ಮಡಿಕೇರಿ, ಜೂ. 28: ಮಡಿಕೇರಿ ತಾಲೂಕಿನ ತ್ರೈಮಾಸಿಕ ಕೆಡಿಪಿ ಸಭೆಯು ಶಾಸಕ ಕೆ.ಜಿ.ಬೋಪಯ್ಯ ಅವರ ಅಧ್ಯಕ್ಷತೆಯಲ್ಲಿ ತಾ. 30 ರಂದು ಬೆಳಗ್ಗೆ 11 ಗಂಟೆಗೆ ನಗರದ ತಾಲೂಕು ಪಂಚಾಯತ್ ಕಚೇರಿ ಪಕ್ಕದಲ್ಲಿರುವ ಎಸ್.ಜಿ.ಎಸ್.ವೈ. ಕಟ್ಟಡದ ಸಭಾಂಗಣದಲ್ಲಿ ನಡೆಯಲಿದೆ.

ಸಭೆಯಲ್ಲಿ ಶಾಸಕರಾದ ಅಪ್ಪಚ್ಚುರಂಜನ್, ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಿ ಅವರು ತಿಳಿಸಿದ್ದಾರೆ.