ನ್ಯಾಷನಲ್ ಅಕಾಡೆಮಿ: ಗೋಣಿಕೊಪ್ಪಲು ಸಮೀಪದ ಅತ್ತೂರುವಿನ ನ್ಯಾಷನಲ್ ಅಕಾಡೆಮಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ‘ಪರಿಸರ ಗೀತೆ’ ಹಾಡುವ ಮೂಲಕ ಆಚರಿಸಲಾಯಿತು.
ಶಾಲಾ ಸಂಸ್ಥಾಪಕಿ ಅಪ್ಪನೆರವಂಡ ಶಾಂತಿ ಅಚ್ಚಪ್ಪ ಪರಿಸರದ ಮಹತ್ವ ಕುರಿತಾಗಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಪ್ರಾಂಶುಪಾಲ ಅರುಣ್ಕುಮಾರ್ ಮಾತನಾಡಿ, ಪರಿಸರ ದಿನ ಎನ್ನುವದು ಕೇವಲ ಒಂದು ದಿನಕ್ಕೆ ಸೀಮಿತವಾಗದೆ ದೈನಂದಿನ ಚಟುವಟಿಕೆಯಲ್ಲಿ ಇದರ ಮಹತ್ವ ಅರಿಯುವಂತಾಗಬೇಕು ಎಂದು ತಿಳಿಸಿದರು.
ವಿವಿಧ ಮಾದರಿಯ ಸಸ್ಯಗಳನ್ನು ಶಾಲಾ ಆವರಣದ ತೋಪಿನಲ್ಲಿ ನೆಡುವ ಮೂಲಕ ಪರಿಸರ ದಿನ ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ಚಿತ್ರಕಲೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.ಸೋಮವಾರಪೇಟೆ: ಇಲ್ಲಿನ ಜೆಎಂಎಫ್ಸಿ ನ್ಯಾಯಾಲಯದ ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.
ನ್ಯಾಯಾಧೀಶರಾದ ಪರಶುರಾಮ್ ಎಫ್. ದೊಡ್ಡಮನಿ ವರು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಕಿರಿಯ ವಿಭಾಗದ ನ್ಯಾಯಾಧೀಶ ಎಸ್.ಎಸ್. ಭರತ್, ವಲಯ ಅರಣ್ಯಾಧಿಕಾರಿ ಲಕ್ಷ್ಮೀಕಾಂತ್, ಉಪ ವಲಯ ಅರಣ್ಯಾಧಿಕಾರಿ ಮಹದೇವ ನಾಯಕ್, ಚಂದ್ರೇಶ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.ಕೂಡಿಗೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಕಣಿವೆ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದ ಅಂಗವಾಗಿ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಗಣೇಶ್ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿದ್ದ ಕಾಲೇಜು ಅಭಿವೃದ್ಧಿ ಸಮಿತಿಯ ನಿರ್ದೇಶಕ ಕೆ.ಕೆ. ನಾಗರಾಜಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಅರಿವು ಪ್ರಾಥಮಿಕ ಹಂತದಲ್ಲಿಯೇ ಮೂಡಬೇಕು ಎಂದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹೆಬ್ಬಾಲೆ ವಲಯದ ಮೇಲ್ವಿಚಾರಕ ವಿನೋದ್ಕುಮಾರ್ ವಿದ್ಯಾರ್ಥಿಗಳಿಗೆ ಸಸಿಗಳ ಪೆÇೀಷಣೆ ಬಗ್ಗೆ ತಿಳಿಸಿದರು.
ಪರಿಸರದ ಬಗ್ಗೆ ವಿದ್ಯಾರ್ಥಿಗಳಿಗೆ ಸ್ಪರ್ಧೆಗಳನ್ನು ನಡೆಸಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭ ಯೋಜನೆಯ ಹೆಬ್ಬಾಲೆ ವಲಯದ ಸೇವಾ ಪ್ರತಿನಿಧಿಗಳು ಹಾಗೂ ಶಾಲಾ ಶಿಕ್ಷಕ ವೃಂದ ಇದ್ದರು.ನಾಪೆÇೀಕ್ಲು: ಸಮೀಪದ ಅಂಕುರ್ ಪಬ್ಲಿಕ್ ಶಾಲೆಯಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಸಂದರ್ಭ ಅರಣ್ಯ ಇಲಾಖೆಯ ಡಿ.ಆರ್.ಎಫ್. ಎಂ.ಎಸ್. ಸುರೇಶ್, ಗಾರ್ಡ್ ಕಾಳೇಗೌಡ, ವಿದ್ಯಾಸಂಸ್ಥೆಯ ಅಧ್ಯಕ್ಷ ಕೇಟೋಳಿರ ರಾಜಾ ಚರ್ಮಣ್ಣ, ಕಾರ್ಯದರ್ಶಿ ರತ್ನಾ ಚರ್ಮಣ್ಣ, ಶಿಕ್ಷಕ ವೃಂದ, ಅರಣ್ಯ ಇಲಾಖಾ ಸಿಬ್ಬಂದಿಗಳು, ವಿದ್ಯಾರ್ಥಿಗಳು ಇದ್ದರು.ಗೋಣಿಕೊಪ್ಪ ವರದಿ: ಪರಿಸರವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಯುವಜನತೆ ಕಾರ್ಯನಿರ್ವಹಿಸಬೇಕಿದೆ. ಪರಿಸರವನ್ನು ಉಳಿಸಿದರೆ ಮಾತ್ರ ಮುಂದಿನ ಪೀಳಿಗೆಗೆ ಉತ್ತಮ ಬದುಕು ಎಂದು ಸ್ಥಳೀಯ ಪೊಲೀಸ್ ಉಪ ನಿರೀಕ್ಷಕ ಸುಬ್ಬಯ್ಯ ಹೇಳಿದರು.
ಜೆಸಿಐ ನಿಸರ್ಗ ಪೊನ್ನಂಪೇಟೆ ಮತ್ತು ಜೈ ಹಿಂದ್ ಪುರುಷ ಸ್ವಸಹಾಯ ಸಂಘದ ಸಹಯೋಗದಲ್ಲಿ ನಡೆದ ಗಿಡ ನೆಡುವ ಕಾರ್ಯಕ್ರಮಕ್ಕೆ ಪೊಲೀಸ್ ಠಾಣಾ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿ, ಪರಿಸರವನ್ನು ರಕ್ಷಣೆಗಿಂತ ನಾಶಮಾಡುವ ಪ್ರವೃತ್ತಿ ಹೆಚ್ಚಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಗಿಡ ನೆಡುವ ಮೂಲಕ ವಿದ್ಯಾರ್ಥಿಗಳಲ್ಲಿ ಕಾಳಜಿ ಮೂಡಿಸಲಾಯಿತು. ಶಾಲಾ ಆವರಣ ಸುತ್ತಲೂ ಹಣ್ಣು ಹಾಗೂ ಅಲಂಕಾರಿಕ ಗಿಡಗಳನ್ನು ನೆಡುವಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡರು. ಜೆಸಿಐ ನಿಸರ್ಗ ಪೊನ್ನಂಪೇಟೆ ಅಧ್ಯಕ್ಷ ವಿಕ್ರಂ, ಭಗತ್ಸಿಂಗ್ ಸಂಘದ ಅಧ್ಯಕ್ಷ ಕಿಶೋರ್, ಪದಾಧಿಕಾರಿಗಳಾದ ಸಿಂಗಿ ಸತೀಶ್, ಟಾಟು ಮೊಣ್ಣಪ್ಪ ಇದ್ದರು.