ಮಡಿಕೇರಿ, ಜೂ. 28: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಗ್ರೀನ್ ಗ್ರಾಮೀಣಾಭಿವೃದ್ಧಿ ಮತ್ತು ತರಬೇತಿ ಸಂಸ್ಥೆ, ಮೈಸೂರು ಇವರ ಸಹಯೋಗದಲ್ಲಿ ಕೊಡಗು ಜಿಲ್ಲೆಯ ಪೆನ್‍ಶನ್ ಲೈನ್, ಪೊಲೀಸ್ ವಸತಿ ಗೃಹ ಸಂಖ್ಯೆ. 12/35, ಮಡಿಕೇರಿ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ ಕಾರ್ಯ ನಿರ್ವಹಿಸುತ್ತಿದೆ.

ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದಲ್ಲಿ ಗೌರವಧನ ಆಧಾರದ ಮೇಲೆ ಯೋಜನಾ ಸಂಯೋಜಕರು 1 ಹುದ್ದೆ ವಿದ್ಯಾರ್ಹತೆ ಸ್ನಾತಕೋತ್ತರ ಪದವಿ, ಕೌನ್ಸಿಲರ್/ ಸಮಾಜ ಸೇವಕರು 3 ಹುದ್ದೆ ವಿದ್ಯಾರ್ಹತೆ ಸ್ನಾತಕೋತ್ತರ ಪದವಿಯಲ್ಲಿ ಸಮಾಜ ಕಾರ್ಯ, ಕಚೇರಿ ಸೇವಕರು/ ಸ್ವಚ್ಛತಾಗಾರರು 1 ಹುದ್ದೆ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ. ಈ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2 ವರ್ಷದ ಅನುಭವ ಹೊಂದಿರತಕ್ಕದ್ದು.

ಸಂದರ್ಶನ ತಾ. 30 ರಂದು ನಡೆಯಲಿದೆ. ಅರ್ಜಿಗಳನ್ನು ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ ಪೆನ್‍ಶನ್ ಲೈನ್, ಪೊಲೀಸ್ ವಸತಿ ಗೃಹ ಸಂಖ್ಯೆ.12/35, ಮಡಿಕೇರಿಗೆ ಸಲ್ಲಿಸುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ.08272 221215, 1090, 9448425408, 9900667482 ನ್ನು ಸಂಪರ್ಕಿಸಲು ಕೋರಲಾಗಿದೆ.

ಸಾಲ ಸೌಲಭ್ಯಕ್ಕೆ

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2018-19ನೇ ಸಾಲಿಗೆ ರಾಜ್ಯ ಸರ್ಕಾರದ ಹಾಗೂ ಎನ್.ಬಿ.ಸಿ.ಎಫ್.ಡಿ.ಸಿ.ಯ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆಯಲು ಇಚ್ಛಿಸುವವರು ನಿಗದಿತ ಅರ್ಜಿ ನಮೂನೆಗಳನ್ನು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ ಪಡೆಯುವದು. ಅರ್ಜಿಯನ್ನು ಜುಲೈ 16 ರೊಳಗೆ ಪಡೆದುಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜುಲೈ 25 ರೊಳಗೆ ಸಲ್ಲಿಸುವದು.

ಈಗಾಗಲೇ ನಿಗಮದ ಯೋಜನೆಗಳಡಿ ಒಮ್ಮೆ ಸೌಲಭ್ಯ ಪಡೆದಿರುವವರು ಹಾಗೂ ಅವರ ಕುಟುಂಬದವರು ಪುನ: ಅರ್ಜಿ ಸಲ್ಲಿಸಲು ಅರ್ಹರಾಗಿರುವದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವದು.

ಅರ್ಹತೆ: ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಸರ್ಕಾರದ ಆದೇಶದಂತೆ ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪ ಜಾತಿಗಳಿಗೆ ಸೇರಿರಬೇಕು. ಗಂಗಾ ಕಲ್ಯಾಣ ಯೋಜನೆಯಲ್ಲಿ ನೀರಾವರಿ ಸೌಲಭ್ಯ ಪಡೆಯಲು ಅರ್ಜಿದಾರರರು ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು ಹಾಗೂ ಒಂದೇ ಕಡೆ ಹೊಂದಿಕೊಂಡಿರುವಂತೆ ಕನಿಷ್ಟ 1 ಎಕರೆ ಹಾಗೂ ಗರಿಷ್ಠ 5 ಎಕರೆ ಜಮೀನು ಹೊಂದಿರಬೇಕು. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು.

