ಮಡಿಕೇರಿ, ಜು. 2: ಪೊನ್ನಂಪೇಟೆ ಕೃಷಿ ಅರಣ್ಯ ಕಾಲೇಜು ವಿದ್ಯಾರ್ಥಿಗಳ ಹೋರಾಟಕ್ಕೆ ಸಿ.ಪಿ.ಐ.ಎಂ. ಬೆಂಬಲ ಘೋಷಿಸುವದಾಗಿ ಪಕ್ಷದ ಪ್ರಮುಖ ಡಾ. ದುರ್ಗಾ ಪ್ರಸಾದ್ ತಿಳಿಸಿದ್ದಾರೆ. ಸರಕಾರಿ ಕೃಷಿ ಸ್ನಾತಕೋತ್ತರ ಪದವಿಯ ಶಿಕ್ಷಣಕ್ಕೆ ರೈ ಟೆಕ್ನಾಲಜಿ ವಿಶ್ವ ವಿದ್ಯಾಲಯದ ಸ್ನಾತಕೋತ್ತರ ಪದವಿಗಳನ್ನು ನಿರ್ಬಂಧಿಸಿ ರಾಜ್ಯದ ಖಾಸಗಿ ಕೃಷಿ ಕಾಲೇಜುಗಳಿಗೆ ಅಫಿಲಿಯೇಶನ್ ನಿಲ್ಲಿಸಿ; ಕರ್ನಾಟಕದಲ್ಲಿ ಕೃಷಿ ಮತ್ತು ತೋಟಗಾರಿಕೆ ಮತ್ತು ಅರಣ್ಯ ವಿಶ್ವ ವಿದ್ಯಾಲಯಗಳ ಕಾಯಿದೆಗಳಿಗೆ ತಿದ್ದುಪಡಿ ತಂದು ಕೃಷಿ, ತೋಟಗಾರಿಕೆ ಮತ್ತು ಅರಣ್ಯ ವಿಶ್ವ ವಿದ್ಯಾಲಯಗಳ ಖಾಸಗಿಕರಣಗೊಳಿಸುವದನ್ನು ಶಾಶ್ವತವಾಗಿ ರದ್ದುಗೊಳಿಸ ಬೇಕೆಂದು ಒತ್ತಾಯಿಸಿ ವಿದ್ಯಾರ್ಥಿಗಳು ಮುಷ್ಕರ ಮಾಡುತ್ತಿರುವದು ಸ್ವಾಗತಾರ್ಹ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ವಿದ್ಯಾರ್ಥಿಗಳ ಬೇಡಿಕೆಗಳನ್ನು ಮತ್ತು ಮುಷ್ಕರವನ್ನು ಪಕ್ಷ ಬೆಂಬಲಿಸುತ್ತದೆ. ಅವರ ಬೇಡಿಕೆಗಳನ್ನು ಸರಕಾರ ತಕ್ಷಣವೇ ಅಂಗೀಕರಿಸಬೇಕೆಂದು ಪಕ್ಷ ಸರಕಾರವನ್ನು ಒತ್ತಾಯಿಸುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.