ಮಡಿಕೇರಿ, ಜೂ. 30: ವಸತಿ, ವಿದ್ಯುತ್ ಸಂಪರ್ಕ, ಕುಡಿಯುವ ನೀರು, ರಸ್ತೆ ಮತ್ತಿತರ ಮೂಲ ಸೌಲಭ್ಯವನ್ನು ಪ್ರತಿ ಗ್ರಾಮ ಮತ್ತು ಕುಟುಂಬಕ್ಕೂ ಕಲ್ಪಿಸಬೇಕು. ಅದು ಬಿಟ್ಟು ಸೂಕ್ಷ್ಮ ಪರಿಸರ ತಾಣ ಹೆಸರಿನಲ್ಲಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವದು ಏಕೆ? ಇಂತಹ ದೂರುಗಳು ಕೇಳಿ ಬಂದಲ್ಲಿ ಸಂಬಂಧಪಟ್ಟ ಪಿಡಿಒ ಮೇಲೆ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಶಾಸಕ ಕೆ.ಜಿ. ಬೋಪಯ್ಯ ಎಚ್ಚರಿಕೆ ನೀಡಿದ್ದಾರೆ.ನಗರದ ಎಸ್.ಜೆ.ಎಸ್.ವೈ. ಸಭಾಂಗಣದಲ್ಲಿ ಶನಿವಾರ ನಡೆದ ತಾ.ಪಂ.ತ್ರೈಮಾಸಿಕ ಕೆ.ಡಿ.ಪಿ. ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರಿ ಪೈಸಾರಿ ಜಾಗವನ್ನು ಗುರುತಿಸಿ ನಿವೇಶನ ರಹಿತರಿಗೆ ನಿವೇಶನ ನೀಡಬೇಕು. 2020ರ ವೇಳೆಗೆ ಮನೆ ಇಲ್ಲದವರಿಗೆ ಮನೆ ನಿರ್ಮಿಸಬೇಕು ಎಂಬುದು ಭಾರತ ಸರ್ಕಾರದ ಆಶಯವಾಗಿದೆ. ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವಂತೆ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು. ನೀಡಿದ್ದಾರೆ.

ನಗರದ ಎಸ್.ಜೆ.ಎಸ್.ವೈ. ಸಭಾಂಗಣದಲ್ಲಿ ಶನಿವಾರ ನಡೆದ ತಾ.ಪಂ.ತ್ರೈಮಾಸಿಕ ಕೆ.ಡಿ.ಪಿ. ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರಿ ಪೈಸಾರಿ ಜಾಗವನ್ನು ಗುರುತಿಸಿ ನಿವೇಶನ ರಹಿತರಿಗೆ ನಿವೇಶನ ನೀಡಬೇಕು. 2020ರ ವೇಳೆಗೆ ಮನೆ ಇಲ್ಲದವರಿಗೆ ಮನೆ ನಿರ್ಮಿಸಬೇಕು ಎಂಬುದು ಭಾರತ ಸರ್ಕಾರದ ಆಶಯವಾಗಿದೆ. ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವಂತೆ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು.

ಮನೆ ಇದೆ. ಮತ್ತೊಂದು ಕಡೆ ಮನೆ ಇದೆ, ಪಟ್ಟೆ ಇಲ್ಲ. ಈ ರೀತಿ ಸಮಸ್ಯೆ ಇದೆ. ಇಂತಹವಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸ್ಪಂದಿಸಬೇಕು ಎಂದು ಹೇಳಿದರು.

ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಸ್ತೆ

(ಮೊದಲ ಪುಟದಿಂದ) ಬದಿ ಕಾಡು ಕಡಿಯುವದು, ರಸ್ತೆ ಅಗಲೀಕರಣ ಮಾಡುವದು, ಚರಂಡಿಯಲ್ಲಿ ನೀರು ಹೋಗುವಂತೆ ಮಾಡುವದು ಮತ್ತಿತರ ಕಾರ್ಯವನ್ನು ನಿರ್ವಹಿಸುವಂತೆ ಲೋಕೋಪಯೋಗಿ ಎಂಜಿನಿಯರ್‍ಗೆ ಕೆ.ಜಿ. ಬೋಪಯ್ಯ ಸೂಚನೆ ಮಾಡಿದರು.

