ನಾಪೆÇೀಕ್ಲು: ಸಮೀಪದ ಅಂಕುರ್ ಪಬ್ಲಿಕ್ ಶಾಲೆಯಲ್ಲಿ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು.

ಉಪ ಪ್ರಾಂಶುಪಾಲೆ ಆಶಾ ಬೋಪಣ್ಣ ಯೋಗದ ಮಹತ್ವಗಳ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಿದರು. ನಂತರ ಶಿಕ್ಷಕರು, ವಿದ್ಯಾರ್ಥಿಗಳು ಸೇರಿ ಯೋಗಾಭ್ಯಾಸ ಮಾಡಿದರು.

ಬಲಮುರಿ: ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯೋಪಾಧ್ಯಾಯಿನಿ ಹೆಚ್.ಟಿ. ಸುನಿತ ಉದ್ಘಾಟಿಸಿದರು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿ ಸಾಮೂಹಿಕವಾಗಿ ಯೋಗಾಭ್ಯಾಸದ ಮೂಲಕ ದಿನಾಚರಣೆಗೆ ಮೆರುಗು ನೀಡಿದರು. ದೈಹಿಕ ಶಿಕ್ಷಕಿ ಸುನಂದಿನಿ ಯೋಗಾಭ್ಯಾಸದಿಂದ ಆಗುವ ಪ್ರಯೋಜನದ ಬಗ್ಗೆ ಅರಿವು ಮೂಡಿಸಿದರು.

ಕುಶಾಲನಗರ: ಯುವ ಸಮೂಹ ಸಾಮಾಜಿಕ ಜಾಲತಾಣಗಳಲ್ಲಿ ಕಾಲಹರಣ ಮಾಡದೆ ತಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಬೇಕಿದೆ ಎಂದು ಯೋಗ ತರಬೇತುದಾರ ಚಿನ್ಮಯ ಭಟ್ ಕರೆ ನೀಡಿದರು.

ಚಿಕ್ಕ ಅಳುವಾರದಲ್ಲಿರುವ ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರದಲ್ಲಿನ ವಿಜ್ಞಾನ ವಿಭಾಗದ ಒಳಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಯೋಗ ದಿನಾಚರಣೆ ಅಂಗವಾಗಿ ನಡೆದ ಯೋಗ ಶಿಬಿರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಯಾವದೇ ಅಡ್ಡಪರಿಣಾಮಗಳಿಲ್ಲದ ಯೋಗವನ್ನು ದಿನನಿತ್ಯದ ಜೀವನದಲ್ಲಿ 2 ಗಂಟೆ ಅಳವಡಿಸಿಕೊಂಡಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಆನಂದದಿಂದ ಬಾಳಬಹುದು ಎಂದರು.

ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರದ ಜೀವರಸಾಯನಶಾಸ್ತ್ರ ಅಧ್ಯಯನ ವಿಭಾಗದ ಮುಖ್ಯಸ್ಥೆ ಪ್ರೊ. ಮಂಜುಳಾ ಶಾಂತರಾಮ್, ಸೂಕ್ಷ್ಮಾಣುಜೀವ ವಿಜ್ಞಾನ ಅಧ್ಯಯನ ವಿಭಾಗದ ಮುಖ್ಯಸ್ಥೆ ಪ್ರೊ. ಕೆ.ಸಿ. ಪುಷ್ಪಲತಾ, ದೈಹಿಕ ಉಪನಿರ್ದೇಶಕ ಡಾ. ಟಿ. ಕೇಶವಮೂರ್ತಿ, ವಿವಿಧ ವಿಭಾಗಗಳ ಸಿಬ್ಬಂದಿಗಳು ವಿಶ್ವ ಯೋಗ ದಿನಾಚರಣೆ ಅಂಗವಾಗಿ ಸಾರ್ವಜನಿಕರೊಂದಿಗೆ ಯೋಗಾಸನದಲ್ಲಿ ತೊಡಗಿಸಿಕೊಂಡರು.ಕುಶಾಲನಗರ: ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಕುಶಾಲನಗರದ ವಿವಿಧೆಡೆ ಸಾಮೂಹಿಕ ಯೋಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕೇಂದ್ರ ಸರ್ಕಾರದ ಆಯುಷ್ ಇಲಾಖೆ ಸಹಯೋಗದಲ್ಲಿ ಕುಶಾಲನಗರದ ಪತಂಜಲಿ ಯೋಗ ಸಮಿತಿ, ಭಾರತ ಸ್ವಾಭಿಮಾನ ಟ್ರಸ್ಟ್, ಯೋಗ ಮಾರ್ಗ, ಪಟ್ಟಣ ಪಂಚಾಯಿತಿ, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ವತಿಯಿಂದ ಸ್ಥಳೀಯ ಎಂಜಿಎಂ ಕಾಲೇಜು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎ.ಎಂ. ಶ್ರೀಧರ್ ಚಾಲನೆ ನೀಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಅರಕಲಗೂಡು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ. ಸುರೇಶ್ ಪಾಲ್ಗೊಂಡಿದ್ದರು. ಯೋಗ ಶಿಕ್ಷಕರಾದ ಡಾ. ಹೆಚ್.ಎನ್. ಐಶ್ವರ್ಯ, ಡಾ. ಕೆ.ಆರ್. ಸೌಂದರ್ಯ ಕಾರ್ಯಕ್ರಮ ನಡೆಸಿಕೊಟ್ಟರು. ಯೋಗ ಕಾರ್ಯಕ್ರಮದಲ್ಲಿ 50 ಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು.

