*ಗೋಣಿಕೊಪ್ಪಲು, ಜು. 2: ಯೋಗಾಭ್ಯಾಸ ಮಾಡುವದರ ಮೂಲಕ ಆರೋಗ್ಯ ಉತ್ತಮ ಪಡಿಸಿಕೊಳ್ಳಬಹುದು ಎಂದು ಬಾಳೆಲೆ ಸೆಂಟರ್ ಎಜುಕೇಷನ್ ಸೊಸೈಟಿ ಅಧ್ಯಕ್ಷ ಅಳಮೇಂಗಡ ಬೋಸ್ ಮಂದಣ್ಣ ಹೇಳಿದರು. ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಬಾಳೆಲೆ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ಯೋಗ ದಿನಾಚರಣೆಯಲ್ಲಿ ಮಾತನಾಡಿದ ಅವರು, ಯೋಗ ಭಾರತೀಯ ಸಂಸ್ಕøತಿಯಲ್ಲಿ ಪ್ರಮುಖ ಸ್ಥಾನ ಪಡೆದಿದೆ. ಇದರ ಮಹತ್ವವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ವಿಶ್ವ ಯೋಗ ದಿನಾಚರಣೆ ಜಾರಿಗೆ ತರುವ ಮೂಲಕ ಜಗತ್ತಿಗೆ ಸಾರಿದರು. ಮಕ್ಕಳು ಹಾಗೂ ಯುವಕರು ಎಳೆಯ ವಯಸ್ಸಿನಲ್ಲಿಯೇ ಯೋಗಾಭ್ಯಾಸ ಮಾಡುವ ಮೂಲಕ ತಮ್ಮ ಕ್ರಿಯಾಶೀಲ ವ್ಯಕ್ತಿತ್ವ ಹಾಗೂ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಹೇಳಿದರು. ಆರ್ಟ್ ಆಫ್ ಲಿವಿಂಗ್ ಜಿಲ್ಲಾ ಸಂಚಾಲಕ ಅಳಮೇಂಗಡ ಡಾನ್ ರಾಜಪ್ಪ ಯೋಗಾಭ್ಯಾಸ ನಡೆಸಿಕೊಟ್ಟರು. ಮಹಿಳಾ ಮೋರ್ಚಾ ಅಧ್ಯಕ್ಷೆ ಮಾಪಂಗಡ ಯಮುನಾ ಚಂಗಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿರಿಯರಾದ ಅಳಮೇಂಗಡ ಸರಸ್ವತಿ ಪೊನ್ನಪ್ಪ ಅಧ್ಯಕ್ಷತೆ ವಹಿಸಿದ್ದರು. ಬಾಳೆಲೆ ಸೆಂಟರ್ ಎಜುಕೇಷನ್ ಸೊಸೈಟಿ ಕಾರ್ಯದರ್ಶಿ ಚಿಮ್ಮಣಮಾಡ ಕೃಷ್ಣ ಗಣಪತಿ, ಸಹಕಾರ್ಯದರ್ಶಿ ಪೋಡಮಾಡ ಮೋಹನ್, ಪ್ರಾಂಶುಪಾಲೆ ಕೆ.ಪಿ. ಪೊನ್ನಮ್ಮ, ಮುಖ್ಯ ಶಿಕ್ಷಕ ಕೆ. ಚಂದ್ರಶೇಖರ್, ಶಿಕ್ಷಕರಾದ ಎನ್.ಕೆ. ಪ್ರಭು, ಡಿ.ಎನ್. ಸುಬ್ಬಯ್ಯ, ಎಂ.ಪಿ. ರಾಘವೇಂದ್ರ ಹಾಜರಿದ್ದರು.