ಮಡಿಕೇರಿ, ಜು. 9 : ಪ್ರಸಕ್ತ (2018-19) ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಂದ ಬಡ್ತಿ ಮುಖ್ಯ ಶಿಕ್ಷಕರ ಹುದ್ದೆಗೆ, ಬಡ್ತಿ ಮುಖ್ಯ ಶಿಕ್ಷಕರಿಂದ ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗೆ (ಪಧವಿಧರೇತರ) ಬಡ್ತಿ ನೀಡುವ ಸಂಬಂಧ ಅಂತಿಮ ಆಯ್ಕೆ ಪಟ್ಟಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಿದೆ. ಈ ಸಂಬಂಧ ತಾ. 10 ರಂದು (ಇಂದು) ಬೆಳಿಗ್ಗೆ 11 ಗಂಟೆಗೆ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಕೌನ್ಸಿಲಿಂಗ್‍ಗೆ ಹಾಜರಾಗುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಕೋರಿದ್ದಾರೆ.