ಈ ಸಂದರ್ಭ ಭಾರತ್ ಸ್ವಾಭಿಮಾನ್ ಟ್ರಸ್ಟ್ ಸಂಚಾಲಕ ಅಮೃತ್‍ರಾಜ್, ವಿವೇಕಾನಂದ ವಿದ್ಯಾಸಂಸ್ಥೆ ಅಧ್ಯಕ್ಷ ಎನ್.ಎನ್. ಶಂಭುಲಿಂಗಪ್ಪ, ಪ್ರಮುಖರಾದ ಟಿ.ಜಿ. ಪ್ರೇಮಕುಮಾರ್ ಮತ್ತಿತರರು ಇದ್ದರು.ವೀರಾಜಪೇಟೆ: ದೇವಣಗೇರಿಯಲ್ಲಿರುವ ಬಿ.ಸಿ. ಪ್ರೌಢಶಾಲೆಯಲ್ಲಿ ಯೋಗ ಗುರು ಹಾಗೂ ಶಾಲಾ ಆಡಳಿತ ಮಂಡಳಿ ಆಡಳಿತಾಧಿಕಾರಿಯಾದ ಪಿ.ಎ. ಲಕ್ಷ್ಮೀನಾರಾಯಣ ಅವರ ಮಾರ್ಗದರ್ಶನದಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿ ಕಾರ್ಯನಿರ್ವಾಹಕಿ ಕರ್ನಂಡ ಎನ್. ಬೊಳ್ಳಮ್ಮ ವಹಿಸಿದ್ದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮುತ್ತೂಟ್ ಫೈನಾನ್ಸ್ ಕಂಪೆನಿಯ ಕ್ಲಸ್ಟರ್ ವಿಭಾಗದ ಶಾಖಾ ವ್ಯವಸ್ಥಾಪಕ ಕೆ.ಕೆ. ಶ್ಯಾಮ್, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎ. ಲೋಕೇಶ್, ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಸದಾಶಿವ ಭಾಗವಹಿಸಿದ್ದರು. ಈ ಸಂದರ್ಭ ಆಡಳಿತ ಮಂಡಳಿಯಿಂದ ಉಚಿತವಾಗಿ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ಸಮಾರಂಭದಲ್ಲಿ ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿಯ ಕೋಶಾಧಿಕಾರಿ ರವೀಂದ್ರ, ಆಡಳಿತ ಮಂಡಳಿ ಸದಸ್ಯ ಬೀನಂಡ ಎಸ್. ಪೂಣಚ್ಚ, ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು. ಮುಖ್ಯ ಶಿಕ್ಷಕಿ ವೈ. ಪ್ರಮೀಳಾ ಕುಮಾರಿ ನಿರೂಪಿಸಿ, ಸಹ ಶಿಕ್ಷಕಿ ಎ.ಸಿ. ಸುನೀತ ವಂದಿಸಿದರು.ಗೋಣಿಕೊಪ್ಪ ವರದಿ: ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಆತ್ಮದರ್ಶನ್ ಮತ್ತು ಬೆಂಗಳೂರು ಬಿಹಾರ್ ಸ್ಕೂಲ್ ಆಫ್ ಯೋಗ ಸಹಯೋಗದಲ್ಲಿ ಪಾಲಿಬೆಟ್ಟ ಚೆಶೈರ್ ಹೋಮ್ಸ್ ಇಂಡಿಯಾ ಕೂರ್ಗ್ ವಿಶೇಷ ಶಾಲೆಯಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

