ಕೂಡಿಗೆ, ಜು. 4: ಕೂಡುಮಂಗಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ರುದ್ರಭೂಮಿ ಹಾಗೂ ಹಾರಂಗಿ ನದಿಗೆ ತೆರಳುವ ದಾರಿಯು ಒತ್ತುವರಿ ಆಗಿದೆ ಎಂದು ಗ್ರಾಮಸ್ಥರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳಾ, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಅಭಿವೃದ್ಧಿ ಅಧಿಕಾರಿ ಆಯೆಷಾ ಪರಿಶೀಲಿಸಿದರು.
ಇದಕ್ಕೆ ಸಂಬಂಧಪಟ್ಟಂತೆ ಕಂದಾಯ ಇಲಾಖೆಯೊಂದಿಗೆ ಪತ್ರ ವ್ಯವಹರಿಸಿ ಸೂಕ್ತ ಕ್ರಮಕೈಗೊಳ್ಳುವದಾಗಿ ಭರವಸೆ ನೀಡಿದರು.