ಗೋಣಿಕೊಪ್ಪ ವರದಿ, ಜೂ. 29: ತಿತಿಮತಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಿತಿಮತಿ ಅಂಗನವಾಡಿ ಕಾರ್ಯಕರ್ತೆಯರ ವರ್ತುಲದಿಂದ ನಡೆದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಇಲಾಖೆಯಲ್ಲಿ ಯೋಜನಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಎ.ಪಿ. ಲೀಲಾವತಿ ಅವರನ್ನು ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಕಾರ್ಯಕರ್ತೆಯರು ಮತ್ತು ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಇದ್ದರು.