಷಕ ಬಾಲಕೃಷ್ಣ ಮಾತನಾಡಿದರು. ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕ ಪಿ. ನಂದ ಮಕ್ಕಳಿಗೆ ಯೋಗ ತರಬೇತಿ ನೀಡಿದರು. ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸಿ.ಎ. ಗೀತಾ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷೆ ಎಸ್.ಕೆ. ಸೌಭಾಗ್ಯ, ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ. ಸೋಮಶೇಖರ್, ಶಿಕ್ಷಕರಾದ ಎಂ.ಎನ್. ಲತಾ, ಟಿ.ಜಿ. ಪ್ರೇಮ ಕುಮಾರ್, ಎಸ್.ಆರ್. ಚಿತ್ರಾ, ಶಾಂತ ಹೆಗಡೆ ಇತರರು ಇದ್ದರು.
ಮಡಿಕೇರಿ: ಕೇಂದ್ರೀಯ ಕ್ರೀಡಾ ಪ್ರಾಧಿಕಾರ ಹಾಗೂ ವಾಂಡರರ್ಸ್ ಕ್ಲಬ್ ವತಿಯಿಂದ 4ನೇ ವರ್ಷದ ಯೋಗ ದಿನವನ್ನು ಆಚರಿಸಲಾಯಿತು.
ಸುಮಾರು 40 ವಿದ್ಯಾರ್ಥಿನಿಯರು, ಕ್ರೀಡಾ ತರಬೇತುದಾರರು, ವಾಂಡರರ್ಸ್ ಕ್ಲಬ್ನ ಮುಖ್ಯಸ್ಥ ಬಾಬು ಸೋಮಯ್ಯ, ಕೋಟೇರ ಮುದ್ದಯ್ಯ, ಮತ್ತಿತರರು ಯೋಗದ ವಿವಿಧ ಭಂಗಿಗಳನ್ನು ಪ್ರದರ್ಶಿಸಿದರು.
ಯೋಗ ಶಿಕ್ಷಕ ಎಸ್.ಪಿ. ವೆಂಕಟೇಶ್ ದಿನದ ಮಹತ್ವದ ಕುರಿತು ತಿಳಿಸಿದರು. ಯೋಗ ಮತ್ತು ಪ್ರಾಣಾಯಾಮದ ಬಗ್ಗೆ ಅವರು ವಿವರಿಸಿದರು.