ನಾಪೋಕ್ಲು, ಜು. 2: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣ ಘಟಕ ಮಡಿಕೇರಿ, ಪ್ರಾಥಮಿಕ ಆರೋಗ್ಯ ಕೇಂದ್ರ ಚೇರಂಬಾಣೆ ಹಾಗೂ ಅರುಣ ಪದವಿಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಮಲೇರಿಯ ವಿರೋಧಿ ಮಾಸಾಚರಣೆ ಆಚರಿಸಲಾಯಿತು.ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ. ಶಿವಕುಮಾರ್ ಮಾತನಾಡಿ, ಸಮಾಜದಲ್ಲಿ ಆರೋಗ್ಯವನ್ನು ಕಾಯ್ದುಕೊಂಡು ಮಲೇರಿಯದಂತಹ ಕಾಯಿಲೆ ಹರಡದಂತೆ ಎಲ್ಲರೂ ಜಾಗೃತರಾಗಬೇಕಾಗಿದೆ ಎಂದರು. ಅರುಣ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಶ್ರೀಪ್ರಕಾಶ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೈದ್ಯಾಧಿಕಾರಿ ಗಳಾದ ಡಾ. ಮಂಜುನಾಥ್, ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ. ಪೂಜಾ ಕಿರಿಯ ಆರೋಗ್ಯ ನಿರೀಕ್ಷಕ ರವಿ ಎಸ್.ಎನ್. ಎಸ್. ಘಟಕದ ಸಂಯೋಜಕ ಕೆ.ಆರ್. ರಮೇಶ್, ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಬಳಿಕ ಜಾಥಾ ನಡೆಸಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.