ಜು. 1 ರಂದು ಪ್ರಶಸ್ತಿ ಪ್ರದಾನ

ಮಡಿಕೇರಿ, ಜೂ. 28: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 127ನೇ ಜನ್ಮದಿನಾಚರಣೆ ಅಂಗವಾಗಿ ಕೊಡಗು ಜಿಲ್ಲಾ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಶ್ರೀಶಕ್ತಿ ವೃದ್ಧಾಶ್ರಮದ ಬಂಧುಗಳಿಗೆ ವಸ್ತ್ರ ವಿತರಣೆ ಹಾಗೂ “ಕೊಡಗು ದಲಿತ ರತ್ನ” ಪ್ರಶಸ್ತಿ ಪ್ರದಾನÀ ಸಮಾರಂಭ ಜು. 1 ರಂದು ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ ಎಂದು ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್. ದಿವಾಕರ್ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದ್ದಾರೆ. ಜು. 1 ರಂದು ಬೆಳಿಗ್ಗೆ 11.30 ಗಂಟೆಗೆ ಮೈಸೂರಿನ ಉರಿಲಿಂಗ ಪೆದ್ದಿ ಸಂಸ್ಥಾನ ಮಠದ ಶ್ರೀಜ್ಞಾನಪ್ರಕಾಶ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ ನಡೆಯುವ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಉದ್ಘಾಟಿಸಲಿದ್ದಾರೆ.

ಮುಖ್ಯ ಭಾಷಣಕಾರರಾಗಿ ಪೊಲೀಸ್ ವರಿಷ್ಠಧಿಕಾರಿಗಳಾದ ಪಿ. ರಾಜೇಂದ್ರ ಪ್ರಸಾದ್, ಮುಖ್ಯ ಅತಿಥಿಗಳಾಗಿ ಕಾರ್ಯಪಾಲಕ ಅಭಿಯಂತರರಾದ ಆರ್. ವಿನಯ್‍ಕುಮಾರ್, ನಗರದ ಡಾ. ಅಂಬೇಡ್ಕರ್ ಭವನದ ಅಧ್ಯಕ್ಷ ಹೆಚ್.ಎಂ. ನಂದಕುಮಾರ್, ಪ್ರಬುದ್ಧ ನೌಕರರ ಒಕ್ಕೂಟದ ಅಧ್ಯಕ್ಷ ಡಾ. ವಿ.ಎಸ್. ಸತೀಶ್, ದಲಿತ ಸಂಘರ್ಷ ಸಮಿತಿಯ ವಿಭಾಗೀಯ ಸಂಚಾಲಕ ಎನ್. ವೀರಭದ್ರಯ್ಯ ಭಾಗವಹಿಸಲಿದ್ದಾರೆ. ಜಿಲ್ಲಾ ಆಸ್ಪತ್ರೆಯ ಉಪ ಮುಖ್ಯ ವೈದ್ಯಾಧಿಕಾರಿ ಡಾ. ಹೆಚ್.ವಿ. ದೇವದಾಸ್ ಅವರಿಗೆ ಕೊಡಗು ದಲಿತ ರತ್ನ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವದೆಂದು ತಿಳಿಸಿರುವ ದಿವಾಕರ್ ಕಾರ್ಯಕ್ರಮದಲ್ಲಿ ವೀರಾಜಪೇಟೆ ಸಂಘಟನಾ ಸಂಚಾಲಕರಾದ ಹೆಚ್.ಕೆ. ಗಣೇಶ್, ಶನಿವಾರಸಂತೆ ಸಂಘಟನಾ ಸಂಚಾಲಕ ಈರಪ್ಪ, ಪೊನ್ನಂಪೇಟೆ ತಾಲೂಕು ಸಂಚಾಲಕ ಹೆಚ್.ಆರ್. ರವಿ, ಮಡಿಕೇರಿ ತಾಲೂಕು ಸಂಚಾಲಕ ಹೆಚ್.ಎಲ್. ಕುಮಾರ, ಕುಶಾಲನಗರ ತಾಲೂಕು ಸಂಚಾಲಕ ದಾಮೋದರ, ಮಡಿಕೇರಿ ತಾಲೂಕು ಸಂಘಟನಾ ಸಂಚಾಲಕ ಎ.ಪಿ. ದೀಪಕ್ ಹಾಜರಿರುವರು ಎಂದು ಮಾಹಿತಿ ನೀಡಿದ್ದಾರೆ.