ಮಡಿಕೇರಿ, ಜು. 5: ಗೂಡ್ಸ್ ಟೆಂಪೋ ಮಾಲೀಕರ ಮತ್ತು ಚಾಲಕರ ಸಂಘದ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಬಿ.ಎನ್. ಕಿಶೋರ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ನಗರದ ಖಾಸಗಿ ಹೊಟೇಲ್‍ನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವಾರ್ಷಿಕ ಲೆಕ್ಕಪತ್ರ ಮಂಡನೆ ಮತ್ತು ಸಂಘದ ಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಅಧ್ಯಕ್ಷ ಕಿಶೋರ್ ಕುಮಾರ್ ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸಿ ಸಮಾಜಮುಖಿ ಕಾರ್ಯಗಳಲ್ಲೂ ತೊಡಗಿಸಿಕೊಳ್ಳುವ ಬಗ್ಗೆ ತಿಳಿಸಿದರು.
ಸಭೆಯಲ್ಲಿ ಸಂಘದ ಗೌರವಾಧ್ಯಕ್ಷ ಉದಯಕುಮಾರ್, ಉಪಾಧ್ಯಕ್ಷ ಶ್ರೀನಿವಾಸ್, ಕಾರ್ಯದರ್ಶಿ ಮಣಿಕಂಠ, ಖಜಾಂಚಿ ಜೇಮ್ಸ್, ಸಂಘಟನಾ ಕಾರ್ಯದರ್ಶಿ ಮೈಕಲ್ ಮತ್ತಿತರರು ಉಪಸ್ಥಿತರಿದ್ದರು.
ಸಭೆಯಲ್ಲಿದ್ದ ಸಂಚಾರಿ ಠಾಣೆಯ ಪೊಲೀಸ್ ಅಧಿಕಾರಿಗಳು ರಸ್ತೆ ಸುರಕ್ಷತಾ ಸಪ್ತಾಹದ ಬಗ್ಗೆ ಚಾಲಕರಿಗೆ ಮಾಹಿತಿ ನೀಡಿದರು.