ಮಡಿಕೇರಿ, ಜೂ. 24: ಪ್ರಸಕ್ತ (2018-19) ಸಾಲಿನಲ್ಲಿ ಪ್ರಧಾನಮಂತ್ರಿಯವರ ಸೃಜನ (ಪಿ.ಎಂ.ಇ.ಜಿ.ಪಿ) ಕಾರ್ಯಕ್ರಮದಡಿ ಕೈಗಾರಿಕೆ-ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 18 ವರ್ಷ ತುಂಬಿದ ಅರ್ಹ ಅಭ್ಯರ್ಥಿಗಳು ತಿತಿತಿ.ಞviಛಿ.oಡಿg.iಟಿ ನಲ್ಲಿ ಅರ್ಜಿ ಅಳವಡಿಸಿ ಅದರ ಪ್ರತಿಯನ್ನು 2 ಸೆಟ್‍ನಲ್ಲಿ ದಾಖಲಾತಿಗಳನ್ನು ಕಚೇರಿಗೆ ಸಲ್ಲಿಸುವದು. ಅಪೂರ್ಣವಾಗಿ ಭರ್ತಿ ಮಾಡಿದ ಹಾಗೂ ದಾಖಲೆಗಳನ್ನು ನೀಡದೆ ಇರುವ ಅರ್ಜಿ ಪರಿಗಣಿಸಲಾಗುವದಿಲ್ಲ. ಹೆಚ್ಚಿನ ವಿವರಗಳಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ ಇವರ ಕಚೇರಿ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ; 08272-228431. ಅರ್ಜಿ ಸಲ್ಲಿಸಲು ತಾ. 30 ಕೊನೆ ದಿನವಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಪುಸ್ತಕ ಸೊಗಸು ಪುಸ್ತಕ ಬಹುಮಾನಕ್ಕೆ
ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಜನವರಿ 2017ರ ರಿಂದ ಡಿಸೆಂಬರ್ 2017ರ ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟ ಪರಿಗಣಿಸಿ, ಕಲಾವಿದರು, ಲೇಖಕರು, ಪ್ರಕಾಶಕರಿಗೆ ಕನ್ನಡ ಪುಸ್ತಕ ಸೊಗಸು-2017 (ಪ್ರಥಮ, ದ್ವಿತೀಯ, ತೃತೀಯ, ಮಕ್ಕಳ ಪುಸ್ತಕ, ಮುಖಪುಟ ಚಿತ್ರ ವಿನ್ಯಾಸದ ಪ್ರಥಮ, ಮುಖಪುಟ ಚಿತ್ರಕಲೆಯ ದ್ವಿತೀಯ) ಬಹುಮಾನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಕಲಾವಿದರು, ಲೇಖಕರು, ಪ್ರಕಾಶಕರುಗಳು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ. ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು/ ಚಿತ್ರ ಕಲಾವಿದರ ಪೂರ್ಣ ವಿಳಾಸ, ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ತಾ. 30 ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು-560002 ಈ ವಿಳಾಸಕ್ಕೆ ಸಲ್ಲಿಸಬಹುದಾಗಿದೆ. ಕಲಾವಿದರು, ಲೇಖಕರು, ಪ್ರಕಾಶಕರುಗಳು ನೀಡಿದ ಪಸ್ತಕಗಳನ್ನು ಯಾವದೇ ಕಾರಣಕ್ಕೂ ಹಿಂದಿರುಗಿಸಲಾಗುವದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು-560002- ವೆಬ್‍ಸೈಟ್: ತಿತಿತಿ.ಞಚಿಟಿಟಿಚಿಜಚಿಠಿusಣಚಿಞಚಿಠಿಡಿಚಿಜhiಞಚಿಡಿಚಿ.ಛಿom, ದೂರವಾಣಿ ಸಂಖ್ಯೆ 080-22484516/22107704 ಇಲ್ಲಿ ಸಂಪರ್ಕಿಸಬಹುದಾಗಿದೆ.
ಜಾಣ ಜಾಣೆಯರ ಬಳಗದಿಂದ
ಕನ್ನಡ ಪುಸ್ತಕ ಪ್ರಾಧಿಕಾರ ವಿದ್ಯಾರ್ಥಿ ಯುವಜನರನ್ನು ಸಾಹಿತ್ಯಾಭಿರುಚಿಗೆ ಆಕರ್ಷಿಸಲು ಹಾಗೂ ಸಾಹಿತ್ಯದ ಕ್ರಿಯಾಶೀಲತೆ ಬೆಳೆಸಲು ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರಗಳಲ್ಲಿ “ಜಾಣ ಜಾಣೆಯರ ಬಳಗ”ವನ್ನು ರಚಿಸಲು ಅರ್ಜಿ ಆಹ್ವಾನಿಸಿದೆ.
ಕನಿಷ್ಟ 5 ರಿಂದ 15 ಮಂದಿ ವಿದ್ಯಾರ್ಥಿಗಳನ್ನು ಒಳಗೊಂಡಂತೆ ಕಾರ್ಯಕಾರಿ ಸಮಿತಿಯನ್ನು ರಚಿಸಿಕೊಂಡು, ಆಯಾಯ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಕನ್ನಡ ವಿಭಾಗಗಳ ಮುಖ್ಯಸ್ಥರ ಅನುಮೋದನೆಯೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಕಾಲೇಜಿನಲ್ಲಿ ಕನ್ನಡ ಸಾಹಿತ್ಯಿಕ ವಾತಾವರಣವನ್ನು ಕ್ರಿಯಾಶೀಲಗೊಳಿಸುವ ನಿಟ್ಟಿನಲ್ಲಿ ವರ್ಷದಲ್ಲಿ 4 ಕಾರ್ಯಕ್ರಮಗಳಂತೆ ಕನ್ನಡ ಸಾಹಿತ್ಯ ಚಟುವಟಿಕೆಯನ್ನು ಈ ಬಳಗವು ಹಮ್ಮಿಕೊಳ್ಳಬೇಕಿದೆ. ಇದಕ್ಕಾಗಿ ಪ್ರಾಧಿಕಾರದಿಂದ ಕಾರ್ಯಕ್ರಮ ಒಂದಕ್ಕೆ ರೂ. 5 ಸಾವಿರ ಗರಿಷ್ಠ ಮಿತಿಯೊಳಗೆ ವಾಸ್ತವಿಕ ವೆಚ್ಚವನ್ನು ಭರಿಸಲಾಗುವದು. ಇದಲ್ಲದೆ ಪ್ರಾಧಿಕಾರ ಹಮ್ಮಿಕೊಳ್ಳುವ ಎಲ್ಲಾ ಯೋಜನೆ ಹಾಗೂ ಕಾರ್ಯಕ್ರಮಗಳಲ್ಲಿ ಈ ಜಾಣ ಜಾಣೆಯರ ಬಳಗವನ್ನು ತೊಡಗಿಸಿಕೊಳ್ಳಲಾಗುವದು. ಅರ್ಜಿ ಸಲ್ಲಿಸಲು ತಾ. 30 ಕಡೆಯ ದಿನವಾಗಿದೆ.
ನಿಗದಿತ ಅರ್ಜಿ ನಮೂನೆಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಕಚೇರಿಯನ್ನು ಅಥವಾ ಕನ್ನಡ ಪುಸ್ತಕ ಪ್ರಾಧಿಕಾರದ ವೆಬ್‍ಸೈಟ್ ತಿತಿತಿ.ಞಚಿಟಿಟಿಚಿಜಚಿಠಿusಣಚಿಞಚಿಠಿಡಿಚಿಜhiಞಚಿಡಿಚಿ.ಛಿom ನಲ್ಲಿ ಅರ್ಜಿಯನ್ನು ಪಡೆಯಬಹುದಾಗಿದೆ, ಅರ್ಜಿಗಳನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು-560002- ದೂರವಾಣಿ ಸಂಖ್ಯೆ:080-22484516/ 22107704 ಅವರಿಗೆ ಕಳುಹಿಸಿಕೊಡಲು ಕೋರಿದೆ.
ಪ್ರೋತ್ಸಾಹ ಧನ ನೀಡುವ ಯೋಜನೆಗೆ
ಕನ್ನಡ ಪುಸ್ತಕ ಪ್ರಾಧಿಕಾರ ದಲಿತ ಸಾಹಿತಿಗಳ ಕೃತಿ ಪ್ರಕಟಣೆಗೆ ತಲಾ ರೂ. 35 ಸಾವಿರ ಪ್ರೋತ್ಸಾಹ ಧನ ನೀಡುವ ಯೋಜನೆ ರೂಪಿಸಿದ್ದು, ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿದಾರರು ಕಡ್ಡಾಯವಾಗಿ ತಮ್ಮ ಆರ್.ಡಿ. ನಂಬರ್ ಇರುವ ಜಾತಿ ಪ್ರಮಾಣ ಪತ್ರದೊಂದಿಗೆ ಎ4 ಸೈಜ್ ಹಾಳೆಯಲ್ಲಿ ಡಿ.ಟಿ.ಪಿ. ಮಾಡಿದ ಕನಿಷ್ಟ 200 ಪುಟಗಳಿರುವ ಕೃತಿಯನ್ನು ಸಲ್ಲಿಸಬಹುದಾಗಿದೆ. ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಸಾಹಿತ್ಯ, ಮಾನವಿಕ, ವಿಜ್ಞಾನ ವಿಚಾರ ಸಾಹಿತ್ಯ ಹಾಗೂ ಇತರ ಜ್ಞಾನ ಶಿಸ್ತುಗಳ ವಿಚಾರಗಳಿಗೆ ಸಂಬಂಧಿಸಿದ್ದಾಗಿದ್ದು, ಅನುವಾದಗಳನ್ನು ಪಠ್ಯ ಪುಸ್ತಕಗಳನ್ನು ಹಾಗೂ ಬೇರಾವದೇ ಪದವಿಗಾಗಿ ಸಿದ್ಧಪಡಿಸಿರುವ ಪ್ರಬಂಧಗಳನ್ನು ಪರಿಗಣಿಸಲಾಗುವದಿಲ್ಲ.
