ಗೋಣಿಕೊಪ್ಪ ವರದಿ: ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯನ್ನು ಗೋಣಿಕೊಪ್ಪ ಪೋಲೀಸ್ ಇಲಾಖೆ ಮತ್ತು ಕಾವೇರಿ ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹಯೋಗದಲ್ಲಿ ಕಾವೇರಿ ಪದವಿಪೂರ್ವ ಕಾಲೇಜಿನಲ್ಲಿ ಆಚರಿಸಲಾಯಿತು.

ಸಬ್‍ಇನ್ಸ್‍ಪೆಕ್ಟರ್ ಸುಬ್ಬಯ್ಯ ಮಾತನಾಡಿ, ಯುವಕರು ಕುತೂಹಲಕ್ಕಾಗಿ ಮದ್ಯ, ಬೀಡಿ, ಸಿಗರೇಟು, ಗಾಂಜಾ, ಅಫೀಮು, ಬ್ರೌನ್‍ಶುಗರ್ ಇತ್ಯಾದಿಗಳನ್ನು ಸೇವಿಸಲು ಹೋಗಿ ಕೊನೆಗೆ ದುಶ್ಚಟಗಳ ದಾಸರಾಗಿ ಬಿಡುತ್ತಾರೆ. ಒಮ್ಮೆ ಇಂತಹ ದುಶ್ಚಟಗಳಿಗೆ ಬಲಿಯಾದರೆ ಮತ್ತೆಂದೂ ಹೊರಬರಲಾಗುವದಿಲ್ಲ. ಮಾದಕ ದ್ರವ್ಯ ವ್ಯಸನಿಗಳಿಗೆ ಕ್ಯಾನ್ಸರ್, ಹೃದಯಾಘಾತ, ಕರುಳುಬೇನೆ, ರಕ್ತದೊತ್ತಡದಂತಹ ಅನೇಕ ಕಾಯಿಲೆಗಳು ಬಾದಿಸುತ್ತವೆ. ಕೊನೆಗೆ ಸಾವಿನ ದವಡೆಗೆ ಸಿಲುಕಿ ತಮ್ಮ ಅಮೂಲ್ಯ ಜೀವನವನ್ನು ಹಾಳುಮಾಡಿಕೊಳ್ಳುವಂತಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಕಾವೇರಿ ಎಜುಕೇಷನ್ ಸೊಸೈಟಿಯ ಅಧ್ಯಕ್ಷ ಡಾ. ಎ.ಸಿ. ಗಣಪತಿ ಮಾತನಾಡಿ, ಯುವಕರು ದೇಶದ ಆಸ್ತಿ ಇದ್ದಂತೆ. ಯುವಕರಲ್ಲಿ ಅಪಾರವಾದ ದೈಹಿಕ-ಮಾನಸಿಕ ಶಕ್ತಿ ಸಾಮಥ್ರ್ಯಗಳು ಇವೆ. ಆದ್ದರಿಂದ ಯುವಕರನ್ನು ದುಶ್ಚಟಗಳಿಗೆ ಬಲಿಯಾಗದ ಹಾಗೆ ಕಾಪಾಡುವದು ಎಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ನುಡಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ತಿರುಮಲಯ್ಯ ಉಪಸ್ಥಿತರಿದ್ದರು.

ಮಡಿಕೇರಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಟ ವಿರೋಧಿ ದಿನಾಚರಣೆಯ ಸಪ್ತಾಹದ ಅಂಗವಾಗಿ ಕುಶಾಲನಗರÀದ ಅನುಗ್ರಹ ಪದವಿ ಪೂರ್ವ ಕಾಲೇಜಿನ ಸಹಯೋಗದೊಂದಿಗೆ ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪ್ಪರಿಣಾಮದ ಬಗ್ಗೆ ಅರಿವು ಜಾಥಾ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋವೈದ್ಯರು, ಡಾ.ಡೇವಿನ್ ಲಿನೇಕರ್ ಕರ್ಕಡ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾದಕ ವಸ್ತುಗಳ ಬಳಕೆಯಿಂದ ವಿದ್ಯಾರ್ಥಿ ಸಮುದಾಯ ದೈಹಿಕವಾಗಿ ಮತ್ತು ಮಾನಸಿಕವಾಗಿ ಖಿನ್ನತೆಗೆ ಒಳಗಾಗುತ್ತಾರೆ ಇದರಿಂದ ಯುವಸಮೂಹಕ್ಕೆ ಕೆಟ್ಟ ಪರಿಣಾಮ ಬೀರುವದಾಗಿ ಸಂದೇಶ ನೀಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಶಕ್ತಿಧಾಮ ಮಾದಕ ವ್ಯಸನಿಗಳ ಸಮಗ್ರ ಪುನರ್ವಸತಿ ಕೇಂದ್ರ ಸಂಯೋಜಕ ಪ್ರಭು ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.ಸೋಮವಾರಪೇಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೋಮವಾರಪೇಟೆ ವಲಯದ ವತಿಯಿಂದ ಸಮೀಪದ ಬಿಟಿಸಿಜಿ ಪದವಿಪೂರ್ವ ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ನಡೆಯಿತು.

