ಸೋಮವಾರಪೇಟೆ, ಜು. 10: ಇಲ್ಲಿನ ಸಂತ ಜೋಸೆಫರ ಪದವಿ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಸ್ವಾಗತ ಕಾರ್ಯಕ್ರಮ ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಿತು.
ವಿದ್ಯಾಸಂಸ್ಥೆಯ ಸಂಚಾಲಕರಾದ ಫಾದರ್ ರಾಯಪ್ಪ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ವಿದ್ಯಾರ್ಥಿ ಜೀವನವು ಮಹತ್ತರವಾದ ಘಟ್ಟವಾಗಿದ್ದು, ಪ್ರತಿಯೋರ್ವ ವಿದ್ಯಾರ್ಥಿಯೂ ಜೀವನದಲ್ಲಿ ಶಿಸ್ತು ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕೆಂದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಲೇಜಿನ ಪ್ರಾಂಶುಪಾಲ ಟೆನ್ನಿಕುರಿಯನ್ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಸಮಯಕ್ಕೆ ಆದ್ಯತೆ ನೀಡಬೇಕು ಎಂದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು. ಫ್ಲೇವಿಯಾ ಕಾರ್ಯಕ್ರಮ ನಿರ್ವಹಿಸಿದರು.