ಕೂಡಿಗೆ ಸೈನಿಕ ಶಾಲೆಯಲ್ಲಿ ವಿದ್ಯಾರ್ಥಿಯೋರ್ವ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಪ್ಪಿಸಲು ಶಿಫಾರಸ್ಸು ಮಾಡುವದಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ತಿಳಿಸಿದ್ದಾರೆ.ಕೂಡಿಗೆ ಸೈನಿಕ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಚಿಂಗಪ್ಪನ ಮೃತದೇಹದ (ಮೊದಲ ಪುಟದಿಂದ) ಮರಣೋತ್ತರ ಪರೀಕ್ಷಾ ವರದಿ ಹಾಗೂ ವೈದ್ಯರ ಅಭಿಪ್ರಾಯ ಸಂಗ್ರಹಿಸಿ ಉನ್ನತÀ ಮಟ್ಟದ ತನಿಖೆಗೆ ಒಪ್ಪಿಸಲಾಗುವದು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ರಂಜನ್ ಅಭಿಪ್ರಾಯಿಸಿದ್ದಾರೆ.
ಈಗಾಗಲೇ ಮೃತ ವಿದ್ಯಾರ್ಥಿಯ ಪೋಷಕರು ಕೆಲವರ ವಿರುದ್ಧ ದೂರು ನೀಡಿದ್ದಾರೆ. ಪ್ರಕರಣದ ಸಮಗ್ರ ತನಿಖೆ ನಡೆಸಲು ಇಲಾಖೆ ಮುಂದಾಗಬೇಕು. ಅಗತ್ಯ ಬಿದ್ದರೆ ಸಿಐಡಿ ತನಿಖೆಗೆ ಒಪ್ಪಿಸಲು ತಾನು ಶಿಫಾರಸ್ಸು ಮಾಡುವದಾಗಿ ಶಾಸಕರು ತಿಳಿಸಿದ್ದಾರೆ.