ವೀರಾಜಪೇಟೆ, ಜೂ. 29: ವೀರಾಜಪೇಟೆಯ ಸರ್ವೋದಯ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲೆ ಡಾ. ಶಾಹಿದಾ ಶಾನವಾಝ್ ಅಧ್ಯಕ್ಷತೆ ವಹಿಸಿದ್ದರು. ಯೋಗ ಸಂಪನ್ಮೂಲ ವ್ಯಕ್ತಿ ಪಿ.ಎ. ಲಕ್ಷ್ಮೀನಾರಾಯಣ್ ಹಾಜರಿದ್ದು ಯೋಗದ ಮಹತ್ವ ಹಾಗೂ ಆರೋಗ್ಯದ ಸಂರಕ್ಷಣೆಯನ್ನು ಶಿಕ್ಷಣಾರ್ಥಿಗಳಿಗೆ ತಿಳಿಸಿದರು.

ಯೋಗ ಶಿಕ್ಷಣ ಸಂಯೋಜಕಿ ಪದ್ಮಲತಾ ಉಪಸ್ಥಿತರಿದ್ದು ಮಾತನಾಡಿದರು. ದೀಪಿಕಾ ಹಾಗೂ ಲೋಕೇಶ್ ಮಾತನಾಡಿದರು. ಯಶಸ್ವಿನಿ ಪ್ರಾರ್ಥಿಸಿ, ಚೇತನ ಕಾರ್ಯಕ್ರಮ ನಿರೂಪಿಸಿದರು.