ಮೂರ್ನಾಡು, ಜು. 3: ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ಗ್ರಾಮಸಭೆ ತಾ. 5 ರಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಲ್ಲುಮುಟ್ಲು ಜಮುನ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.

ಪಂಚಾಯಿತಿ ಸಮುದಾಯ ಭವನದಲ್ಲಿ ಆಯೋಜಿಸಲಾದ ಗ್ರಾಮಸಭೆಯಲ್ಲಿ ಜಿ.ಪಂ. ಸದಸ್ಯೆ ಕಲಾವತಿ ಪೂವಪ್ಪ, ತಾ. ಪಂ. ಸದಸ್ಯೆ ಶಶಿ ಉಪಸ್ಥಿತರಿದ್ದು, ತೋಟಗಾರಿಕಾ ಹಿರಿಯ ಸಹಾಯಕ ನಿರ್ದೇಶಕ ಕೆ.ಎಸ್. ಚಂದ್ರಶೇಖರ್ ನೋಡಲ್ ಅಧಿಕಾರಿ ಆಗಿ ಆಗಮಿಸಲಿದ್ದಾರೆ.