ಈ ಸಂಬಂಧ ಮಾತನಾಡಿದ ತಾ.ಪಂ. ಸದಸ್ಯ ರವೀಂದ್ರ ಅರೆಕಾಡು, ಹಾಕತ್ತೂರು ಮಾರ್ಗದ ರಸ್ತೆಯಲ್ಲಿ ಅಪಘಾತಗಳು ಹೆಚ್ಚು ಸಂಭವಿಸುತ್ತಿದೆ. ಆದ್ದರಿಂದ ರಸ್ತೆ ಅಗಲೀಕರಣ ಮಾಡಬೇಕು. ಕಾಡು ಕಡಿಯಬೇಕಿದೆ ಎಂದು ಅವರು ಸಲಹೆ ಮಾಡಿದರು.

ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ ಇಲಾಖೆಗಳು ತಮ್ಮ ಇಲಾಖಾ ವ್ಯಾಪ್ತಿಯ ಕಾರ್ಯಕ್ರಮಗಳ ಬಗ್ಗೆ ಗ್ರಾ.ಪಂ. ಮಟ್ಟದಲ್ಲಿ ಮಾಹಿತಿ ನೀಡುವಂತೆ ಕೆ.ಜಿ. ಬೋಪಯ್ಯ ಸಲಹೆ ಮಾಡಿದರು.

ಸಮಾಜ ಕಲ್ಯಾಣ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವ್ಯಾಪ್ತಿಯ ಹಾಸ್ಟೆಲ್‍ಗಳ ಸ್ವಂತ ಕಟ್ಟಡಕ್ಕೆ ನಿವೇಶನ. ಆಶ್ರಮ ಶಾಲೆ ಮತ್ತಿತರ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಹಾಸ್ಟೆಲ್‍ಗಳಿಗೆ ಸ್ವಂತ ನಿವೇಶನ ಒದಗಿಸುವಂತೆ ತಹಶೀಲ್ದಾರರಿಗೆ ತಿಳಿಸಿದರು.

ತಾ.ಪಂ. ಅಧ್ಯಕ್ಷೆ ತೆಕ್ಕಡೆ ಶೋಭ ಮೋಹನ್ ಸರ್ಕಾರದ ಕಾರ್ಯಕ್ರಮ ಅನುಷ್ಠಾನದಲ್ಲಿ ವಿಳಂಭ ಮಾಡ ಬಾರದು. ಆಯಾಯ ಕಾಲದಲ್ಲಿ ಅನುಮೋದನೆ ಪಡೆದು ಕಾರ್ಯ ಕ್ರಮಗಳನ್ನು ಅನುಷ್ಠಾನಗೊಳಿಸುವಂತೆ ಸಲಹೆ ಮಾಡಿದರು.

ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್ ತಾ.ಪಂ.ಗೆ ಬಿಡುಗಡೆಯಾಗುವ ಅನುದಾನವನ್ನು ಸಕಾಲದಲ್ಲಿ ಖರ್ಚು ಮಾಡಬೇಕು. ಮಳೆಗಾಲದ ಅವಧಿಯಲ್ಲಿ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಮತ್ತಿತರ ಕಾರ್ಯಕ್ರಮ ಅನುಷ್ಠಾನದಲ್ಲಿ ಚುರುಕು ಪಡೆಯಬೇಕು ಎಂದು ಹೇಳಿದರು.

ಮಾತೃಪೂರ್ಣ ಯೋಜನೆ ಸಮರ್ಪಕವಾಗಿ ಅನುಷ್ಠಾನ ಗೊಳಿಸಬೇಕು. ಭಾಗ್ಯಲಕ್ಷ್ಮಿ ಯೋಜ&divound; Éಯಡಿ ಬಾಕಿ ಇರುವ ಬಾಂಡ್‍ಗಳನ್ನು ವಿತರಣೆ ಮಾಡುವಂತೆ ಕೆ.ಜಿ. ಬೋಪಯ್ಯ ಅವರು ಸಲಹೆ ಮಾಡಿದರು.

ಭಾಗ್ಯಲಕ್ಷ್ಮಿ ಬಾಂಡ್ ಸಂಬಂಧ ಮಗು ಜನನವಾದ ಎರಡು ವರ್ಷದೊಳಗೆ ಅರ್ಜಿ ಸಲ್ಲಿಸಬೇಕಿದೆ ಎಂದು ಶಿಶು ಅಭಿವೃದ್ಧಿ ಅಧಿಕಾರಿ ದಮಯಂತಿ ಮಾಹಿತಿ ನೀಡಿದರು.

