ಮಡಿಕೇರಿ, ಜು. 4: ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಹಾಲೀ ಗಾಂಧಿನಗರ ಕ್ಷೇತ್ರದ ಶಾಸಕರೂ ಆಗಿರುವ ದಿನೇಶ್ ಗುಂಡೂರಾವ್ ಅವರನ್ನು ನೇಮಿಸಲಾಗಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಈ ನೇಮಕಾತಿ ಮಾಡಿರುವದಾಗಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೋಟ್ ಲಿಖಿತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮಾಜೀ ಮುಖ್ಯಮಂತ್ರಿ ದಿ. ಆರ್. ಗುಂಡೂರಾವ್ ಅವರ ಪುತ್ರರೂ ಆಗಿರುವ ದಿನೇಶ್; ಇದುವರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿಯೂ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು. ಈ ಹಿಂದೆ ಅವರು ಸಚಿವರಾಗಿಯೂ ಕಾರ್ಯನಿರ್ವಹಿಸುವ ವೇಳೆ ಪಕ್ಷದ ಸಂಘಟನೆಗಾಗಿ ಸಚಿವ ಸ್ಥಾನ ತ್ಯಜಿಸಿದರು. ಪ್ರಸಕ್ತ ನೂತನ ಅಧ್ಯಕ್ಷರೊಂದಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಮತ್ತೋರ್ವ ಶಾಸಕ ಈಶ್ವರ ಖಂಡ್ರೆ ಅವರನ್ನು ಪಕ್ಷ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದೆ.