ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತ್ಯುತ್ಸವವು ಬೆಳಿಗ್ಗೆ 11 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ.

ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ. ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಆಯನೂರು ಮಂಜುನಾಥ್, ಬೋಜೇಗೌಡ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್, ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಜಿಲ್ಲಾ ಒಕ್ಕಲಿಗ ಸಂಘದ ಅಧ್ಯಕ್ಷ ಎಸ್.ಎಂ. ಚಂಗಪ್ಪ, ಗೌಡ ಸಮಾಜಗಳ ಒಕ್ಕೂಟ ಅಧ್ಯಕ್ಷ ಸೂರ್ತಲೆ ಸೋಮಣ್ಣ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ.ಎಂ. ಬೆಳ್ಯಪ್ಪ ಇತರರು ಪಾಲ್ಗೊಳ್ಳಲಿದ್ದಾರೆ.

ಕೃಷಿ ಅಭಿಯಾನ

ಕೃಷಿ ಇಲಾಖೆ, ಇವರ ವತಿಯಿಂದ ಬೆಳಿಗ್ಗೆ 10.30 ಗಂಟೆಗೆ ಮಡಿಕೇರಿ ಹೋಬಳಿಯ ಮರಗೋಡು ಪ್ರಾಥಮಿಕ ಶಾಲಾ ಮೈದಾನದಲ್ಲಿ ಕೃಷಿ ಅಭಿಯಾನ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಕೃಷಿ ಮತ್ತು ಕೃಷಿ ಸಂಬಂಧಿತ ವಿವಿಧ ಇಲಾಖೆಗಳ ವಸ್ತು ಪ್ರದರ್ಶನ, ರೈತರು-ವಿಜ್ಞಾನಿಗಳ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಸಹಾಯಕ ಕೃಷಿ ನಿರ್ದೇಶಕರು ಅವರು ತಿಳಿಸಿದ್ದಾರೆ.