ಮಡಿಕೇರಿ ತಾಲೂಕಿನಲ್ಲಿ 18 ಅಂಗನವಾಡಿಗಳಿಗೆ ಜಾಗ ಬೇಕಿದೆ. ಮಡಿಕೇರಿ ನಗರದಲ್ಲಿಯೇ ಏಳು ಅಂಗನವಾಡಿ ಕೇಂದ್ರಗಳಿಗೆ ನಿವೇಶನ ಬೇಕಿದೆ ಎಂದು ಮಾಹಿತಿ ನೀಡಿದರು.

ಕಳೆದ ಜೂನ್ ಮೊದಲ ಮತ್ತು ಎರಡನೇ ವಾರದಲ್ಲಿ ಸುರಿದ ಧಾರಕಾರ ಮಳೆಗೆ ವಾಸದ ಮನೆ, ಶಾಲಾ ಕಟ್ಟಡಗಳು, ಅಂಗನವಾಡಿಗಳ ಹಾನಿ ಬಗ್ಗೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ತಾಲೂಕು ಆಡಳಿತಕ್ಕೆ ವರದಿ ನೀಡುವಂತೆ ಶಾಸಕರು ಸೂಚನೆ ನೀಡಿದರು.

ಈ ಸಂಬಂಧ ಮಾಹಿತಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ ಅರೆಕಾಡು, ಕಾಂಡನಕೊಲ್ಲಿ, ಹೊದವಾಡ ಶಾಲೆಗಳು ಮಳೆಯಿಂದ ಹಾನಿಯಾಗಿದ್ದು, ವರದಿ ನೀಡಲಾಗಿದೆ ಎಂದು ತಿಳಿಸಿದರು.

ಮಡಿಕೇರಿ ತಾಲೂಕಿನ ಹಲವು ಕಡೆಗಳಲ್ಲಿ ಶಾಲಾ ವ್ಯಾಪ್ತಿಯ ಜಾಗವನ್ನು ಒತ್ತುವರಿ ಮಾಡಿದ್ದು, ಅತಿಕ್ರಮಣ ಮಾಡಿರುವದನ್ನು ತೆರವುಗೊಳಿಸಬೇಕಿದೆ ಎಂದು ಜಿ.ಪಂ. ಸದಸ್ಯೆ ಕವಿತಾ ಪ್ರಭಾಕರ್ ತಿಳಿಸಿದರು.

ಸೌಭಾಗ್ಯ ಯೋಜನೆಯಡಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಳ್ಳಲು ಅವಕಾಶವಿದ್ದು, ಒಂದು ವಾರದಲ್ಲಿ ಅರ್ಜಿ ಸಲ್ಲಿಸುವಂತಾಗಬೇಕು ಎಂದು ಸೆಸ್ಕ್ ಅಧಿಕಾರಿ ದೊಡ್ಡಮನಿ ಮನವಿ ಮಾಡಿದರು.

ಬಡವರು, ನಿರ್ಗತಿಕರು, ಕೂಲಿ ಕಾರ್ಮಿಕರಿಗೂ ಸಹ 1 ಲಕ್ಷ ರೂ. ವಾರ್ಷಿಕ ಆದಾಯವನ್ನು ನಮೂದಿ ಸುತ್ತಿದ್ದಾರೆ ಎಂದು ಗಾಳಿಬೀಡು ಗ್ರಾಮ ಪಂಚಾಯತ್ ಅಧ್ಯಕ್ಷ ಸುಭಾಷ್ ಸೋಮಯ್ಯ ದೂರಿದರು.

ಕಿಗ್ಗಾಲು ಶಾಲೆಯಲ್ಲಿ ಟ್ರಾನ್ಸ್‍ಫಾಮರ್ ಇದ್ದು, ಇದನ್ನು ಸ್ಥಳಾಂತರಿಸಬೇಕು. ತೋಟದ ಮನೆ ನಿರ್ಮಿಸಲು ಕಂದಾಯ ಅಧಿಕಾರಿಗಳು ಅನುಮತಿ ನೀಡುತ್ತಿಲ್ಲ ಎಂದು ಮೂರ್ನಾಡು ಪಿಡಿಓ ವೇಣುಗೋಪಾಲ್ ಸಭೆಯ ಗಮನಕ್ಕೆ ತಂದರು. ನಾನಾ ಇಲಾಖಾಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.