ಕೃತಿಯ ಪಠ್ಯದಲ್ಲಿ ಯಾವದೇ ಧರ್ಮ, ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಭಾಷೆ, ಆಚರಣೆ, ಪದ್ಧತಿ ಇತ್ಯಾದಿ ಸಂಗತಿಗಳಿಗೆ ಸಂಬಂಧಿಸಿದಂತೆ ಹಾಗೂ ರಾಷ್ಟ್ರೀಯ ನಾಯಕರುಗಳ ಕುರಿತಂತೆ ನೇರವಾಗಿಯೇ ಆಗಲಿ ಅಥವಾ ಪರೋಕ್ಷವಾಗಿಯೇ ಆಗಲಿ ಮನನೋಯಿಸುವಂತಹ ವಿಷಯವಾಗಲಿ ಇರಬಾರದು. ಅಲ್ಲದೆ ರಾಷ್ಟ್ರೀಯ ಭಾವೈಕ್ಯತೆಗೆ ದಕ್ಕೆ ತರುವಂತಹ ವಿಷಯ-ಸಂಗತಿಗಳು ಪ್ರಸ್ತಾಪವಾಗಿರಬಾರದು.
ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು-ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವದಿಲ್ಲ. ಒಬ್ಬ ಲೇಖಕರ ಒಂದು ಪ್ರತಿಯನ್ನು ಮಾತ್ರ ಆಯ್ಕೆಗಾಗಿ ಪರಿಗಣಿಸಲಾಗುವದು. ಈಗಾಗಲೇ ಸಾಕಷ್ಟು ಕೃತಿಗಳು ಪ್ರಕಟವಾಗಿರುವ ಲೇಖಕರೂ ಕೂಡ ಅರ್ಜಿ ಸಲ್ಲಿಸಲು ಅವಕಾಶವಿದೆ. ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು-560002 ಈ ವಿಳಾಸಕ್ಕೆ ತಾ. 30 ರೊಳಗಾಗಿ ಅರ್ಜಿ ಸಲ್ಲಿಸುವದು.
ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002- ವೆಬ್‍ಸೈಟ್: ತಿತಿತಿ.ಞಚಿಟಿಟಿಚಿಜಚಿಠಿusಣಚಿಞಚಿಠಿಡಿಚಿಜhiಞಚಿಡಿಚಿ.ಛಿom, ದೂರವಾಣಿ ಸಂಖ್ಯೆ: 080-22484516/22107704 ಇಲ್ಲಿ ಸಂಪರ್ಕಿಸಬಹುದಾಗಿದೆ.
ಯುವ ಬರಹಗಾರರ ಚೊಚ್ಚಲ ಕೃತಿ ಪ್ರಕಟಿಸಲು
ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2017ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿ ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಿದೆ.
ಅರ್ಜಿದಾರರು ಕನಿಷ್ಟ 18 ರಿಂದ 35 ವರ್ಷ ವಯೋಮಿತಿಯವರಾಗಿರಬೇಕು. ಸ್ವ-ವಿವರವುಳ್ಳ ಮನವಿಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ ದೃಢೀಕರಿಸಲ್ಪಟ್ಟ ಜನ್ಮ ದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಅಲ್ಲದೆ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ಪತ್ರ ನೀಡಬೇಕು.
ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿ.ಟಿ.ಪಿ. ಮಾಡಿಸಿದಾಗ 1/8 ಡೆಮ್ಮಿ ಅಳತೆಯಲ್ಲಿ ಕನಿಷ್ಟ 60 ಪುಟಗಳಿರಬೇಕು. ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವದೇ ಪದವಿಗೆ ಸಿದ್ಧಪಡಿಸಿದ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯದ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ ಇರಬೇಕು ಕೃತಿಯ ಪಠ್ಯದಲ್ಲಿ ಯಾವದೇ ಧರ್ಮ, ದೇವರು ಜಾತಿ, ಕೋಮು, ವೃತ್ತಿ, ಸಮುದಾಯ, ಭಾಷೆ, ಆಚರಣೆ, ಪದ್ಧತಿ, ಇತ್ಯಾದಿ ಸಂಗತಿಗಳಿಗೆ ಸಂಬಂಧಿಸಿದಂತೆ ಹಾಗೂ ರಾಷ್ಟ್ರೀಯ ನಾಯಕರುಗಳ ಕುರಿತಂತೆ ನೇರವಾಗಿಯೇ ಆಗಲಿ ಅಥವಾ ಪರೋಕ್ಷವಾಗಿಯೇ ಆಗಲಿ, ಮನನೋಯಿಸುವಂತಹ ವಿಷಯವಾಗಲಿ ಇರಬಾರದು. ಅಲ್ಲದೆ ರಾಷ್ಟ್ರೀಯ ಭಾವೈಕ್ಯತೆಗೆ ಧಕ್ಕೆ ತರುವಂತಹ ವಿಷಯ-ಸಂಗತಿಗಳು ಪ್ರಸ್ತಾಪವಾಗಿರಬಾರದು. ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು-ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವದಿಲ್ಲ. ಆದಕಾರಣ ಹಸ್ತಪ್ರತಿಯ-ಡಿ.ಟಿ.ಪಿ. ಪ್ರತಿಯ ಎರಡನೇ ಪ್ರತಿಯನ್ನು ಸಲ್ಲಿಸಲು ತಿಳಿಸಿದೆ.
ಅರ್ಜಿಗಳನ್ನು ತಾ. 30 ರೊಳಗಾಗಿ, ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು-560002 ಅವರಿಗೆ ಕಳುಹಿಸಿಕೊಡಲು ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು-560002, ದೂರವಾಣಿ ಸಂಖ್ಯೆ: 080-22484516/22107704 ಅಥವಾ ವೆಬ್‍ಸೈಟ್: ತಿತಿತಿ.ಞಚಿಟಿಟಿಚಿಜಚಿಠಿusಣಚಿಞಚಿ ಠಿಡಿಚಿಜhiಞಚಿಡಿಚಿ.ಛಿom, ಪೇಸ್‍ಬುಕ್ ಅನ್ನು ಅವಲೋಕಿಸಬಹುದಾಗಿದೆ.
ಅಚ್ಚುಮೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆ ಸ್ಪರ್ಧೆ
ಕನ್ನಡ ಪುಸ್ತಕ ಪ್ರಾಧಿಕಾರ ರಾಜ್ಯದಾದ್ಯಂತ ಪ್ರೌಢಶಾಲೆಗಳಲ್ಲಿ “ಅಚ್ಚುಮೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆ ಸ್ಪರ್ಧೆ ಅಥವಾ ರಸಪ್ರಶ್ನೆ ಕಾರ್ಯಕ್ರಮ” ಏರ್ಪಡಿಸುವ ಕುರಿತು ಯೋಜನೆ ಹಮ್ಮಿಕೊಂಡಿದೆ. ಈ ಯೋಜನೆಯಡಿ ಸರ್ಕಾರ, ಅನುದಾನಿತ ಹಾಗೂ ಖಾಸಗಿ ಪ್ರೌಢಶಾಲೆಗಳು ತಮ್ಮ ತಮ್ಮ ಶಾಲೆಗಳಲ್ಲಿ ಅಚ್ಚು ಮೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆ ಸ್ಪರ್ಧೆ ಹಾಗೂ ರಸಪ್ರಶ್ನೆಯ ಒಂದು ಕಾರ್ಯಕ್ರಮ ಏರ್ಪಡಿಸಬಹುದಾಗಿದೆ.
ಈ ಕಾರ್ಯಕ್ರಮವನ್ನು ನಡೆಸುವ ಸಲುವಾಗಿ ಪ್ರಾಧಿಕಾರ ರೂ. 5 ಸಾವಿರ ಗರಿಷ್ಟ ಮಿತಿಯೊಳಗೆ ವಾಸ್ತವಿಕ ವೆಚ್ಚವನ್ನು ಭರಿಸುವದು. ತಮ್ಮ ಶಾಲಾ ವಿವರಗಳೊಂದಿಗೆ ಆಯಾ ಶಾಲಾ ಮುಖ್ಯಸ್ಥರು ಸ್ವಯಂ ಅರ್ಜಿ ಸಲ್ಲಿಸಲು ತಾ. 30 ಕೊನೆ ದಿನವಾಗಿದೆ. ಕಾರ್ಯಕ್ರಮದ ಮುನ್ನ ಪ್ರಾಧಿಕಾರದಿಂದ ಪೂರ್ವಾನುಮೋದನೆ ಪಡೆಯುವದು ಕಡ್ಡಾಯ.