ಕಾಲೇಜು ಪ್ರಾಂಶುಪಾಲ ಶರಣ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಯೋಜನೆಯ ಮೇಲ್ವಿಚಾರಕ ರಮೇಶ್ ಮಾತನಾಡಿ, ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯೋಜನೆಯ ಒಕ್ಕೂಟದ ಅಧ್ಯಕ್ಷೆ ರುಕ್ಮಿಣಿ ವಹಿಸಿದ್ದರು. ಕಾಲೇಜಿನ ಉಪನ್ಯಾಸಕರಾದ ತುಳಸಿ, ಶೈಲ ಹಾಗೂ ಸೇವಾ ಪ್ರತಿನಿಧಿಗಳು ಹಾಜರಿದ್ದರು. ಕುಶಾಲನಗರ: ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಅಧಿಕಗೊಳ್ಳುತ್ತಿರುವದು ವಿಷಾದಕರ ಸಂಗತಿ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೋಮವಾರಪೇಟೆ ತಾಲೂಕು ಯೋಜನಾಧಿಕಾರಿ ವೈ. ಪ್ರಕಾಶ್ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ವಲಯದ ಅಶ್ರಯದಲ್ಲಿ ಹೊಸಪಟ್ಟಣ ಗ್ರಾಮದ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಾದಕ ವಸ್ತು ವಿರೋಧಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಾದಕ ವಸ್ತುಗಳನ್ನು ತ್ಯಜಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಪಣ ತೊಡುವ ಮೂಲಕ ಸ್ವಸ್ಥ ಸಮಾಜ ನಿರ್ಮಾಣಗೊಳಿಸಬೇಕಿದೆ ಎಂದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ನಂಜರಾಯಪಟ್ಟಣ ಗ್ರಾ.ಪಂ. ಸದಸ್ಯ ಟಿ.ಕೆ. ಸುಮೇಶ್ ಮತ್ತು ಅಯ್ಯಂಡ್ರ ಲೋಕನಾಥ್ ಮಾತನಾಡಿ, ಪೋಷಕರ ದುಶ್ಚಟಗಳು ಮಕ್ಕಳ ಮನಸ್ಸಿನ ಮೇಲೆ ಗಾಢವಾದ ಪರಿಣಾಮ ಉಂಟುಮಾಡಲಿದೆ. ಆದ್ದರಿಂದ ಪೋಷಕರು ಮನೆಯಲ್ಲಿ ತಮ್ಮ ಮಕ್ಕಳ ಮುಂದೆ ಮಾದಕ ವಸ್ತುಗಳ ಬಳಕೆಗೆ ಕಡಿವಾಣ ಹಾಕುವದರೊಂದಿಗೆ ದುಶ್ಚಟದಿಂದ ಶಾಶ್ವತವಾಗಿ ಹೊರಬರಲು ಪ್ರಯತ್ನಿಸಬೇಕಿದೆ ಎಂದರು.

ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಸಂಚಾಲಕ ಎಂ.ಎನ್. ಚಂದ್ರಮೋಹನ್ ಕಾರ್ಯಕ್ರಮ ಉದ್ಘಾಟಿಸಿ ದಿನದ ಮಹತ್ವದ ಕುರಿತು ಅರಿವು ಮೂಡಿಸಿದರು.

ಯೋಜನೆಯ ನಂಜರಾಯಪಟ್ಟಣ, ಹೊಸಪಟ್ಟಣ ಅಧ್ಯಕ್ಷರುಗಳಾದ ಭೋಜಮ್ಮ ಹಾಗೂ ಮೋಹಿನಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಂಜರಾಯಪಟ್ಟಣ, ಗ್ರಾ.ಪಂ. ಸದಸ್ಯ ತಮ್ಮಯ್ಯ, ವಲಯ ಮೇಲ್ವಿಚಾರಕ ಹರೀಶ್, ಸೇವಾ ಪ್ರತಿನಿಧಿಗಳಾದ ಲಿಲ್ಲಿ, ಪಾರ್ವತಿ, ನವಜೀವನ ಸಮಿತಿ ಪ್ರಮುಖರಾದ ದಿನೇಶ್ ಇದ್ದರು.