ಯೋಜನೆಗಳ ವಿವರ: ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಬ್ಯಾಂಕ್‍ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ, ಅರಿವು-ಶೈಕ್ಷಣಿಕ ಸಾಲ ಯೋಜನೆ, ಗಂಗಾ ಕಲ್ಯಾಣ ವೈಯಕ್ತಿಕ ನೀರಾವರಿ ಯೋಜನೆ, ಮಹಿಳೆಯರಿಗೆ ಮೈಕ್ರೋ ಕ್ರೆಡಿಟ್ ಸಾಲ ಯೋಜನೆ, ಕಮ್ಮಾರಿಕೆ, ಅಕ್ಕಸಾಲಿ ಮತ್ತು ಬಡಗಿ ಉದ್ಯಮಿಗಳಿಗೆ ತರಬೇತಿ ಮತ್ತು ಸಾಲ ಯೋಜನೆ, ರಾಜ್ಯ ಸರ್ಕಾರದ ಯೋಜನೆಗಳಿಗೆ ಕುಟುಂಬದ ವಾರ್ಷಿಕ ವರಮಾನವು ಗ್ರಾಮಾಂತರ ಪ್ರದೇಶದವರಿಗೆ ರೂ. 40 ಸಾವಿರಗಳಿಗಿಂತ ಹಾಗೂ ಪಟ್ಟಣ ಪ್ರದೇಶದವರಿಗೆ ರೂ. 55 ಸಾವಿರ ಗಳಿಗಿಂತ ಕಡಿಮೆ ಇರಬೇಕು. (ಅರಿವು ಯೋಜನೆಗೆ ವಾರ್ಷಿಕ ವರಮಾನ ರೂ. 3.50 ಲಕ್ಷಗಳ ಮಿತಿ ಇರಬೇಕು).

ಎನ್.ಬಿ.ಸಿ.ಎಫ್.ಡಿ.ಸಿ ಯೋಜನೆಗಳ ವಿವರ: ಅವಧಿ ಸಾಲ ಯೋಜನೆಗಳು-ಕೃಷಿ ವಲಯ, ಸಣ್ಣ ವ್ಯಾಪಾರ, ಸೇವಾ ವಲಯ, ಸಾರಿಗೆ ವಲಯ, ಶೈಕ್ಷಣಿಕ ಸಾಲ ಯೋಜನೆ, ನ್ಯೂ ಸ್ವರ್ಣಿಮಾ ಸಾಲ (ಮಹಿಳಾ ಯೋಜನೆ), ಶಿಲ್ಪಸಂಪದ, ಸ್ವಯಂ ಸಕ್ಷಮ ಸಾಲ, ಮೈಕ್ರೋಫೈನಾನ್ಸ್, ಕೃಷಿಸಂಪದ, ಮಹಿಳಾ ಸಮೃದ್ಧಿ ಯೋಜನೆ (ಮಹಿಳಾ ಸ್ವಸಹಾಯ ಗುಂಪುಗಳಿಗೆ ಮತ್ತು ವೈಯಕ್ತಿಕ ಸಾಲ) ಎನ್‍ಬಿಸಿಎಫ್‍ಡಿಸಿ ಯೋಜನೆಗಳಲ್ಲಿ ಸಾಲ ಪಡೆಯುವರ ಕುಟುಂಬದ ವಾರ್ಷಿಕ ವರಮಾನವು ಗ್ರಾಮಾಂತರ ಪ್ರದೇಶದವರಿಗೆ ಹಾಗೂ ಪಟ್ಟಣ ಪ್ರದೇಶದವರಿಗೆ ರೂ. 3 ಲಕ್ಷಗಳಿಗಿಂತ ಕಡಿಮೆ ಇರಬೇಕು.

ಯೋಜನೆಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂರವಾಣಿ ಸಂಖ್ಯೆ 08272-221656 ಮತ್ತು ಆಯಾ ವಿಭಾಗದ ಸಹಾಯಕ ಪ್ರಧಾನ ವ್ಯವಸ್ಥಾಪಕರ ಕಚೇರಿ ಮತ್ತು ಕೇಂದ್ರ ಕಚೇರಿಯಲ್ಲಿ ಸಂಪರ್ಕಿಸಬಹುದು. ನಿಗಮದ ತಿebsiಣe:ತಿತಿತಿ.ಞಚಿಡಿಟಿಚಿಣಚಿಞಚಿ.gov.iಟಿ/ಞvಛಿಜಛಿಟ ರಲ್ಲಿ ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ ಪಡೆಯಬಹುದಾಗಿದೆ ಎಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ವಿದ್ಯಾರ್ಥಿಗಳ ವ್ಯಾಸಂಗಕ್ಕೆ

ಪ್ರಸಕ್ತ (2018-19) ಸಾಲಿಗೆ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತದಿಂದ, ಬೆಸ್ತ, ಕಬ್ಬಲಿಗ, ಕೋಲಿ, ಗಂಗಾಮತ, ಮೊಗವೀರ ಮತ್ತು ಇದರ ಉಪ ಜಾತಿಗಳಿಗೆ ಸೇರಿದ (ಹಿಂದುಳಿದ ವರ್ಗಗಳ ಪಟ್ಟಿಯಲ್ಲಿನ ಜಾತಿಗಳಿಗೆ) ವಿದ್ಯಾರ್ಥಿಗಳ ವ್ಯಾಸಂಗಕ್ಕೆ, ಕೋರ್ಸ್‍ನ ವಾಸ್ತವಿಕ ವೆಚ್ಚ ವಾರ್ಷಿಕ ಗರಿಷ್ಠ ರೂ. 1 ಲಕ್ಷಗಳಂತೆ ಶೇ. 2 ರ ಬಡ್ಡಿ ದರದಲ್ಲಿ ಸಾಲ ಮಂಜೂರು ಮಾಡಲಾಗುವದು.