ಅರ್ಜಿಗಳನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು-560002- ದೂರವಾಣಿ ಸಂಖ್ಯೆ: 080-22484516/ 22107704 ಅವರಿಗೆ ಸಲ್ಲಿಸುವದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಚೇರಿಯನ್ನು ಅಥವಾ ಕನ್ನಡ ಪುಸ್ತಕ ಪ್ರಾಧಿಕಾರದ ವೆಬ್‍ಸೈಟ್: ತಿತಿತಿ.ಞಚಿಟಿಟಿಚಿಜಚಿಠಿusಣಚಿಞಚಿಠಿಡಿಚಿಜhiಞಚಿಡಿಚಿ.ಛಿom ನ್ನು ಸಂಪರ್ಕಿಸಬಹುದಾಗಿದೆ.
ಸಾಲ ಸೌಲಭ್ಯಕ್ಕೆ
ಕೊಡಗು ಜಿಲ್ಲೆಯಲ್ಲಿ ಪ್ರಸಕ್ತ 2018-19ನೇ ಸಾಲಿನ ಮುಖ್ಯಮಂತ್ರಿಗಳ ಉದ್ಯೋಗ ಸೃಜನ ಯೋಜನೆ(ಸಿಎಂಇಜಿಪಿ)ಯಡಿ ಕನಿಷ್ಟ 8ನೇ ತರಗತಿಯಲ್ಲಿ ತೇರ್ಗಡೆಯಾಗಿರುವ ಗ್ರಾಮೀಣ ಪ್ರದೇಶದ ಸಾಮಾನ್ಯ ವರ್ಗದ 21 ರಿಂದ 35 ವರ್ಷ ವಯೋಮಿತಿಯ ಹಾಗೂ ವಿಶೇಷ ವರ್ಗದವರಿಗೆ (ಎಸ್.ಸಿ-ಎಸ್.ಟಿ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು, ಅಂಗವಿಕಲರು, ಮಾಜಿ ಸೈನಿಕರು ಮತ್ತು ಮಹಿಳೆಯರು) ಗರಿಷ್ಠ 45 ವರ್ಷ ವಯೋಮಿತಿಯನ್ನು ಹೊಂದಿದ ನಿರುದ್ಯೋಗಿ ಯುವಕ-ಯುವತಿಯರಿಗೆ ಕಿರು ಕೈಗಾರಿಕಾ-ಸೇವಾ ಘಟಕಗಳನ್ನು ಸ್ಥಾಪಿಸುವ ಮೂಲಕ ಸ್ವ-ಉದ್ಯೋಗ ಮಾಡಿಕೊಳ್ಳುವವರಿಗೆ ಬ್ಯಾಂಕಿನಿಂದ ಗರಿಷ್ಠ ರೂ. 10 ಲಕ್ಷಗಳವರೆಗೆ ಸಾಲ ನೀಡಿ ಗರಿಷ್ಠ ಶೇ.25 ರಿಂದ 35 ವರೆಗೆ ಸಹಾಯಧನ ನೀಡಲಾಗುವದು.
ಯೋಜನಾ ಸಹಾಯಧನಕ್ಕಾಗಿ ಯಾವದೇ ಆದಾಯದ ಮಿತಿ ಇರುವದಿಲ್ಲ. ಈ ಸೌಲಭ್ಯ ಪಡೆಯಲು ಆನ್‍ಲೈನ್ ಮುಖಾಂತರ ತಾ. 30 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ವೆಬ್‍ಸೈಟ್: hಣಣಠಿ://ಛಿmegಠಿ.ಞಚಿಡಿ.ಟಿiಛಿ.iಟಿ ಆಗಿರುತ್ತದೆ. ಆನ್‍ಲೈನ್ ಅರ್ಜಿ ಸೂಕ್ತ ದಾಖಲಾತಿಗಳೊಂದಿಗೆ ದ್ವಿಪ್ರತಿಯಲ್ಲಿ ಜಂಟಿ ನಿರ್ದೇಶಕರ ಕಚೇರಿಗೆ ತಾ. 30 ರೊಳಗೆ ಸಲ್ಲಿಸುವದು. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 08272-228431 ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಕೊಡಗು ಜಿಲ್ಲೆ, ಮಡಿಕೇರಿ ಇವರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ಯುವ ವಿಜ್ಞಾನಿ ಪ್ರಶಸ್ತಿಗಾಗಿ
ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು 2017-18 ನೇ ಸಾಲಿನ ಯುವ ವಿಜ್ಞಾನಿ ಪ್ರಶಸ್ತಿಗಾಗಿ 9 ರಿಂದ 12ನೇ ವರ್ಗದಲ್ಲಿ ಓದುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸುತ್ತಿದೆ ಎಳೆಯ ವಯಸ್ಸಿನಲ್ಲೇ ‘ವ್ಶೆಜ್ಞಾನಿಕ ವಿಧಾನ’ದ ಮನವರಿಕೆ ಮಾಡುವ, ಭವಿಷ್ಯದ ವಿಜ್ಞಾನಿಗಳನ್ನಾಗಿ ರೂಪಿಸುವ ಹಾಗೂ ಮೂಲ ವಿಜ್ಞಾನ ವಿಷಯಗಳಲ್ಲಿ ಆಸಕ್ತಿ ಮತ್ತು ಚಿಂತನ ಕೌಶಲ್ಯವನ್ನು ವರ್ಧಿಸಬೇಕೆಂಬ ಉದ್ದೇಶದಿಂದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನೆರವಿನೊಂದಿಗೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಈ ಯೋಜನೆಯನ್ನು ಹಮ್ಮಿಕೊಂಡಿದೆ ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಗೌರವ ಕಾರ್ಯದರ್ಶಿ ಗಿರೀಶ ಕಡ್ಲೇವಾಡ ತಿಳಿಸಿದ್ದಾರೆ. ಈ ಯೋಜನೆಯಲ್ಲಿ ಭಾಗವಹಿಸಲು ಇಚ್ಚಿಸುವ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೇಂದ್ರ ಕಚೇರಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ, ಕರಾವಿಪ ವೆಬ್‍ಸೈಟ್ (ತಿತಿತಿ.ಞಡಿvಠಿ.oಡಿg) ವಾಟ್ಸಪ್ (9483549159) ನಿಂದ ಅರ್ಜಿ-ಮಾಹಿತಿ ಪಡೆಯಬಹುದು. ಭಾಗವಹಿಸಲು ಇಚ್ಚಿಸುವವರು ಸೂಕ್ತ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಚೇರಿಗೆ ಹಾಗೂ ಅರ್ಜಿಯ ಒಂದು ಪ್ರತಿಯನ್ನು ಕರಾವಿಪ ಕೇಂದ್ರ ಕಚೇರಿಗೆ ಸಲ್ಲಿಸುವದು. ಪ್ರಸ್ತುತ ಅರ್ಜಿ ಸಲ್ಲಿಸುವ ದಿನಾಂಕವನ್ನು ತಾ. 30 ರವರೆಗೆ ವಿಸ್ತರಿಸಲಾಗಿದ್ದು, ಜಿಲ್ಲಾ ಮಟ್ಟದ ಸ್ಪರ್ಧೆಯನ್ನು ಜುಲೈ 7, 2018 ಕ್ಕೆ ಮುಂದೂಡಲಾಗಿದೆ.
ಜಿಲ್ಲಾಮಟ್ಟದ ವಿಜೇತ ವಿದ್ಯಾರ್ಥಿಗಳಿಗೆ ಪ್ರಥಮ ರೂ. 5 ಸಾವಿರ, ದ್ವಿತೀಯ ರೂ. 3 ಸಾವಿರ, ತೃತೀಯ ರೂ. 2 ಸಾವಿರ ಹಾಗೂ ರಾಜ್ಯ ಮಟ್ಟದಲ್ಲಿ 4 ಯುವ ವಿಜ್ಞಾನಿಗಳನ್ನು ಆಯ್ದು ತಲಾ ರೂ. 10 ಸಾವಿರ ನಗದು ಬಹುಮಾನದೊಂದಿಗೆ ಸ್ಮರಣಿಕೆ ಮತ್ತು ಯುವ ವಿಜ್ಞಾನಿ ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಗುವದು. ರಾಜ್ಯಮಟ್ಟದ ಸ್ಪರ್ಧೆಯು ಜುಲೈ 3 ನೇ ವಾರದಲ್ಲಿ 3 ದಿನಗಳ ಕಾಲ ಬಾಗಲಕೋಟೆಯಲ್ಲಿ ಜರುಗಲಿದ್ದು ಖ್ಯಾತ ವಿಜ್ಞಾನಿಗಳು ವಿದ್ಯಾರ್ಥಿಗಳೊಂದಿಗೆ ಸಂವಾದಿಸುವರು. ಹೆಚ್ಚಿನ ಮಾಹಿತಿಗೆ ಕರಾವಿಪಿ ಕಚೇರಿ ದೂರವಾಣಿ 080-26718939, ಮೊ. 9483549159/ 9008442557/ 9449530245 ಇವರನ್ನು ಸಂಪರ್ಕಿಸುವದು.
ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಪರೀಕ್ಷೆಗೆ
ಕೇಂದ್ರ ಲೋಕಸೇವಾ ಆಯೋಗ “ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಹಾಗೂ ನ್ಯಾಷನಲ್ ನಾವಾಲ್ ಅಕಾಡೆಮಿ-II” ಪರೀಕ್ಷೆಗೆ ಕೇವಲ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿರುತ್ತಾರೆ. ಈ ಪರೀಕ್ಷೆಯ ಮುಖಾಂತರ ಭಾರತೀಯ ಸೇನೆ, ವಾಯುಪಡೆ ಹಾಗೂ ನೌಕಾದಳಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ವಿದ್ಯಾರ್ಹತೆ: ಭಾರತೀಯ ಸೇನೆ, ದ್ವಿತೀಯ ಪಿ.ಯು.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ವಾಯುಪಡೆ ಹಾಗೂ ನೌಕಾದಳ ದ್ವಿತೀಯ ಪಿ.ಯು.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಗಣಿತ ಮತ್ತು ಭೌತಶಾಸ್ತ್ರ ವಿಷಯಗಳ ಅಧ್ಯಯನದೊಂದಿಗೆ ಪಾಸಾಗಿರಬೇಕು. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿ.ಯು.ಸಿ.ಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ ಅಭ್ಯರ್ಥಿಗಳು ದಿನಾಂಕ: 2.1.2000 ಹಾಗೂ 1.1.2003 ರೊಳಗೆ ಜನಿಸಿರಬೇಕು. ದೇಹದಾಢ್ಯತೆ ಕನಿಷ್ಟ ಎತ್ತರ 157 ಸೆಂ.ಮೀ. (ವಾಯು ಸೇನೆ 162.5 ಸೆಂ.ಮೀ) ಅರ್ಜಿ ಶುಲ್ಕ : ಎಸ್.ಸಿ/ಎಸ್.ಟಿ. ಅಭ್ಯರ್ಥಿಗಳು ಮತ್ತು ಜೆ.ಸಿ.ಓ/ಎನ್.ಸಿ.ಓ/ಓ.ಆರ್. ಮಕ್ಕಳನ್ನು ಹೊರತುಪಡಿಸಿ ಉಳಿದ ಎಲ್ಲಾ ಅಭ್ಯರ್ಥಿಗಳು ರೂ. 100 ಅರ್ಜಿ ಶುಲ್ಕ ಪಾವತಿಸಬೇಕಾಗಿರುತ್ತದೆ.
ಪರೀಕ್ಷೆ ದಿನಾಂಕ ಸೆಪ್ಟೆಂಬರ್ 9 ಪರೀಕ್ಷಾ ಕೇಂದ್ರಗಳು ಬೆಂಗಳೂರು ಹಾಗೂ ಧಾರವಾಡ. ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಜುಲೈ 2 ರೊಳಗೆ ತಿತಿತಿ.uಠಿsಛಿoಟಿಟiಟಿe.ಟಿiಛಿ.iಟಿ ನಲ್ಲಿ ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು.
ಕಾನೂನು ತರಬೇತಿಗೆ
ಪ್ರಸಕ್ತ 2018-19 ನೇ ಸಾಲಿಗೆ ಕೊಡಗು ಜಿಲ್ಲೆಯ ವ್ಯಾಪ್ತಿಯಲ್ಲಿ ಆಡಳಿತ ನ್ಯಾಯಾಧೀಕರಣ ಯೋಜನೆಯಡಿ ತರಬೇತಿ ನೀಡಲು ಪರಿಶಿಷ್ಟ ಜಾತಿ ಅರ್ಹ ಕಾನೂನು ಪದವೀಧರರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹತೆಗಳು: ಅಭ್ಯರ್ಥಿಯು ಕೊಡಗು ಜಿಲ್ಲೆಯವರಾಗಿರಬೇಕು, 40 ವರ್ಷ ವಯೋಮಿತಿಯೊಳಗಿರಬೇಕು, ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಮೊದಲು 3 ಅಥವಾ 5 ವರ್ಷದೊಳಗೆ ಕಾನೂನು ಪದವಿ ಪಡೆದಿರಬೇಕು, ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪ್ರಾಸಿಕ್ಯೂಟ್ ಬಳಿ ಅಥವಾ 20 ವರ್ಷಕ್ಕಿಂತ ಹೆಚ್ಚಿನ ಅನುಭವ ಹೊಂದಿರುವ ವಕೀಲರ ಬಳಿ ತರಬೇತಿಗೆ ನಿಯೋಜಿಸಲಾಗುವದು. ಆಯ್ಕೆಯಾದ ಅಭ್ಯರ್ಥಿಗಳು ಯಾವದೇ ಕಾರಣಕ್ಕೂ ತರಬೇತಿಯನ್ನು ಪೂರ್ಣಗೊಳಿಸದೆ ಬಿಟ್ಟು ಹೋಗಬಾರದು. ರಾಜ್ಯ ಅಥವಾ ಕೇಂದ್ರ ಸರ್ಕಾರಿ ನೌಕರಿ ಸಿಕ್ಕಿದಲ್ಲಿ ಮಾತ್ರ ನಿಯಮಾನುಸಾರ ಸಡಿಲಗೊಳಿಸಲಾಗುವದು. ಒಂದುವೇಳೆ ತರಬೇತಿ ಬಿಟ್ಟು ಹೋದಲ್ಲಿ ಅಂತವರ ಶಿಷ್ಯ ವೇತನವನ್ನು ನಿಯಮಾನುಸಾರ ವಸೂಲಿ ಮಾಡಲಾಗುವದು. ತರಬೇತಿ ಅವಧಿಯು 4 ವರ್ಷಗಳಾಗಿದ್ದು ಮಾಸಿಕ ರೂ. 5 ಸಾವಿರಗಳಿಗೆ ಶಿಷ್ಯವೇತನ ನೀಡಲಾಗುವದು.