35 ಕ್ಕೂ ಹೆಚ್ಚು ಶಿಬಿರಾರ್ಥಿಗಳು ಭಾಗವಹಿಸಿದರು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷೆ ಗೀತಾ ಚೆಂಗಪ್ಪ, ಉಪಾಧ್ಯಕ್ಷೆ ಪುನೀತ ರಾಮಸ್ವಾಮಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಕಳತ್ಮಾಡು ಲಯನ್ಸ್ ಶಾಲೆಯಲ್ಲಿ ಯೋಗ ದಿನಾಚರಣೆಯನ್ನು ಆರ್ಟ್ ಆಫ್ ಲಿವಿಂಗ್ ವತಿಯಿಂದ ಶಾಂಭವಿ ಮತ್ತು ಲಕ್ಷ್ಮಿ ಶಿಬಿರಾರ್ಥಿಗಳಿಗೆ ತರಬೇತಿ ನೀಡಿದರು. ಅಮ್ಮತ್ತಿ ಪ್ರೌಢಶಾಲೆಯಲ್ಲಿ ಯೋಗದ ಮಹತ್ವವನ್ನು ತಿಳಿಸಿಕೊಡಲಾಯಿತು. ತರಬೇತುದಾರರಾಗಿ ಅರುಣ್ ಭಾಗವಹಿಸಿದ್ದರು.ಸುಂಟಿಕೊಪ್ಪ: ಶಿಕ್ಷಣ ಇಲಾಖೆ ವತಿಯಿಂದ ಸ್ಥಳೀಯ ಸರ್ಕಾರಿ ಪ್ರೌಢಶಾಲೆ ಮತ್ತು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಮೈದಾನದಲ್ಲಿ ಉಭಯ ಶಾಲೆಗಳ ಮಕ್ಕಳಿಗೆ ಯೋಗ, ಪ್ರಾಣಾಯಾಮ ಹಾಗೂ ಧ್ಯಾನ ಅಭ್ಯಾಸ ಮಾಡಿಸಲಾಯಿತು. ವಿವಿಧ ಆಸನಗಳನ್ನು ವಿದ್ಯಾರ್ಥಿಗಳು ಅಭ್ಯಾಸ ಮಾಡಿದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಎಸ್.ಟಿ. ವೆಂಕಟೇಶ್ ಮಕ್ಕಳಿಗೆ ಯೋಗಾಭ್ಯಾಸ ಮಾಡಿಸುವದರ ಮೂಲಕ ಯೋಗದಿಂದ ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗಲಿದೆ ಎಂದರು. ಮುಖ್ಯ ಶಿಕ್ಷಕ ಬಾಲಕೃಷ್ಣ ಮಾತನಾಡಿದರು. ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕ ಪಿ. ನಂದ ಮಕ್ಕಳಿಗೆ ಯೋಗ ತರಬೇತಿ ನೀಡಿದರು. ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸಿ.ಎ. ಗೀತಾ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷೆ ಎಸ್.ಕೆ. ಸೌಭಾಗ್ಯ, ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ. ಸೋಮಶೇಖರ್, ಶಿಕ್ಷಕರಾದ ಎಂ.ಎನ್. ಲತಾ, ಟಿ.ಜಿ. ಪ್ರೇಮ ಕುಮಾರ್, ಎಸ್.ಆರ್. ಚಿತ್ರಾ, ಶಾಂತ ಹೆಗಡೆ ಇತರರು ಇದ್ದರು.

ನಾಪೋಕ್ಲು: ಶ್ರೀ ರಾಮಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಯೋಗ ದಿನಾಚರಣೆಯ ಮಹತ್ವ ಕುರಿತು ಸಂಸ್ಥೆಯ ಪ್ರಾಂಶುಪಾಲೆ ಬಿ.ಎಂ. ಶಾರದ ಮಾತನಾಡಿದರು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಡಾ. ಬಿ.ಎಂ. ಜಾಲಿ ಬೋಪಯ್ಯ ಅಧ್ಯಕ್ಷತೆ ವಹಿಸಿದ್ದರು. ಆಡಳಿತ ಮಂಡಳಿ ಪದಾಧಿಕಾರಿಗಳು ಉಪಸ್ಥಿತರಿದ್ದರು. ಶಿಕ್ಷಕಿ ಚಂದ್ರಕಲಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಸ್ಮಿತ ವಂದಿಸಿದರು.