ವಿದ್ಯಾರ್ಥಿಗಳು ಸಿಇಟಿ ಮೂಲಕ ಅಥವಾ ಮೆರಿಟ್ ಆಧಾರದ ಮೇಲೆ ಸೀಟು ಪಡೆದು ಬಿ.ಇ, ಎಂ.ಬಿ.ಬಿ.ಎಸ್, ಬಿ.ಯೂ.ಎಂ.ಎಸ್, ಬಿ.ಡಿ.ಎಸ್, ಬಿ.ಎ.ಎಂ.ಸ್, ಬಿ.ಎಚ್.ಎಂ.ಎಸ್, ಬಿ.ಹೆಚ್.ಎಂ.ಎಸ್, ಎಂ.ಬಿ.ಎ, ಎಂ.ಟೆಕ್, ಎಂ.ಇ, ಎಂ.ಡಿ, ಪಿ,ಹೆಚ್.ಡಿ, ಬಿ.ಸಿ.ಎ/ಎಂ.ಸಿ.ಎ, ಎಂ.ಎಸ್.ಕೃಷಿ, ಬಿ.ಎಸ್.ಸಿ ಪ್ಯಾರಾಮೆಡಿಕಲ್, ಬಿ.ಎಸ್.ಸಿ.ನರ್ಸಿಂಗ್, ಬಿ.ಫಾರಂ/ಎಂ.ಫಾರಂ, ಬಿ.ಎಸ್.ಸಿ.ಬಯೋ ಟೆಕ್ನಾಲಜಿ, ಬಿ.ಟೆಕ್,ಬಿ.ಪಿ.ಟಿ, ಬಿ.ವಿ.ಎಂ.ಸಿ/ಎಂ.ವಿ.ಎಸ್.ಸಿ, ಬಿ.ಎನ್.ಎಂ, ಬಿ.ಹೆಚ್.ಎಂ, ಎಂ.ಡಿ.ಎಸ್, ಎಂ.ಎಸ್.ಡಬ್ಲ್ಯೂ, ಎಲ್.ಎಲ್.ಎಮ್, ಎಂ.ಎಫ್.ಎ, ಎಂ.ಎಸ್.ಸಿ. ಬಯೋ ಟೆಕ್ನಾಲಜಿ ಮತ್ತು ಎಂ.ಎಸ್‍ಸಿ.ಎಜಿ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡಬೇಕು.

ವಿದ್ಯಾರ್ಥಿ ಮತ್ತು ಕುಟುಂಬದ ವಾರ್ಷಿಕ ವರಮಾನ ರೂ. 3.50 ಲಕ್ಷಗಳ ಮಿತಿಯಲ್ಲಿರಬೇಕು. ಈ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಶೈಕ್ಷಣಿಕ ಸಾಲ ಪಡೆಯಲು ಬಯಸಿದಲ್ಲಿ ಸ್ವ-ವಿವರಗಳನ್ನೊಳಗೊಂಡ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ (ವಿದ್ಯಾರ್ಥಿಯ ಹೆಸರು, ವಾಸಸ್ಥಳದ ವಿಳಾಸ, ವ್ಯಾಸಂಗ ಮಾಡುವ ಕೋರ್ಸ್, ವ್ಯಾಸಂಗ ಮಾಡುವ ಕಾಲೇಜಿನಿಂದ ಪಡೆದ ವ್ಯಾಸಂಗ ದೃಢೀಕರಣ ಪತ್ರ, ಮೆರಿಟ್ ಮೇಲೆ ಸೀಟು ಪಡೆದಿರುವ ಬಗ್ಗೆ ಸಿಇಟಿ/ ಸಂಬಂಧಿಸಿದ ವಿದ್ಯಾಸಂಸ್ಥೆಯ ಮೆರಿಟ್ ಪ್ರಮಾಣ ಪತ್ರ, ಜಾತಿ ಮತ್ತು ಆದಾಯದ ಪ್ರಮಾಣ ಪತ್ರ, ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಭಾವಚಿತ್ರ(ಪಾಸ್‍ಪೋರ್ಟ್)ವನ್ನು ಕೊಡಗು ಜಿಲ್ಲೆಯ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಅಂಚೆ ಮೂಲಕ/ ಖುದ್ದಾಗಿ ಜುಲೈ 31 ರೊಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ವಿವರಗಳಿಗೆ ಕಚೇರಿ ವೇಳೆಯಲ್ಲಿ ದೂರವಾಣಿ ಸಂಖ್ಯೆ; 08272-221656 ಮೂಲಕ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ವ್ಯವಸ್ಥಾಪಕರು ತಿಳಿಸಿದ್ದಾರೆ.