ಸೋಮವಾರಪೇಟೆ: ಪರಿಸರ ರಕ್ಷಣೆಯ ಸಂಕಲ್ಪ ಸಾಮಾಜಿಕ ಬದ್ಧತೆಯಾಗಬೇಕು ಎಂದು ಸೋಮವಾರಪೇಟೆ ವಲಯ ಅರಣ್ಯಾಧಿಕಾರಿ ಎನ್. ಲಕ್ಷ್ಮೀಕಾಂತ್ ಅಭಿಪ್ರಾಯಿಸಿದರು.

ಇಲ್ಲಿನ ಜೇಸಿಐ ಪುಷ್ಪಗಿರಿ ಮಹಿಳಾ ವಿಭಾಗ ಮತ್ತು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಮೀಪದ ದೊಡ್ಡಮಳ್ತೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ಪರಿಸರ ದಿನಾಚರಣೆ ಹಾಗೂ ಪರಿಸರ ಜಾಗೃತಿ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ವಿದ್ಯಾರ್ಥಿ ಜೀವನದಲ್ಲಿಯೇ ಮಕ್ಕಳಿಗೆ ಪರಿಸರದ ಮಹತ್ವದ ಬಗ್ಗೆ ತಿಳಿ ಹೇಳಬೇಕು. ಹೆಚ್ಚು ಗಿಡಗಳನ್ನು ಬೆಳೆಸುವ ಬಗ್ಗೆ ಪ್ರೋತ್ಸಾಹ ನೀಡಬೇಕು. ಅರಣ್ಯ ಇಲಾಖೆಯಿಂದ ವಿವಿಧ ಗಿಡಗಳನ್ನು ವಿತರಿಸಲಾಗುತ್ತಿದ್ದು, ಇವುಗಳನ್ನು ಬೆಳೆಸುವ ಸಂಕಲ್ಪ ತೊಡಬೇಕು ಎಂದರು. ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ನಾಶವಾಗುತ್ತಿದ್ದು, ಜನಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆ ಹಲವಷ್ಟು ಭಾಗಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಲಾಗಿದೆ. ಜನಸಾಮಾನ್ಯರು ಪ್ಲಾಸ್ಟಿಕ್ ಬಳಕೆಯಿಂದ ದೂರ ಉಳಿದರೆ ಮಾತ್ರ ಪರಿಸರವನ್ನು ಉಳಿಸಿಕೊಳ್ಳಲು ಸಾಧ್ಯ ಎಂದು ಅಭಿಪ್ರಾಯಿಸಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ವೈ. ಪ್ರಕಾಶ್, ಜೇಸೀ ಅಧ್ಯಕ್ಷ ಪ್ರಕಾಶ್, ಜೇಸೀರೇಟ್ ಅಧ್ಯಕ್ಷೆ ಮಾಯಾ ಗಿರೀಶ್, ಗ್ರಾ.ಪಂ. ಅಧ್ಯಕ್ಷ ದಿವಾಕರ್, ಒಕ್ಕೂಟದ ಅಧ್ಯಕ್ಷೆ ಈಶ್ವರಿ, ಮುಖ್ಯೋಪಾಧ್ಯಾಯ ರೇಣುಕಾ ಸ್ವಾಮಿ, ಎ.ಆರ್.ಎಫ್.ಓ. ಮಾಧವ ನಾಯಕ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ಶಾಲಾ ಆವರಣದಲ್ಲಿ ವಿವಿಧ ತಳಿಯ ಗಿಡಗಳನ್ನು ನೆಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಾಲಾ ಶಿಕ್ಷಕರು, ಧರ್ಮಸ್ಥಳ ಸಂಘದ ಸದಸ್ಯರು, ಜೇಸೀ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಮಡಿಕೇರಿ: ಬಾಳುಗೋಡು ಕೊಡವ ಸಮಾಜಗಳ ಒಕ್ಕೂಟದ ಮಹಿಳಾ ಘಟಕ(ಪೊಮ್ಮಕ್ಕಡ ಕೂಟ)ದ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ಬಾಳುಗೋಡುವಿನ ಕೊಡವ ಸಮಾಜದÀಲ್ಲಿ ನಡೆಯಿತು.

