ಸುಂಟಿಕೊಪ್ಪ, ಜು.5: ನಾಕೂರು ಶಿರಂಗಾಲ ಗ್ರಾ.ಪಂ. ವ್ಯಾಪ್ತಿಯ ಮಳ್ಳೂರು ಗ್ರಾಮದ ನಿವಾಸಿ ದಿಲೀಪ್ ಎಂಬಾತ ತಾ 4 ರಂದು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಳ್ಳೂರು ಗ್ರಾಮದ ಕಾಫಿ ಬೆಳೆಗಾರ ಹೆಚ್.ಬಿ. ಗಣೇಶ್ ಎಂಬವರ ಪುತ್ರ ದಿಲೀಪ್ (37) ಎಂಬಾತ ರಾತ್ರಿ ವೇಳೆ ಮನೆಯ ಸಮೀಪದ ತೋಟದ ಮರವೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ತೆರಳಿ ಮಹಜರು ಮಾಡಿ ಮೃತ ದೇಹ ಕುಶಾಲನಗರ ಸರಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ಮೃತನು ಪತ್ನಿ ಓರ್ವ ಪುತ್ರನನ್ನು ಅಗಲಿದ್ದಾನೆ.