ಮಡಿಕೇರಿ, ಜೂ. 28: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2018 ರ ಜನವರಿ 1 ರಲ್ಲಿದ್ದಂತೆ ಬಿ.ಇಡಿ ಹಾಗೂ ತತ್ಸಮಾನ ವಿದ್ಯಾರ್ಹತೆ (ವಿಶೇಷ ಬಿ.ಇಡಿ ಪಡೆದ ಶಿಕ್ಷಕರು ಸೇರಿದಂತೆ) ಪಡೆದ ಶಿಕ್ಷಕರಿಗೆ ಪ್ರೌಢಶಾಲಾ ಗ್ರೇಡ್-2 ಸಹ ಶಿಕ್ಷಕ ಹುದ್ದೆಗೆ ಬಡ್ತಿ ನೀಡುವ ಬಗ್ಗೆ ಅರ್ಹ ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ವಿಷಯವಾರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಿದೆ. ಈ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ತಾ. 30 ರೊಳಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ನೀಡಬಹುದಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ ತಿಳಿಸಿದ್ದಾರೆ.