ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವೈದ್ಯಕೀಯ ವಿಜ್ಞಾನ ಸಂಸ್ಥೆ, ಬೋಧಕ ಆಸ್ಪತ್ರೆ, ಜಿಲ್ಲಾ ಕಾನೂನು ಮತ್ತು ಸೇವಾ ಪ್ರಾಧಿಕಾರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಫ್.ಎಂ.ಕೆ.ಎಂ.ಸಿ. ಕಾಲೇಜು, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರ, ಸರ್ಕಾರಿ ಪದವಿ ಪೂರ್ವ ಕಾಲೇಜು, ಸ್ವಯಂ ಸೇವಾ ಸಂಸ್ಥೆಗಳು, ರೋಟರಿ ಕ್ಲಬ್ ಮತ್ತು ನೆಹರು ಯುವ ಕೇಂದ್ರ ಹಾಗೂ ಮಡಿಕೇರಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳಿಗ್ಗೆ 11 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ “ನಾಳೆಯ ಸಾರ್ಥಕತೆಯ ಜೀವನಕ್ಕಾಗಿ ಕುಟುಂಬ ಕಲ್ಯಾಣ ಯೋಜನೆಯ ಬಳಕೆ” ಎಂಬ ಕಾರ್ಯಕ್ರಮ ನಡೆಯಲಿದೆ.

ಜಿ.ಪಂ.ಅಧ್ಯಕ್ಷ ಬಿ.ಎ.ಹರೀಶ್ ಉದ್ಘಾಟಿಸಲಿದ್ದಾರೆ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಜಿ.ಪಂ.ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ನೆಲ್ಲಚಂಡ ಕಿರಣ್ ಕಾರ್ಯಪ್ಪ, ಮಡಿಕೇರಿ ತಾ.ಪಂ.ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್, ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ, ಜಿ.ಪಂ.ಸಿಇಒ ಪ್ರಶಾಂತ್ ಕುಮಾರ್ ಮಿಶ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದ ಉಪ ನಿರ್ದೇಶಕರು ಹಾಗೂ ಜಿಲ್ಲಾ ನೋಡಲ್ ಅಧಿಕಾರಿ ಡಾ.ರಮೇಶ್ ತಿರುಮಲೇಶ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ-ಬೋಧಕ ಆಸ್ಪತ್ರೆಯ ಡೀನ್ ಹಾಗೂ ನಿರ್ದೇಶಕÀ ಡಾ.ಸಿ.ಕಾರ್ಯಪ್ಪ, ಜಿಲ್ಲಾ ಶಸ್ತ್ರ ಚಿಕಿತ್ಸಕÀ ಡಾ.ಜಗದೀಶ್ ಕೆ., ಕಿ.ಮ.ಆ.ಸ. ತರಬೇತಿ ಕೇಂದ್ರದ ಪ್ರಾಂಶುಪಾಲ ಡಾ.ಪಾಂಡುರಂಗ ವಿಜಯ, ಇತರರು ಪಾಲ್ಗೊಳ್ಳಲಿದ್ದಾರೆ.