ಚೆಟ್ಟಳ್ಳಿ, ಜೂ. 28: ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 30 ವರ್ಷಗಳ ಕಾಲ ಸುಧೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಮುಖ್ಯಕಾರ್ಯನಿರ್ವಹಣಾಧಿಕಾರಿ ಎಂ.ಎ ಮಾಯಮ್ಮ ಅವರಿಗೆ ಸಂಘದ ನರೇಂದ್ರ ಮೋದಿ ರೈತ ಸಹಕಾರ ಭವನದಲ್ಲಿ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಲಾಯಿತು. ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿಉತ್ತಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಮಾಯಮ್ಮ ಅವರ ಸೇವೆಯನ್ನು ಸ್ಮರಿಸಿದರು. ಎಂ.ಎ. ಮಾಯಮ್ಮ ಅವರು ಹಿತನುಡಿಗಳನ್ನಾಡಿದರು. ಅವರ ಸೇವೆಯನ್ನು ಸ್ಮರಿಸಿ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

ಈ ಸಂದರ್ಭ ಸಂಘದ ನಿರ್ದೇಶಕರು, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸಂಘದ ಸಿಬ್ಬಂದಿಯವರು ಉಪಸ್ಥಿತರಿದ್ದರು.