ಮಡಿಕೇರಿ, ಜೂ. 26: ಮಡಿಕೇರಿ ತಾಲೂಕಿನ ತ್ರೈಮಾಸಿಕ ಕೆ.ಡಿ.ಪಿ ಸಭೆಯು ಶಾಸಕ ಕೆ.ಜಿ.ಬೋಪಯ್ಯ ಅವರ ಅಧ್ಯಕ್ಷತೆಯಲ್ಲಿ ತಾ. 30 ರಂದು ಬೆಳಿಗ್ಗೆ 11.00 ಗಂಟೆಗೆ ನಗರದ ತಾಲೂಕು ಪಂಚಾಯಿತಿ ಕಚೇರಿ ಪಕ್ಕದಲ್ಲಿರುವ ಎಸ್.ಜಿ.ಎಸ್.ವೈ. ಕಟ್ಟಡದ ಸಭಾಂಗಣದಲ್ಲಿ ನಡೆಯಲಿದೆ.

ಸಭೆಯಲ್ಲಿ ಶಾಸಕ ಅಪ್ಪಚ್ಚುರಂಜನ್, ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅವರು ತಿಳಿಸಿದ್ದಾರೆ.