ಒಕ್ಕೂಟದ ಅಧ್ಯಕ್ಷರಾದ ಚೆರಿಯಪಂಡ ಇಮ್ಮಿ ಉತ್ತಪ್ಪ ಮಾತನಾಡಿ, ಪರಿಸರ ಕಾಳಜಿಯ ವನಮಹೋತ್ಸವ ಒಂದು ದಿನದ ಕಾರ್ಯಕ್ರಮವಾಗದೆ ಪ್ರತಿನಿತ್ಯ ಆಚರಿಸುವಂತಾಗಬೇಕು ಎಂದರು. ಅರಣ್ಯ ಸಂರಕ್ಷಣೆ ಅನಿವಾರ್ಯವಾಗಿದ್ದು, ಪ್ರತಿಯೊಬ್ಬರು ಸಸಿಗಳನ್ನು ನೆಡುವ ಮೂಲಕ ಹಸಿರ ವಾತಾವರಣವನ್ನು ಸಮೃದ್ಧಿಗೊಳಿಸಬೇಕಾಗಿದೆ ಎಂದು ಕರೆ ನೀಡಿದರು.

ವಿವಿಧ ಜಾತಿಯ ಸಸಿಗಳನ್ನು ನೆಡುವ ಮೂಲಕ ಅಧ್ಯಕ್ಷರು ಹಾಗೂ ಮಹಿಳಾ ಸದಸ್ಯರು ಪರಿಸರ ಜಾಗೃತಿ ಮೂಡಿಸಿದರು. ಒಕ್ಕೂಟದ ಮಹಿಳಾ ಘಟಕದ ಉಪಾಧ್ಯಕ್ಷರಾದ ಸರಸು ನಾಣಯ್ಯ, ಖಜಾಂಚಿ ಕಳ್ಳಿಚಂಡ ಶಾಲಿನಿ ಕಾರ್ಯಪ್ಪ, ಒಕ್ಕೂಟದ ಕಾರ್ಯದರ್ಶಿ ವಾಟೇರಿರ ಶಂಕರಿ ಪೂವಯ್ಯ, ಮಹಿಳಾ ವಿಭಾಗದ ನಿರ್ದೇಶಕರು ಹಾಗೂ ಸದಸ್ಯರು ಸೇರಿದಂತೆ 60 ಕ್ಕೂ ಹೆಚ್ಚು ಮಹಿಳಾ ಸದಸ್ಯರು ಹಾಜರಿದ್ದರು.

ಕಾರ್ಯದರ್ಶಿ ಬೊಪ್ಪಂಡ ಬೊಳ್ಳಮ್ಮ ನಾಣಯ್ಯ ವಂದಿಸಿದರು.

ಕೂಡಿಗೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಸಹಯೋಗದೊಂದಿಗೆ ಚಿಕ್ಕಅಳುವಾರ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಸಂರಕ್ಷಣಾ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಶಾಲಾ ಆವರಣದಲ್ಲಿ ನೆಲ್ಲಿ, ಹಲಸು, ನೇರಳೆ ಹಾಗೂ ಇನ್ನಿತರ ಗಿಡಗಳನ್ನು ನೆಡಲಾಯಿತು. ಮೇಲ್ವಿಚಾರಕ ವಿನೋದ್ ಕುಮಾರ್ ವಿದ್ಯಾರ್ಥಿಗಳಿಗೆ ಸಸಿಗಳ ಪೆÇೀಷಣೆ ಬಗ್ಗೆ ತಿಳಿಸಿದರು.

ಪರಿಸರದ ಬಗ್ಗೆ ಸ್ಪರ್ಧೆಗಳನ್ನು ನಡೆಸಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ನವಜೀವನ ಸಮಿತಿ ಸದಸ್ಯ ಪ್ರಕಾಶ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ಪ್ರಶಾಂತ, ಸುರೇಕಾ ಬಾಯಿ ಹಾಗೂ ಶಿಕ್ಷಕ ವೃಂದದವರು, ಒಕ್ಕೂಟದ ಪದಾಧಿಕಾರಿಗಳು ಸೇವಾಪ್ರತಿನಿಧಿ ಸುಮಲತಾ ಸಿದ್ಧರಾಜು ಇದ್ದರು.