ಮಡಿಕೇರಿ, ಜೂ. 27: ಬೆಂಗಳೂರು ನಿರ್ಮಾತೃ, ಆದರ್ಶ ಆಡಳಿತಗಾರ ಕೆಂಪೇಗೌಡರ ಆಡಳಿತ ವ್ಯವಸ್ಥೆ, ದಕ್ಷತೆ ವಿಚಾರಗಳನ್ನು ಇಂದಿನ ಯುವ ಜನರು ತಿಳಿದುಕೊಳ್ಳು ವಂತಾಗಬೇಕು ಎಂದು ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅವರು ಸಲಹೆ ಮಾಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಬುಧವಾರ ನಡೆದ ನಾಡಪ್ರಭು ಕೆಂಪೇಗೌಡ ಜಯಂತ್ಯುತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಾಡಪ್ರಭು ಕೆಂಪೇಗೌಡರು ಆದರ್ಶ ಆಡಳಿತಗಾರರಾಗಿ ಬೆಂಗಳೂರು ನಗರ ನಿರ್ಮಾಣಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಶಿಸ್ತು ಬದ್ಧ ಹಾಗೂ ಯೋಜನಾ ಬದ್ಧ ಬೆಂಗಳೂರು ನಗರ ನಿರ್ಮಾಣಕ್ಕೆ ಅಡಿಗಲ್ಲು ಸ್ಥಾಪಿಸಿ ಇಂದು ಬೃಹತ್ ಹೆಮ್ಮರವಾಗಿ ಬೆಂಗಳೂರು ನಗರ ಬೆಳೆದಿದೆ ಎಂದು ಶಾಸಕರು ಹೇಳಿದರು.

ಸರ್ಕಾರಿ ಜಯಂತಿಗಳಲ್ಲಿ ಸಾರ್ವಜನಿಕರ ಸಂಖ್ಯೆ ಕಡಿಮೆ ಇರುತ್ತದೆ. ಆಯಾಯ ಸಮಾಜದವರು ಬೆರಳೆಣಿಕೆಯಷ್ಟು ಮಂದಿ ಪಾಲ್ಗೊಳ್ಳುತ್ತಾರೆ. ಆದ್ದರಿಂದ ರಾಷ್ಟ್ರೀಯ ಹಬ್ಬಗಳನ್ನ್ಬು ಹೊರತು ಪಡಿಸಿ, ಸರ್ಕಾರದ ಜಯಂತಿಗಳನ್ನು ಒಂದೇ ದಿನ ಆಚರಿಸುವದು ಒಳಿತು. ಈ ಸಂಬಂಧ

(ಮೊದಲ ಪುಟದಿಂದ) ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಲಾಗುವದು ಎಂದು ಅಪ್ಪಚ್ಚುರಂಜನ್ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಮಾತನಾಡಿ, ಬೆಂಗಳೂರು ನಗರ ನಿರ್ಮಾಣ ಮಾಡಿದ ಕೀರ್ತಿ ಕೆಂಪೇಗೌಡರದ್ದಾಗಿದೆ. ಸುಮಾರು 38 ವರ್ಷಗಳ ಕಾಲ ಬೆಂಗಳೂರು ಆಳ್ವಿಕೆ ಮಾಡಿದ್ದಾರೆ. ಕೆಂಪೇಗೌಡರು ಸ್ಥಾಪಿಸಿ ಕಟ್ಟಿ ಬೆಳೆಸಿದ ನಗರ ಇಂದು ವಿಶ್ವ ವಿಖ್ಯಾತವಾಗಿದೆ. ಈ ನಗರ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿದ್ದು, ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರು ಇಡಲಾಗಿದೆ ಎಂದು ತಿಳಿಸಿದರು.

ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಬಿ.ಎಂ.ಬೆಳ್ಯಪ್ಪ ಅವರು ಮಾತನಾಡಿ ಕೆಂಪೇಗೌಡರು ಬೆಂಗಳೂರನ್ನು ಮಾದರಿ ನಗರವಾಗಿ ದೂರದೃಷ್ಟಿಯಿಂದ ನಿರ್ಮಿಸಿದರು. ವೃತ್ತಿ, ವ್ಯಾಪಾರ, ಕಸುಬುಗಳಿಗೆ ಅನುಗುಣವಾಗಿ ಅರಳೆಪೇಟೆ, ಅಕ್ಕಿಪೇಟೆ, ಬಳೇಪೇಟೆ, ಕುಂಬಾರ ಪೇಟೆ, ಚಿಕ್ಕಪೇಟೆ, ದೊಡ್ಡಪೇಟೆ ಹೀಗೆ ನಗರವನ್ನು ವ್ಯವಸ್ಥಿತವಾಗಿ ನಿರ್ಮಿಸಿದ ಹಿರಿಮೆ ಕೆಂಪೇಗೌಡರದ್ದಾಗಿದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷರಾದ ಲೋಕೇಶ್ ಸಾಗರ್ ಮಾತನಾಡಿ, ಕೆಂಪೇಗೌಡರ ಆದರ್ಶಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಸರ್ಕಾರ ವಿವಿಧ ಜಯಂತಿಗಳನ್ನು ಆಚರಣೆ ಮಾಡುತ್ತಿದ್ದು, ಇಂತಹ ಮಹಾನೀಯರ ಸಾಧನೆಗಳನ್ನು ಅಧ್ಯಯನ ಮಾಡಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಎಂ. ಚಂಗಪ್ಪ ಮಾತನಾಡಿ, ಬೆಂಗಳೂರು ಬೆಳವಣಿಗೆಗೆ ಭದ್ರಬುನಾದಿ ಹಾಕಿದ ನಾಡಪ್ರಭು ಕೆಂಪೇಗೌಡ ಸ್ಮರಣೀಯರು ಎಂದು ಹೇಳಿದರು.

ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ ಮಾತನಾಡಿ, ಬೆಂಗಳೂರು ನಗರ ವಿಶ್ವದಲ್ಲಿ ಪ್ರಸಿದ್ದಿ ಪಡೆಯಲು ಕೆಂಪೇಗೌಡರು ಭದ್ರ ಬುನಾದಿ ಹಾಕಿದ್ದರು. ಆ ನಿಟ್ಟಿನಲ್ಲಿ ನಗರ ಬೆಳವಣಿಗೆ ಕಂಡಿದೆ ಎಂದು ಅವರು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಮಾತನಾಡಿ, ಬೆಂಗಳೂರು ನಗರವು ಬೃಹತ್ ಮಹಾನಗರ ಪಾಲಿಕೆಯಾಗಿ 1.25 ಕೋಟಿ ಜನಸಂಖ್ಯೆ ಹೊಂದಿದೆ. ಹಾಗೆಯೇ 80 ಲಕ್ಷ ವಾಹನಗಳು ಸಂಚರಿಸುತ್ತಿವೆ. ಸಾಕಷ್ಟು ಐ.ಟಿ.ಬಿ.ಟಿ. ಕಂಪೆನಿಗಳು, ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು ಸೇರಿದಂತೆ ಇದೊಂದು ಅದ್ಭುತ ನಗರ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಿ.ಎಂ. ಸತೀಶ್ ಕುಮಾರ್ ಮಾತನಾಡಿ, ನಾಡಪ್ರಭು ಕೆಂಪೇಗೌಡರ ವ್ಯಕ್ತಿತ್ವ ಗುಣಗಳನ್ನು ಅರಿತುಕೊಳ್ಳುವದರ ಜೊತೆಗೆ, ಅಳವಡಿಸಿಕೊಳ್ಳು ವಂತಾಗಬೇಕು ಎಂದು ಹೇಳಿದರು.

ಜಿ.ಪಂ. ಸಿಇಓ ಪ್ರಶಾಂತ್ ಕುಮಾರ್ ಮಿಶ್ರ, ಉಪ ವಿಭಾಗಾಧಿಕಾರಿ ರಮೇಶ್ ಪಿ. ಕೋನರೆಡ್ಡಿ, ಇತರರು ಇದ್ದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಮಣಜೂರು ಮಂಜುನಾಥ್ ಸ್ವಾಗತಿಸಿದರು, ಕಲಾವಿದ ಷಡಕ್ಷರಿ ಮತ್ತು ತಂಡದವರು ನಾಡಗೀತೆ ಹಾಡಿದರು, ನಿವೃತ್ತ ಉಪನ್ಯಾಸಕರಾದ ಶಂಕರಯ್ಯ ನಿರೂಪಿಸಿದರು, ವಂದಿಸಿದರು.