ಕೂಡಿಗೆ, ಜು. 1: ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಡವಾರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಗ್ರಾಮದ ದಾನಿ ಚೆರಿಯಮನೆ ಮಿಟ್ಟು ಪೊನ್ನಪ್ಪ ನೋಟ್ ಪುಸ್ತಕಗಳನ್ನು ಹಾಗೂ ಲೇಖನಿ ಸಾಮಗ್ರಿಗಳನ್ನು ಉಚಿತವಾಗಿ ನೀಡಿದರು.
ಕಾರ್ಯಕ್ರಮದಲ್ಲಿ ದಾನಿಗಳ ಕುಟುಂಬ ವರ್ಗ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಜನಾರ್ಧನ, ಸದಸ್ಯರು, ಶಾಲಾ ಮುಖ್ಯ ಶಿಕ್ಷಕ ವೈ.ಸಿ. ಕುಮಾರ್, ಸಹ ಶಿಕ್ಷಕರು, ಗ್ರಾಮದ ಪ್ರಮುಖರು ಪಾಲ್ಗೊಂಡಿದ್ದರು.