ಕುಶಾಲನಗರ, ಜು. 4: ಮಧ್ಯಪ್ರದೇಶದಲ್ಲಿ ಬಾಲಕಿಯೋರ್ವಳ ಮೇಲೆ ನಡೆದ ಅತ್ಯಾಚಾರ ಹಾಗೂ ರಾಜ್ಯದ ಸರಕಾರಿ ಅಧಿಕಾರಿ ಮನೆಯಲ್ಲಿ ನಡೆದಿದೆ ಎನ್ನಲಾದ ಮತಾಂತರ ಘಟನೆಯನ್ನು ಖಂಡಿಸಿ ಕುಶಾಲನಗರದಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.
ಪಟ್ಟಣದ ಗಣಪತಿ ದೇವಾಲಯ ಮುಂಭಾಗ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಅತ್ಯಾಚಾರಿಗಳ ವಿರುದ್ಧ ಘೋಷಣೆ ಕೂಗಿದರು. ರಾಜ್ಯದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯೊಬ್ಬರ ಪತ್ನಿ ಹಿಂದೂ ಯುವತಿಯನ್ನು ಮತಾಂತರ ಗೊಳಿಸುತ್ತಿರುವ ಬಗ್ಗೆ ಆರೋಪಗಳು ಕೇಳಿಬರುತ್ತಿದ್ದು, ಮತಾಂಧರಿಗೆ ಮಕ್ಕಳ ಮೇಲೆ ಅತ್ಯಾಚಾರ ನಡೆಸಲು ಸಹಕರಿಸಿ ದ್ದಾರೆ ಎಂಬ ವರದಿಗಳು ಹೊರಬಿದ್ದಿವೆ ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗು ವದರೊಂದಿಗೆ ಕಾನೂನು ಕ್ರಮಕೈಗೊಳ್ಳಬೇಕು. ಮಧ್ಯಪ್ರದೇ&divlusmn; Àದಲ್ಲಿ ನಡೆದ ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಗಲ್ಲುಶಿಕ್ಷೆ ವಿಧಿಸಬೇಕಿದೆ ಎಂದು ಆಗ್ರಹಿಸಿ ಘೋಷಣೆಗಳನ್ನು ಕೂಗಿದರು.
ಈ ಸಂದರ್ಭ ಹಿಂದೂಪರ ಸಂಘಟನೆಗಳ ಪ್ರಮುಖರಾದ ಅನೀಶ್, ರಾಜೀವ್, ಜಿ.ಎಲ್. ನಾಗರಾಜ್, ಅಮೃತ್ರಾಜ್, ಪಪಂ ಸದಸ್ಯ ಮಧುಸೂದನ್ ಮತ್ತಿತರರು ಇದ್ದರು.