ಕುಶಾಲನಗರ, ಜೂ. 28: ಕುಶಾಲನಗರದ ದೇವಾಂಗ ಸಂಘ ಮತ್ತು ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ಸಮಿತಿಯ ಆಶ್ರಯದಲ್ಲಿ ಶ್ರೀ ಚೌಡೇಶ್ವರಿ ಅಮ್ಮನವರ ವಾರ್ಷಿಕ ಜಯಂತಿ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನೆರವೇರಿತು.

ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆಯಿಂದ ಗಣಪತಿ ಹೋಮ, ಧ್ವಜಾರೋಹಣ ನಂತರ ಕಾವೇರಿ ನದಿಯಿಂದ ಕಳಸ ತಂದು ಮುಖ್ಯ ಬೀದಿಯಲ್ಲಿ ಮೆರವಣಿಗೆ ನಡೆಸಲಾಯಿತು. ಬಳಿಕ ದೇವಿಗೆ ವಿಶೇಷ ಪೂಜಾ ವಿಧಿಗಳು ಜರುಗಿದ ನಂತರ ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು.

ಸಂಜೆ 6 ಗಂಟೆಗೆ ಮಂಗಳವಾದ್ಯ ಸಹಿತ ದೇವಿಯ ಉತ್ಸವ ಮೂರ್ತಿಯನ್ನು ಅಲಂಕೃತ ಮಂಟಪದಲ್ಲಿ ಪ್ರತಿಷ್ಠಾಪಿಸಿ ಪಟ್ಟಣದಲ್ಲಿ ಮೆರವಣಿಗೆ ನಡೆಸಲಾಯಿತು.

ಕುಶಾಲನಗರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ನೂರಾರು ಭಕ್ತಾದಿಗಳು ಪೂಜೋತ್ಸವದಲ್ಲಿ ಪಾಲ್ಗೊಂಡಿದ್ದರು.

ದೇವಾಲಯ ಸಮಿತಿ ಅಧ್ಯಕ್ಷರಾದ ಡಿ.ಟಿ. ವಿಜೇಂದ್ರ, ಉಪಾಧ್ಯಕ್ಷರುಗಳಾದ ಡಿ.ಆರ್.ಸೋಮಶೇಖರ್, ಡಿ.ಕೆ. ಮಹೇಶ್, ಪ್ರಧಾನ ಕಾರ್ಯದರ್ಶಿ ಡಿ.ವಿ. ರಾಜೇಶ್, ಸಹ ಕಾರ್ಯದರ್ಶಿ ಡಿ.ವಿ. ಚಂದ್ರು, ಖಜಾಂಚಿ ಡಿ.ಆರ್. ಕೃಷ್ಣಕುಮಾರ್, ಪ್ರಮುಖರಾದ ಡಿ.ಎಸ್. ಕೋದಂಡರಾಮು, ಡಿ.ಎಸ್.ಜಗದೀಶ್ ಮತ್ತಿತರರು ಇದ್ದರು.

ಶ್ರೀ ಚೌಡೇಶ್ವರಿ ಅಮ್ಮನವರ ವಾರ್ಷಿಕ ಜಯಂತಿ ಕಾರ್ಯಕ್ರಮ ಅಂಗವಾಗಿ ಕುಶಾಲನಗರ ದೇವಾಲಯಗಳ ಒಕ್ಕೂದಿಂದ ಸಾಮೂಹಿಕ ಪೂಜಾ ಕಾರ್ಯಕ್ರಮ ನೆರವೇರಿತು. ವಿವಿಧ ದೇವಾಲಯಗಳ ಪ್ರತಿನಿಧಿಗಳು ದೇವಾಲಯಕ್ಕೆ ತೆರಳಿ ಸಾಮೂಹಿಕ ಪೂಜೆ ಸಲ್ಲಿಸಿದರು.

ದೇವಾಲಯಗಳ ಒಕ್ಕೂಟದ ಅಧ್ಯಕ್ಷ ಎಂ.ಕೆ. ದಿನೇಶ್, ಗೌರವಾಧ್ಯಕ್ಷ ಕೆ.ಆರ್. ಶಿವಾನಂದನ್, ವಿ.ಎನ್. ವಸಂತಕುಮಾರ್, ಉಪಾಧ್ಯಕ್ಷ ರಾಮದಾಸ್, ಪ್ರಧಾನ ಕಾರ್ಯದರ್ಶಿ ಎಂ.ಎನ್. ಚಂದ್ರಮೋಹನ್ ಪ್ರಮುಖ ಎಸ್.ಕೆ. ಶ್ರೀನಿವಾಸ ರಾವ್ ಮತ್ತಿತರರು ಇದ್ದರು.