ಅಭ್ಯರ್ಥಿಯು ಕಾನೂನು ಪದವಿಯಲ್ಲಿ ತೇರ್ಗಡೆ ಹೊಂದಿದ 3 ವರ್ಷದೊಳಗೆ ಬಾರ್ ಕೌನ್ಸಿಲ್‍ನಲ್ಲಿ ಹೆಸರು ನೋಂದಾಯಿಸಿದ ನಂತರ ಶಿಷ್ಯವೇತನ ಮತ್ತು ಎನ್‍ರೋಲ್‍ಮೆಂಟ್ ಫೀಯನ್ನು ನೀಡಬೇಕು. ಸದಸ್ಯ ಕಾರ್ಯದರ್ಶಿಯು ಅಧ್ಯಕ್ಷರ ಪೂರ್ವಾನುಮತಿ ಪಡೆದು ಅಭ್ಯರ್ಥಿಯ ಶಿಷ್ಯವೇತನ ಸಂಬಂಧ ದೂರು ಬಂದಲ್ಲಿ ಅಥವಾ ಸುಳ್ಳು ಪ್ರಮಾಣ ಪತ್ರಗಳನ್ನು ನೀಡಿದ್ದಲ್ಲಿ ಮತ್ತು ತರಬೇತಿಗೆ ಮಾಹಿತಿ ನೀಡದೇ ಗೈರು ಹಾಜರಾದಲ್ಲಿ ತಡೆಯಬಹುದು. ಅಧ್ಯಕ್ಷರು ಈ ಬಗ್ಗೆ ಪರಿಶೀಲಿಸಿ ಅಭ್ಯರ್ಥಿಯ ಕಡೆ ಯಾವದೇ ಲೋಪವಿಲ್ಲವೆಂದು ಕಂಡುಬಂದಲ್ಲಿ ತಡೆ ಹಿಡಿದಿರುವ ಶಿಷ್ಯವೇತನವನ್ನು ಮರುಪಾವತಿಸಲು ಆದೇಶಿಸಬಹುದು, ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ, ಕಾನೂನು ಪದವೀಧರ ತರಬೇತಿಗೆ ಆಯ್ಕೆಯಾದ ಮಹಿಳಾ ಆಭ್ಯರ್ಥಿಗಳು ತರಬೇತಿ ಅವಧಿಯಲ್ಲಿ ಗರ್ಭಿಣಿ ಸ್ಥಿತಿಯಲ್ಲಿರುವ ವೇಳೆ ಮಹಿಳಾ ಅಭ್ಯರ್ಥಿಗಳಿಗೆ 135 ದಿನಗಳ ತರಬೇತಿ ಭತ್ಯೆ ರಹಿತ ರಜೆಯನ್ನು (4 ವರ್ಷಗಳ ತರಬೇತಿಗೆ 1 ಬಾರಿ ಮಾತ್ರ) ವೈದ್ಯಕೀಯ ಪ್ರಮಾಣ ಪತ್ರ ಪಡೆದು ರಜೆ ಮಂಜೂರುಗೊಳಿಸಿ ತರಬೇತಿಯನ್ನು ಪೂರ್ಣಗೊಳಿಸಲು ಅವಕಾಶ ಕಲ್ಪಿಸಲಾಗಿದೆ.
ಇಲಾಖಾ ವೆಬ್‍ಸೈಟ್‍ನಲ್ಲಿ ತಿತಿತಿ.sತಿ.ಞಚಿಡಿ.ಟಿiಛಿ.iಟಿ ಆನ್‍ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ತಾ. 30 ರ ಸಂಜೆ 5.30 ಕೊನೆಯ ದಿನವಾಗಿದೆ.
ವಿದ್ಯಾರ್ಥಿಗಳ ವ್ಯಾಸಂಗಕ್ಕೆ
2018-19ನೇ ಸಾಲಿಗೆ ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ನಿಯಮಿತದಿಂದ, ಉಪ್ಪಾರ ಮತ್ತು ಇದರ ಉಪ ಜಾತಿಗೆ ಸೇರಿದ (ಹಿಂದುಳಿದ ವರ್ಗಗಳ ಪಟ್ಟಿಯಲ್ಲಿನ ಪ್ರವರ್ಗ-1ರ ಜಾ�?