ಕೂಡಿಗೆ, ಜೂ. 23: ಕೂಡಿಗೆ ಗ್ರಾಮ ಪಂಚಾಯಿತಿ ಮಾಸಿಕ ಸಭೆ ಗ್ರಾ.ಪಂ ಅಧ್ಯಕ್ಷೆ ಪ್ರೇಮಲೀಲಾ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಕೋಳಿ ಮಾಂಸ ಮಾರಾಟದ ಅಂಗಡಿ ವಿಚಾರವಾಗಿ ಚರ್ಚೆ ನಡೆಯಿತು. ಸದಸ್ಯರ ತೀರ್ಮಾನದಂತೆ ಕೂಡಿಗೆ-ವ್ಯಾಪ್ತಿಯ ಮಾರಾಟಗಾರರಿಗೆ, ರೂ. 4 ಲಕ್ಷಗಳನ್ನು ಪಡೆದು ಕಟ್ಟಸಿಕೊಂಡು ಪರವಾನಿಗೆ ನೀಡಲು ಪ್ರಮುಖ ತೀರ್ಮಾನ ಕೈಗೊಳ್ಳಲಾಯಿತು. ಈ ಸಂದರ್ಭ ಸಾರ್ವಜನಿಕರ ಅರ್ಜಿಗಳ ವಿಲೇವಾರಿ ಮಾಡ ಲಾಯಿತು. ಸಭೆಯಲ್ಲಿ ಅಭಿವೃದ್ಧಿಯ ಬಗ್ಗೆ ಅನೇಕ ವಿಷಯಗಳನ್ನು ಚರ್ಚಿಸಲಾಯಿತು. ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಸ್ವಾಮಿ ನಾಯಕ್ ಸರಕಾರದ ಸುತ್ತೋಲೆಗಳನ್ನು ಸಭೆಗೆ ಮಂಡಿಸಿದರು. ಉಪಾಧ್ಯಕ್ಷ ಗಿರೀಶ್ ಹಾಗೂ ಸದಸ್ಯರು ಇದ್ದರು.