ಕೂಡಿಗೆ, ಜೂ. 29: ಕೂಡಿಗೆ ಗ್ರಾಮ ಪಂಚಾಯ್ತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಮೀಪದಲ್ಲಿ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ನೀರು ಪಡೆಯಲು ಗ್ರಾಮಸ್ಥರಿಗೆ ನೀರಿನ ಕೂಪನ್ ವಿತರಿಸಿದ್ದರೂ ಶುದ್ಧ ನೀರಿನ ಘಟಕದಲ್ಲಿ ಒಂದು ತೊಟ್ಟೂ ನೀರಿಲ್ಲ.

ಗ್ರಾ.ಪಂ. ವತಿಯಿಂದ ಸಾರ್ವಜನಿಕರಿಂದ ಹಣ ಕಟ್ಟಿಸಿಕೊಂಡು ಕೂಪನ್‍ಗಳನ್ನು ವಿತರಿಸಿದ್ದಾರೆ. ಆದರೆ, ಕಳೆದ 3 ತಿಂಗಳಿನಿಂದ ಈ ಘಟಕಗಳು ಸ್ಥಗಿತಗೊಂಡಿದ್ದು, ಸಾರ್ವಜನಿಕರು ನೀರಿಗಾಗಿ ಪರದಾಡುತ್ತಿದ್ದು, ಕೂಪನ್‍ಗಳನ್ನು ಗ್ರಾ.ಪಂ.ಗಳಿಗೆ ಹಿಂತಿರುಗಿಸಲು ಮುಂದಾಗಿದ್ದಾರೆ.

ಸಂಬಂಧಪಟ್ಟ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಗ್ರಾ.ಪಂ ಅಧಿಕಾರಿಗಳು ಘಟಕದ ಕಾಮಗಾರಿ ಪಡೆದ ಗುತ್ತಿಗೆದಾರರೊಂದಿಗೆ ಚರ್ಚಿಸಿ ದುರಸ್ತಿ ಪಡಿಸಲು ಸಾರ್ವಜನಿಕರು ಆಗ್ರಹಿಸಿದ್ದಾರೆ.