ಕುಶಾಲನಗರ, ಜು. 1: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಮತ್ತು ಕೂಡಿಗೆಯ ಪ್ರಾಥಮಿಕ ಆರೋಗ್ಯ ಕೇಂದ್ರ, ಕುಶಾಲನಗರ ಜೆಸಿಐ ಕಾವೇರಿ ಆಶ್ರಯದಲ್ಲಿ ಮಲೇರಿಯ ವಿರೋಧಿ ಮಾಸಾಚರಣೆ ಕಾರ್ಯಕ್ರಮ ನಡೆಯಿತು.
ಸ್ಥಳೀಯ ಸರಕಾರಿ ಸಮುದಾಯ ಆರೋಗ್ಯ ಕೇಂದ್ರದಿಂದ ಹೊರಟ ಜಾಗೃತಿ ಜಾಥಾ ಪಟ್ಟಣದ ಪ್ರಮುಖ ಬೀದಿಗಳಲ್ಲಿ ತೆರಳಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿವಿಧ ಕಾಲೇಜು ವಿದ್ಯಾರ್ಥಿಗಳು ಅರಿವು ಮೂಡಿಸಿದರು.
ಈ ಸಂದರ್ಭ ವೈದ್ಯಾಧಿಕಾರಿ ಡಾ.ರವಿಕುಮಾರ್, ಡಾ.ಪ್ರತಾಪ್, ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಮತ್ತಿತರರು ಇದ್ದರು.