ಮಡಿಕೇರಿ, ಜೂ. 25 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇದರ ಸಂಯುಕ್ತ ಆಶ್ರಯದಲ್ಲಿ ಜೂ. 27 ರಂದು ನಗರದಲ್ಲಿ ನಡೆಯುವ ನಾಡಪ್ರಭು ಕೆಂಪೇಗೌಡರ 509ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ನಾಡಪ್ರಭುವಿಗೆ ಗೌರವ ಅರ್ಪಿಸಬೇಕೆಂದು ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಎಂ. ಚಂಗಪ್ಪ ಸಲಹೆ ಮಾಡಿದ್ದಾರೆ.

ಪತ್ರಿಕಾ ನೀಡಿರುವ ಅಂದು ಬುಧವಾರ ಬೆಳಿಗ್ಗೆ 11 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಜಿ.ಪಂ. ಅಧ್ಯಕ್ಷ ಬಿ.ಎ.ಹರೀಶ್ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಸಂಸದ ಪ್ರತಾಪ್ ಸಿಂಹ, ವೀರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯರಾದ ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಆಯನೂರು ಮಂಜುನಾಥ್, ಬೋಜೇಗೌಡ, ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಮಡಿಕೇರಿ ನಗರಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್, ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಎಂ. ಚಂಗಪ್ಪ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷÀ ಸೂರ್ತಲೆ ಸೋಮಣ್ಣ, ಮೊದಲಾದವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರ ಪ್ರಸಾದ್, ಕೊಡಗು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಟಿ.ದರ್ಶನ್ ಉಪಸ್ಥಿತರಿರುವರು. ಮಡಿಕೇರಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ.ಎಂ. ಬೆಳ್ಳಿಯಪ್ಪ ನಾಡಪ್ರಭು ಕೆಂಪೇಗೌಡರ ಕುರಿತು ಉಪಾನ್ಯಾಸ ನೀಡಲಿದ್ದಾರೆ ಎಂದು ಚಂಗಪ್ಪ ತಿಳಿಸಿದ್ದಾರೆ.