ಗೋಣಿಕೊಪ್ಪ: ಇಲ್ಲಿಗೆ ಸಮೀಪದ ಅತ್ತೂರುವಿನ ನ್ಯಾಷನಲ್ ಅಕಾಡೆಮಿ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭ ಶಾಲಾ ಸಂಸ್ಥಾಪಕಿ ಅಪ್ಪನೆರವಂಡ ಶಾಂತಿ ಅಚ್ಚಪ್ಪ ಅವರು ಯೋಗದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಪ್ರಾಂಶುಪಾಲ ಅರುಣ್ ಕುಮಾರ್ ಅವರು ಯೋಗದ ಕುರಿತಾಗಿ ಮಾತನಾಡಿದರು. ಯೋಗ ಶಿಕ್ಷಕಿ ಮೀನಾ ನೇತೃತ್ವದಲ್ಲಿ ಶಾಲಾ ವಿದ್ಯಾರ್ಥಿಗಳು ಸಾಮೂಹಿಕ ಯೋಗದಲ್ಲಿ ಭಾಗಿಯಾಗಿದ್ದರು.ನಾಪೆÉÇೀಕ್ಲು: ಸಮೀಪದ ಚೆಯ್ಯಂಡಾಣೆ ಪ್ರಾಥಮಿಕ ಶಾಲೆಯಲ್ಲಿ ಮಡಿಕೇರಿಯ ವುಶೂ ಸಂಸ್ಥೆ ವತಿಯಿಂದ ಅಂತರರ್ರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದ ಶ್ರೀಜಿತ್ ಪಿ.ಕೆ. ಯೋಗದಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದರು.

ಕಾರ್ಯಕ್ರಮವನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸೀತಾರಾಮ್ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಡಿಕೇರಿ ತಾಲೂಕು ವುಶೂ ಸಂಸ್ಥೆಯ ದಿಲೀಪ್ ನಾಯರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಸದಸ್ಯ ಶರಣು, ಸಾಮಾಜಿಕ ಕಾರ್ಯಕರ್ತ ಶ್ಯಾಮ್ ಪ್ರಸಾದ್, ಡಾ. ಬೊಪ್ಪಂಡ ಜಾಲಿ ಬೋಪಯ್ಯ, ಯುವ ಬರಹಗಾರ ಲವೀನ್ ಲೋಪೆನ್ ಇದ್ದರು.

ನಂತರ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ನಡೆಯಿತು.